ತಾಂತ್ರಿಕ, ಸಂವಹನ ಕೌಶಲ್ಯ ಮುಖ್ಯ: ಸುಬ್ರಮಣ್ಯಂ
ಬಳ್ಳಾರಿ: ಇಂದಿನ ಅತಿ ವೇಗದ ಬದಲಾವಣೆ ಹೊಂದುತ್ತಿರುವ ಜಗತ್ತಿನಲ್ಲಿ ಸಾಫ್ಟ್ವೇರ್ ಎಂಜಿನಿಯರ್ಗಳು ತಾಂತ್ರಿಕ ಕೌಶಲ್ಯದ ಜೊತೆಗೆ ಸಂವಹನ ಕೌಶಲ್ಯ ಬೆಳೆಸಿಕೊಳ್ಳುವುದು ಅತ್ಯಂತ ಅವಶ್ಯಕ ಎಂದು ಮೈಸೂರಿನ ಆರ್ಐಐಐಟಿ ಉಪಾಧ್ಯಕ್ಷ ಕೆ. ಸುಬ್ರಮಣ್ಯಂ ಅಭಿಪ್ರಾಯಪಟ್ಟರು.
ನಗರದ ರಾವ್ ಬಹುದ್ದೂರ್ ವೈ. ಮಹಾಬಲೇಶ್ವರಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಶನಿವಾರ ಕಾಲೇಜಿನ ಎಂಸಿಎ ವಿಭಾಗದಿಂದ ಆಯೋಜಿಸಿದ್ದ ಒಂದು ದಿನದ ವಿಚಾರ ಸಂಕಿರಣ ಹಾಗೂ ಕಾರ್ಯಾಗಾರ ಉದ್ಘಾಟಿಸಿ ನಂತರ ಅವರು ಮಾತನಾಡಿದರು.
ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಬಿ.ವಿ.ಬಸವರಾಜ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಾಫ್ಟ್ವೇರ್ ಎಂಜಿನಿಯರ್ಗಳಲ್ಲಿ ತಾಂತ್ರಿಕ ಕೌಶಲ್ಯ, ಸಂವಹನ ಕೌಶಲ್ಯದ ಜತೆ ಸ್ಪರ್ಧಾತ್ಮಕ ಗುಣ ಹಾಗೂ ಸಕಾರಾತ್ಮಕ ಚಿಂತನೆ ಹೊಂದಬೇಕು ಎಂದರು.
ಕಾಲೇಜಿನ ಪ್ರಾಚಾರ್ಯ ಡಾ.ಟಿ.ಹನುಮಂತರೆಡ್ಡಿ ಮಾತನಾಡಿದರು. ಈ ಸಂದರ್ಭ ವೀ.ವಿ ಸಂಘದ ಉಪಾಧ್ಯಕ್ಷ ಕೆ.ಎಂ. ಮಹೇಶ್ವರಸ್ವಾಮಿ, ಕಾರ್ಯದರ್ಶಿ ಎಚ್.ಎಂ. ಗುರುಸಿದ್ದಸ್ವಾಮಿ, ಸಹಕಾರ್ಯದರ್ಶಿ ಜೆ. ನೇಪಾಕ್ಷಪ್ಪ, ಖಜಾಂಚಿ ಸಂಗನಕಲ್ಲು ಹೀಮಂತರಾಜ್, ಕಾಲೇಜಿನ ಆಡಳಿತ ಮಂಡಳಿಯ ಸದಸ್ಯರುಗಳಾದ ಅಲ್ಲಂ ವಿನಾಯಕ, ಎಂ. ರಾಜೇಂದ್ರ ಕುಮಾರ ಹಾಗೂ ಎಲ್ಲಾ ವಿಭಾಗದ ಮುಖ್ಯಸ್ಥರುಗಳು ಇದ್ದರು. ಎಂಸಿಎ ವಿಭಾಗದ ಮುಖ್ಯಸ್ಥ ಕೆ. ರಾಘವೇಂದ್ರ ಪ್ರಸಾದ ಸ್ವಾಗತಿಸಿದರು. ಕೆ.ಬಿ. ಶಿವಾನಂದ ನಿರೂಪಿಸಿದರು. ಎ.ಟಿ. ಸತ್ಯನಾರಾಯಣ ರೆಡ್ಡಿ ವಂದಿಸಿದರು.
--
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

