ಡಿಎಂಎಸ್ ಕಂಪನಿ ವಿರುದ್ಧ ಚಾರ್ಜ್ಶೀಟ್ ಸಲ್ಲಿಕೆ
ಬಳ್ಳಾರಿ: ಅಕ್ರಮ ಗಣಿಗಾರಿಕೆ ಆರೋಪ ಎದುರಿಸುತ್ತಿರುವ ಡೆಕ್ಕನ್ ಮೈನಿಂಗ್ ಸಿಂಡಿಕೇಟ್ (ಡಿಎಂಎಸ್)ಗೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು 20 ಪುಟಗಳ ದೋಷಾರೋಪಣ ಪಟ್ಟಿಯನ್ನು ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.
ಆಗಸ್ಟ್ನಲ್ಲಿ ಸಲ್ಲಿಸಿರುವ ಚಾರ್ಜ್ಶೀಟ್ನಲ್ಲಿ ಏಳು ಜನ ಆರೋಪಿಗಳನ್ನು ಗುರುತಿಸಿದ್ದು ಈಗಾಗಲೇ ಅವರೆಲ್ಲರನ್ನೂ ಬಂಧಿಸಲಾಗಿದೆ. ಡಿಎಂಎಸ್ ಕಂಪನಿ ಮಾಲೀಕ ರಾಜೇಂದ್ರಕುಮಾರ್ ಜೈನ್, ಸಿಇಒ ರಿತೇಶಚಂದ್ರ ಜೈನ್, ನಿವೃತ್ತ ಐಎಎಸ್ ಅಧಿಕಾರಿ ಶಮೀಮ್ ಭಾನು, ಎನ್. ವಿಶ್ವನಾಥ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ ಎಸ್.ಪಿ. ರಾಜು, ಇನ್ಸ್ಪೆಕ್ಟರ್ ರಮಾನಾಥ ವೈ. ಹುಲ್ಲೂರು ಬಂಧಿತರು.
104 ಸಾಕ್ಷಿಗಳ ವಿಚಾರಣೆ ನಡೆಸಲಾಗಿದ್ದು, 86 ದಾಖಲೆಗಳನ್ನು ಸಂಗ್ರಹ ಮಾಡಲಾಗಿದೆ. ಡಿಎಂಎಸ್ ಕಂಪನಿ 30 ವರ್ಷಗಳಿಂದಲೂ ಗಣಿಗಾರಿಕೆ ವ್ಯವಹಾರದಲ್ಲಿ ತೊಡಗಿಸಿಕೊಂಡಿದೆ. ಮೋಸ, ಅದಿರು ಕಳ್ಳತನ, ಅತಿಕ್ರಮಣ, ಗಡಿಗಳ ಬದಲಾವಣೆ ಮತ್ತಿತರ ಆರೋಪಗಳು ಡಿಎಂಎಸ್ ಕಂಪನಿ ಮೇಲಿದೆ. ಸುಮಾರು 1232.39 ಕೋಟಿ ವ್ಯವಹಾರ ನಡೆದಿದೆ ಎಂದು ಚಾಜ್ಶೀಟ್ನಲ್ಲಿ ಉಲ್ಲೇಖಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

