ಬಳ್ಳಾರಿ

ಶ್ರದ್ಧೆಯಿಂದ ಅಭ್ಯಾಸ ಮಾಡಿ: ಶ್ರೀನಿವಾಸ್

Published On :

ಹೊಸಪೇಟೆ: ಪ್ರತಿಯೊಬ್ಬ ವಿದ್ಯಾರ್ಥಿಗಳು ಶ್ರದ್ಧೆ ಮತ್ತು ನಿಷ್ಠೆಯಿಂದ ವಿದ್ಯಾಭ್ಯಾಸದಲ್ಲಿ ತೊಡಗಿಕೊಂಡಾಗ ಮಾತ್ರ ಯಶಸ್ಸು ಪಡೆಯಲು ಸಾಧ್ಯ ಎಂದು ರೋಟರಿ ಕ್ಲಬ್ ಅಧ್ಯಕ್ಷ ಎಚ್. ಶ್ರೀನಿವಾಸರಾವ್ ಹೇಳಿದರು.
ನಗರದ ರೋಟರಿ ಕ್ಲಬ್ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಮಹಾ ಉತ್ಸವದಲ್ಲಿ 10ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯುವ ವಿಧಾನದ ಬಗ್ಗೆ ನಡೆದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಸಂದರ್ಭದಲ್ಲಿ ಕಾಲಹರಣ ಮಾಡದೆ ನಿಷ್ಠೆ ಮತ್ತು ಪ್ರಾಮಾಣಿಕತೆಯಿಂದ ಸತತ ತೊಡಗಿಕೊಂಡಾಗ ಮಾತ್ರ ಉತ್ತಮ ಫಲಿತಾಂಶ ಬರಲು ಸಾಧ್ಯ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಪ್ರಯತ್ನಿಸಬೇಕು ಎಂದರು. ರೋಟರಿ ಕಾರ್ಯದರ್ಶಿ ಕೆ. ಸೈಯದ್ ಮಹಮ್ಮದ್, ಇನ್ನರ್ ವ್ಹೀಲ್ ಅಧ್ಯಕ್ಷೆ ಡಾ. ಮಾಧವಿ, ಇನ್ನರ್ ವ್ಹೀಲ್ ಕಾರ್ಯದರ್ಶಿ ಮೇಘನಾ, ಯುವ ಚಟುವಟಿಕೆಗಳ ಅಧ್ಯಕ್ಷ ಎ.ಎಸ್. ಕಿಶೋರ್, ಮುನಿವಾಸುದೇವರೆಡ್ಡಿ, ಡಾ. ಕೇದಾರೇಶ್ವರ, ಡಾ. ಪ್ರದೀಪ್, ಸುಬ್ರಮಣಿ ಇದ್ದರು.
--
ಶಾಲೆಗೆ ಪುಸ್ತಕ, ಉಪಕರಣ ದೇಣಿಗೆ

ಬಳ್ಳಾರಿ: ನೆರೆಯ ಆಂಧ್ರಪ್ರದೇಶದ ಕರ್ನೂಲು ಜಿಲ್ಲೆಯ ಆಲೂರು ತಾಲೂಕಿನ ಗಡಿಭಾಗದ ಗೂಳ್ಯಂ ಗ್ರಾಮದ ಕನ್ನಡ ಪ್ರಾಥಮಿಕ ಶಾಲೆಯ ಶತಮಾನೋತ್ಸವದ ಅಂಗವಾಗಿ ಹೊಳಲುಗುಂದಿಯ ಸೂಪರ್‌ಸ್ಟಾರ್ ಕೃಷ್ಣ-ಮಹೇಶ್‌ಬಾಬು ಅಭಿಮಾನಿಗಳ ಸಂಘದ ವತಿಯಿಂದ ಕನ್ನಡ ಪುಸ್ತಕಗಳು ಹಾಗೂ ವಿಜ್ಞಾನ ಉಪಕರಣಗಳನ್ನು ದೇಣಿಗೆ ನೀಡಲಾಯಿತು.
ಅಭಿಮಾನಿಗಳ ಸಂಘದ ಸಿ. ಹೇಮರೆಡ್ಡಿ, ಸಿ. ಚರಣ್ ಹಾಗೂ ಶ್ರೀಧರಗಡ್ಡೆ ಸಿದ್ದಬಸಪ್ಪ ಅವರು ಶಾಲೆಗೆ ರು. 6 ಸಾವಿರ ಮೌಲ್ಯದ ವಿವಿಧ ಕನ್ನಡ ಪುಸ್ತಕಗಳು, 3ಡಿ ಚಾರ್ಟ್‌ಗಳು, ವಿಜ್ಞಾನದ ಉಪಕರಣಗಳನ್ನು ದೇಣಿಗೆಯಾಗಿ ನೀಡಿ, ನಂತರ ಮಾತನಾಡಿದರು.
ಶಾಲೆಯ ಮುಖ್ಯೋಪಾಧ್ಯಾಯಿನಿ ಶಹಿದಾ ಬೇಗಂ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಗಡಿನಾಡ ಕನ್ನಡ ಯುವಕ ಸಂಘದ ಪದಾಧಿಕಾರಿಗಳು, ಗ್ರಾಪಂನ ರಾಜಶೇಖರಗೌಡ, ಹಾಲರವಿ ಮಂಡಲದ ವಿದ್ಯಾಧಿಕಾರಿಗಳು, ಶಾಲಾ ಶಿಕ್ಷಕರು ಹಾಗೂ ಇತರರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.