ಇಸ್ಪೀಟ್ ಅಡ್ಡೆ ಮೇಲೆ ದಾಳಿ
ಬಳ್ಳಾರಿ: ಅಂದರ್ ಬಾಹರ್ ಇಸ್ಪೀಟ್ ಆಡುತ್ತಿದ್ದ ಅಡ್ಡೆ ಮೇಲೆ ಜಿಲ್ಲೆಯ ಹಗರಿಬೊಮ್ಮನಹಳ್ಳಿ ಠಾಣೆ ಪೊಲೀಸರು ದಾಳಿ ಮಾಡಿ, ರು. 10,570 ವಶಪಡಿಸಿಕೊಂಡಿರುವ ಘಟನೆ ಹಗರಿಬೊಮ್ಮನಹಳ್ಳಿ ಪಟ್ಟಣದ ನೆಹರು ನಗರದಲ್ಲಿ ನಡೆದಿದೆ. ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿ, ನೆಹರು ಕಾಲೋನಿಯ ಗಣೇಶ ಮೂರ್ತಿ ಕೂಡಿಸಿದ ಸಮೀಪದಲ್ಲಿ ಆಡುತ್ತಿದ್ದ ಆರೋಪಿತರಿಂದ ರು. 10,570 ವಶಪಡಿಸಿಕೊಂಡಿದ್ದಾರೆ. ಈ ಕುರಿತು ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಟ್ಕಾ: 7 ಜನರ ಬಂಧನ
ಬಳ್ಳಾರಿ: ಮುಂಡ್ರಿಗಿಯಿಂದ ಮಿಂಚೇರಿ ಗ್ರಾಮಕ್ಕೆ ಹೋಗುವ ರಸ್ತೆಯ ಎಚ್ಎಲ್ ಕಾಲುವೆ ಸಮೀಪದಲ್ಲಿ ನಡೆಯುತ್ತಿದ್ದ ಮಟ್ಕಾ ಜೂಜಾಟದ ಅಡ್ಡೆ ಮೇಲೆ ಗ್ರಾಮೀಣ ಠಾಣೆ ಪೊಲೀಸರು ದಾಳಿ ಮಾಡಿ, 7 ಜನರನ್ನು ಬಂಧಿಸಿ, ಬಂಧಿತರಿಂದ ರು. 7940 ವಶಪಡಿಸಿಕೊಂಡಿದ್ದಾರೆ. ಬುಧವಾರ ಸಂಜೆ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ಮಾಡಿ ಸುರೇಶ್ ರೆಡ್ಡಿ ಸೇರಿದಂತೆ 7 ಜನರನ್ನು ಬಂಧಿಸಿದ್ದಾರೆ. ಈ ಕುರಿತು ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

