ಬಳ್ಳಾರಿ

ಬಳ್ಳಾರಿ: ಇಂದು ಉದ್ಯೋಗ ಮೇಳ

Published On :

ಬಳ್ಳಾರಿ: ಕೌಶಲ್ಯ ಆಯೋಗ, ಉದ್ಯೋಗ ಮತ್ತು ತರಬೇತಿ ಇಲಾಖೆ, ಕರ್ನಾಟಕ ವೃತ್ತಿ ತರಬೇತಿ ಮತ್ತು ಕೌಶಲ್ಯ ಅಭಿವೃದ್ಧಿ ನಿಗಮ ನಿಯಮಿತ, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಇವರ ವತಿಯಿಂದ ಸೆ. 13ರಂದು ಬೆಳಗ್ಗೆ 10 ಗಂಟೆಯಿಂದ 2 ಗಂಟೆ ವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಜಿಲ್ಲಾ ಮಟ್ಟದ ಮಿನಿ ಉದ್ಯೋಗ ಮೇಳವನ್ನು ಆಯೋಜಿಸಿದೆ. ಈ ಮೇಳದಲ್ಲಿ ಐಎನ್‌ಜಿ ವೈಶ್ಯ ಬ್ಯಾಂಕ್, ರಿಲಯನ್ಸ್ ಇನ್ಶೂರೆನ್ಸ್, ಕಾರ್ಶಕ್ ಬಯೋಪ್ಲಾಂಟೆಕ್, ಗುರುಕುಲ್ ಕಾನ್‌ಸೆಪ್ಟ್ ಸ್ಕೂಲ್, ಗ್ರೀನ್‌ಗೋಲ್ಡ್ ಸೆಕ್ಯುರಿಟೀಸ್ ಉದ್ಯೋಗದಾತರು ಪಾಲ್ಗೊಳ್ಳಲಿದ್ದಾರೆ. ಅಭ್ಯರ್ಥಿಗಳು 7, 8, 9ನೇ ತರಗತಿ ಹಾಗೂ ಎಸ್ಸೆಸ್ಸೆಲ್ಸಿ ಪಾಸಾದ, ಬಿಕಾಂ, ಬಿಬಿಎಂ, ಬಿಎಸ್ಸಿ ಬಯಾಲಜಿ, ಬಿಎಸ್ಸಿ ಮ್ಯಾಥ್ಸ್ ಉತ್ತೀರ್ಣರಾಗಿರಬೇಕು. ಆಸಕ್ತರು ತಮ್ಮ ವಿದ್ಯಾರ್ಹತೆ ಪ್ರಮಾಣ ಪತ್ರ ಹಾಗೂ ಸ್ವವಿವರದೊಂದಿಗೆ ಮೇಳದಲ್ಲಿ ಭಾಗವಹಿಸಬಹುದು. ಹೆಚ್ಚಿನ ಮಾಹಿತಿಗಾಗಿ ಮೊ.ಸಂ-9036422052, 9844444958ನ್ನು ಸಂಪರ್ಕಿಸಬೇಕು ಎಂದು ಜಿಲ್ಲಾ ಉದ್ಯೋಗಾಧಿಕಾರಿ ಪಿ.ಎಸ್.  ಹಟ್ಟೆಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾಮಗಾರಿ ಪರಿಶೀಲನೆ
ಬಳ್ಳಾರಿ: ನಗರದ ಜಿಲ್ಲಾ ಪಂಚಾಯ್ತಿ ಕಚೇರಿ ಆವರಣದಲ್ಲಿ ನೂತನವಾಗಿ ನಿರ್ಮಿಸುತ್ತಿರುವ ಜಿಪಂ ಹಿರಿಯ ಅಧಿಕಾರಿಗಳ ವಸತಿ ಗೃಹಗಳ ಕಾಮಗಾರಿಯನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪ್ರಧಾನ ಕಾರ್ಯದರ್ಶಿ ವಿಜಯಭಾಸ್ಕರ್ ಗುರುವಾರ ಪರಿಶೀಲಿಸಿದರು. ಅನಂತರ ಮಾತನಾಡಿದ ಅವರು, ಎಲ್ಲ ಸಿಬ್ಬಂದಿ ವರ್ಗದವರಿಗೆ ಅನುಕೂಲವಾಗುವಂತೆ 3 ಅಂತಸ್ತುಗಳ ಕಟ್ಟಡಗಳನ್ನು ನಿರ್ಮಿಸಬೇಕೆಂದು ಸೂಚಿಸಿದರು. ಜಿಪಂ ಸಿಇಒ ಮಂಜುನಾಥ ನಾಯಕ್, ಕರ್ನಾಟಕ ರಾಜ್ಯ ಮೂಲ ಸೌಕರ್ಯಗಳ ಅಭಿವೃದ್ಧಿ ನಿಗಮದ ಉಪ ನಿರ್ದೇಶಕ ಲಿಂಗರಾಜ್, ಸಹಾಯಕ ನಿರ್ದೇಶಕ ಅಶ್ವತ್ಥ ನಾರಾಯಣ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.