ಪತ್ತೆ ಇಲ್ಲ ದುಷ್ಟರ ಸುಳಿವು
ಹಗರಿಬೊಮ್ಮನಹಳ್ಳಿ: ತಾಲೂಕಿನ ಜನತೆಯನ್ನು ಬೆಚ್ಚಿ ಬೀಳಿಸಿರುವ ನಕ್ರಾಳ ತಾಂಡಾದ ಹದಿನೈದು ವರ್ಷದ ಶಾಲಾ ಬಾಲಕಿ ಮೇಲಿನ ಸಾಮೂಹಿಕ ಅತ್ಯಚಾರ, ಕೊಲೆ ಮಾಡಿದ ದುಷ್ಕರ್ಮಿಗಳ ಕುರಿತು ಇನ್ನೂ ಸುಳಿವು ಪತ್ತೆಯಾಗಿಲ್ಲ.
ಈ ಮಧ್ಯೆ ದುಷ್ಕರ್ಮಿಗಳಿಂದ ಅತ್ಯಾಚಾರಕ್ಕೀಡಾಗಿ, ಕೊಲೆಯಾದ ಬಾಲಕಿಯ ಮರಣೋತ್ತರ ಪರೀಕ್ಷೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಕಂದಾಯ, ಪೊಲೀಸ್ ಅಧಿಕಾರಿಗಳ ಸಮಕ್ಷಮದಲ್ಲಿ ಭಾನುವಾರ ಬೆಳಗ್ಗೆ ನಡೆಯಿತು. ನಂತರ ಸ್ವಗ್ರಾಮದಲ್ಲಿ ಬಾಲಕಿಯ ಅಂತ್ಯಕ್ರಿಯೆ ಜರುಗಿತು. ಈ ಘಟನೆ ನಡೆದ ಬಳಿಕ ತಾಂಡದಲ್ಲಿ ಈಗ ನಿರವ ಮೌನ ಅವರಿಸಿದೆ. ಸಾಕಷ್ಟು ಪೊಲೀಸರು ತಾಂಡಾದಲ್ಲಿ ಬೀಡು ಬಿಟ್ಟಿದ್ದಾರೆ.
ಶನಿವಾರ ಜರುಗಿದ ಭೀಕರ ಘಟನೆ ಹೊರತುಪಡಿಸಿದರೆ ಇಲ್ಲಿಯವರೆಗೂ ಈ ತಾಂಡಾದಲ್ಲಿ ಈ ರೀತಿಯ ಯಾವುದೇ ಪೈಶಾಚಿಕ ಘಟನೆಗಳು ಜರುಗಿದ ಉದಾಹರಣೆಗಳಿಲ್ಲ. ಆದರೆ ಶನಿವಾರದ ಘಟನೆ ತಾಂಡಾದ ಜನತೆಯನ್ನು ದಿಗ್ಭ್ರಮೆಗೊಳಿಸಿದೆ.
ಹೂವಿನಹಡಗಲಿ ಡಿವೈಎಸ್ಪಿ ನಾಗರಾಜ ಮಾತನಾಡಿ, ಘಟನೆಗೆ ಸಂಭಂದಿಸಿದಂತೆ ಕೊಲೆಯಾದ ಬಾಲಕಿಯ ಪಾಲಕರು, ತಾಂಡಾದವರು ಸೇರಿದಂತೆ ಅಕ್ಕಪಕ್ಕದ ಹೊಲಗಳ ಜನರಿಂದ ಮಾಹಿತಿ ಪಡೆಯುತ್ತಿದ್ದು, ತನಿಖೆ ಪ್ರಗತಿಯಲ್ಲಿದೆ. ಅತಿ ಶೀಘ್ರದಲ್ಲೇ ದುಷ್ಕರ್ಮಿಗಳನ್ನು ಪತ್ತೆಹಚ್ಚುವುದಾಗಿ ವಿಶ್ವಾಸ ವ್ಯಕ್ತಪಡಿಸಿದರು.
ಇದೊಂದು ಅತ್ಯಂತ ಅಮಾನವೀಯ ಕೃತ್ಯವಾಗಿದ್ದು, ಜನತೆ ಪೊಲೀಸರಿಗೆ ಸರಿಯಾದ ಮಾಹಿತಿ, ಸುಳಿವು ನೀಡಲು ಹಿಂಜರಿಯಬಾರದು. ಅಗತ್ಯಬಿದ್ದರೆ ಮಾಹಿತಿ ನೀಡಿದವರ ಹೆಸರನ್ನು ಗೌಪ್ಯವಾಗಿಡುವುದಾಗಿ ಅವರು ಇದೇ ಸಂದರ್ಭದಲ್ಲಿ ತಿಳಿಸಿದರು. ಈ ನಡುವೆ ಘಟನೆ ನಡೆದ ಸ್ಥಳಕ್ಕೆ ಶ್ವಾನದಳ ಬಂದು ಪರಿಶೀಲನೆ ನಡೆಸಿ ಹೋಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

