ಬಳ್ಳಾರಿ

2014ರಿಂದ ಎಲ್‌ಪಿಜಿ ಸಹಾಯಧನ ವರ್ಗಾವಣೆ

Published On :

ಬಳ್ಳಾರಿ: ಕೇಂದ್ರ ಸರ್ಕಾರ ಅಡುಗೆ ಅನಿಲದ ಸಹಾಯಧನದ ನೇರ ವರ್ಗಾವಣೆ ಯೋಜನೆಯನ್ನು ಈಗಾಗಲೇ ದೇಶದ 20 ಜಿಲ್ಲೆಗಳಲ್ಲಿ ಜಾರಿಗೊಳಿಸಿದೆ. ಇನ್ನೂ 269 ಜಿಲ್ಲೆಗಳಲ್ಲಿ ಜಾರಿಗೆ ತರಲು ನಿರ್ಧರಿಸಿದೆ. ಈ 269 ಜಿಲ್ಲೆಗಳ ಪೈಕಿ ಬಳ್ಳಾರಿ ಜಿಲ್ಲೆಯೂ ಒಂದಾಗಿದ್ದು, 2014ರ ಜನವರಿ 1ರಿಂದ ಯೋಜನೆಯನ್ನು ಜಾರಿ ಮಾಡಲಾಗುವುದು ಎಂದು ಲೀಡ್ ಬ್ಯಾಂಕ್ ಮುಖ್ಯ ವ್ಯವಸ್ಥಾಪಕ ಎಸ್.ಎಂ. ಗೋರೆಬಾಳ ತಿಳಿಸಿದ್ದಾರೆ.
ಎಲ್‌ಪಿಜಿ ಗ್ಯಾಸ್ ಸಂಪರ್ಕ ಹೊಂದಿರುವ ಜಿಲ್ಲೆಯ ಎಲ್ಲ ಗ್ರಾಹಕರು ಆಧಾರ್ ಸಂಖ್ಯೆ ಜೋಡಣೆ (ಸಿಡ್) ಮಾಡಿದ ವಾಣಿಜ್ಯ ಅಥವಾ ಗ್ರಾಮೀಣ ಬ್ಯಾಂಕ್ ಉಳಿತಾಯ ಖಾತೆಗಳನ್ನು ಹೊಂದಿರಬೇಕು. ಈಗಾಗಲೇ ಬ್ಯಾಂಕ್ ಖಾತೆ ಹೊಂದಿರುವ ಗ್ರಾಹಕರು ತಮ್ಮ ಬ್ಯಾಂಕಿನ ಉಳಿತಾಯ ಖಾತೆಗೆ ಆಧಾರ್ ಸಂಖ್ಯೆ ಜೋಡಣೆ ಮಾಡಿಸಬೇಕು. ಇಲ್ಲಿವರೆಗೆ ಬ್ಯಾಂಕ್ ಖಾತೆ ಹೊಂದಿರದ ಗ್ರಾಹಕರು ತಮ್ಮ ಸೇವಾ ಕ್ಷೇತ್ರದ ಬ್ಯಾಂಕ್ ಶಾಖೆಗಳಲ್ಲಿ ಉಳಿತಾಯ ಖಾತೆ ತೆರೆದು ಆಧಾರ್ ಸಂಖ್ಯೆಯನ್ನು ತಮ್ಮ ಖಾತೆಗೆ ಜೋಡಿಸಬೇಕು ಎಂದು ತಿಳಿಸಿದ್ದಾರೆ.
ಖಾತೆಗೆ ನೇರ ಜಮಾ: ಎಲ್‌ಪಿಜಿ ಸಹಾಯ ಧನದ ನೇರ ವರ್ಗಾವಣೆ ಯೋಜನೆಯಡಿ ಎಲ್‌ಪಿಜಿ ಸಂಪರ್ಕ ಇರುವ ಗ್ರಾಹಕರು ಪ್ರತಿ ಸಿಲಿಂಡರ್‌ಗೆ ಸಿಗುವ  ಸರ್ಕಾರದ ಸಹಾಯಧನವನ್ನು ಅವರ ಆಧಾರ್ ಸಂಖ್ಯೆ ಜೋಡಣೆ (ಸಿಡ್) ಮಾಡಿದ ಬ್ಯಾಂಕಿನ ಉಳಿತಾಯ ಖಾತೆಗೆ ನೇರ ಜಮಾ ಮಾಡಲಾಗುವುದು.
ಎಲ್ಲ ಎಲ್‌ಪಿಜಿ ಗ್ರಾಹಕರು ತಮ್ಮ ಗ್ಯಾಸ್ ಕಂಪನಿಯ ಏಜೆನ್ಸಿಗಳಿಗೆ ತಾವು ಉಳಿತಾಯ ಖಾತೆ ಹೊಂದಿದ ಬ್ಯಾಂಕಿನ ಹೆಸರು, ಶಾಖೆ, ಉಳಿತಾಯ ಖಾತೆ ಸಂಖ್ಯೆ, ಐಎಫ್‌ಎಸ್‌ಸಿ ಕೋಡ್, ಆಧಾರ್ ಸಂಖ್ಯೆ ಮತ್ತು ದೂರವಾಣಿ, ಮೊಬೈಲ್ ಸಂಖ್ಯೆಗಳ ಮಾಹಿತಿಯನ್ನು ಕೂಡಲೇ ನೀಡಿ ಕೇಂದ್ರ ಸರ್ಕಾರದ ಈ ಯೋಜನೆಯ ಸಮರ್ಪಕ ಜಾರಿಗೆ ನೆರವಾಗಬೇಕು. ಸದರಿ ಮಾಹಿತಿಯನ್ನು ಒದಗಿಸದಿದ್ದಲ್ಲಿ ಗ್ರಾಹಕರಿಗೆ ದೊರೆಯಬೇಕಾದ ಎಲ್‌ಪಿಜಿ ಸಹಾಯಧನ ದೊರೆಯದೇ ಹೋಗಬಹುದು.
ಎಲ್‌ಪಿಜಿ ಗ್ರಾಹಕರು ಬ್ಯಾಂಕ್‌ಗಳಲ್ಲಿ ಉಳಿತಾಯ ಖಾತೆಗಳನ್ನು ತೆರೆಯಲು ಅಥವಾ ಆಧಾರ್ ನಂಬರ್ ಜೋಡಣೆ ಮಾಡಲು ಯಾವುದೇ ಸಮಸ್ಯೆ ಉಂಟಾದಲ್ಲಿ ಮೊ.ಸಂ.-9449860601ನ್ನು ಸಂಪರ್ಕಿಸಿ ಪರಿಹರಿಸಿಕೊಳ್ಳಬಹುದು ಎಂದು ಹೇಳಿದ್ದಾರೆ.
ಈ ನಿಟ್ಟಿನಲ್ಲಿ ಗ್ರಾಹಕರು, ಏಜೆನ್ಸಿಗಳು ಬ್ಯಾಂಕ್‌ಗಳಿಗೆ ಅಗತ್ಯ ಮಾಹಿತಿ ನೀಡಿ ಜಿಲ್ಲಾ ಲೀಡ್ ಬ್ಯಾಂಕಿನೊಂದಿಗೆ ಸಹಕರಿಸಬೇಕು ಅವರು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.