ಸಂಭ್ರಮದ ಗಣೇಶ ಚತುರ್ಥಿ
ಕನ್ನಡಪ್ರಭ ವಾರ್ತೆ, ಕೊಟ್ಟೂರು, ಸೆ. 10
ಗಣೇಶ ಚತುರ್ಥಿ ನಿಮಿತ್ತ ಪಟ್ಟಣದ ಹಿರೇಮಠದಲ್ಲಿ ಶ್ರದ್ಧಾ ಭಕ್ತಿಯಿಂದ ಗಣೇಶನನ್ನು ಪೂಜಿಸಲಾಯಿತು. ದೇವಸ್ಥಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಲೆಂದೆ ಪ್ರತ್ಯೇಕ ವೇದಿಕೆಯನ್ನು ಗುರುಕೊಟ್ಟೂರೇಶ್ವರ ಸ್ವಾಮಿಯ ಮೂರು ಮಠಗಳಾದ ಹಿರೇಮಠ, ಗಚ್ಚಿನಮಠ ಮತ್ತು ತೊಟ್ಟಿಲುಮಠಗಳಲ್ಲಿ ನಿರ್ಮಿಸಲಾದ ಸ್ಥಳದಲ್ಲಿ ಪ್ಲಾಸ್ಟರ್ ಆಫ್ ಪ್ಯಾರೀಸ್ ಸೋಂಕು ಇಲ್ಲದೆ ಮಣ್ಣಿನಿಂದಲೇ ಮಾಡಿದ ಗಣೇಶ ಮೂರ್ತಿಯನ್ನು ದೇವಸ್ಥಾನ ಬಳಗದವರು ಪೂಜಿಸಿದರು. ಅಸಂಖ್ಯಾತ ಭಕ್ತರು ಆಗಮಿಸಿ ದೇವಸ್ಥಾನದಲ್ಲಿನ ಗಣೇಶ ಮೂರ್ತಿಗೆ ನಮಸ್ಕರಿಸಿ ಭಕ್ತಿ ಸಮರ್ಪಿಸಿದರು.
ಎಪಿಎಂಸಿ ಗಣೇಶ: ಕಳೆದ 6-7 ವರ್ಷಗಳ ನಂತರ ಇದೇ ಮೊದಲ ಬಾರಿಗೆ ಕೊಟ್ಟೂರು ಎಪಿಎಂಸಿ ವರ್ತಕರು, ದಲಾಲರು ಮತ್ತು ಗುಮಾಸ್ತರು, ಹಮಾಲರು ಒಟ್ಟು ಗೂಡಿ ಬೃಹತ್ ಗಾತ್ರದ ಗಣೇಶ ಮೂರ್ತಿಯನ್ನು ಭವ್ಯ ವೇದಿಕೆಯಲ್ಲಿ ಪ್ರತಿಷ್ಠಾಪಿಸಿದರು. ಇದಕ್ಕೆಂದೆ ಎಪಿಎಂಸಿ ಬಳಗ 5 ದಿನಗಳ ಕಾಲ ಪಟ್ಟಣದಲ್ಲಿ ವಿವಿಧ ಬಗೆಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಸ್ಥಗಿತಗೊಂಡಿದ್ದ ಗಣೇಶೋತ್ಸವಕ್ಕೆ ಚಾಲನೆ ನೀಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

