ಕೊಲೆಗಾರರ ಬಂಧನಕ್ಕೆ ಜನವಾದಿ ಸಂಘಟನೆ ಆಗ್ರಹ
ಹಗರಿಬೊಮ್ಮನಹಳ್ಳಿ: ತಾಲೂಕಿನ ನಕ್ರಾಳ ತಾಂಡಾದ ಶಾಲಾ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ, ಕೊಲೆ ಮಾಡಿರುವ ದುಷ್ಟರನ್ನು ತಕ್ಷಣ ಪತ್ತೆ ಹಚ್ಚಿ ಬಂಧಿಸಬೇಕು. ಅಗತ್ಯಬಿದ್ದರೆ ಇಡೀ ಪ್ರಕರಣವನ್ನು ಸಿಓಡಿ ತನಿಖೆಗೆ ಒಪ್ಪಿಸುವಂತೆ ಆಗ್ರಹಿಸಿ ಸೋಮವಾರ ಪಟ್ಟಣದಲ್ಲಿ ಜನವಾದಿ ಮಹಿಳಾ ಸಂಘಟನೆ ಹಾಗೂ ಸಿಪಿಎಂ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಘಟನೆಯನ್ನು ತೀವ್ರವಾಗಿ ಖಂಡಿಸಿದರು.
ತಾಲೂಕಿನ ವಿವಿಧ ಭಾಗಗಳಿಂದ ಆಗಮಿಸಿದ್ದ ಕಾರ್ಯಕರ್ತರು ಪಟ್ಟಣದ ಈಶ್ವರ ದೇವಸ್ಥಾನದಿಂದ ತಾಲೂಕು ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು. ಸಾಮೂಹಿಕ ಅತ್ಯಾಚಾರಿಗಳನ್ನು ಕೂಡಲೆ ಬಂಧಿಸಿ, ಉಗ್ರ ಶಿಕ್ಷೆ ನೀಡಿ ಬಾಲಕಿಯ ಸಾವಿಗೆ ನ್ಯಾಯ ದೊರಕಿಸಿಕೊಡಬೇಕು. ತಾಲೂಕಿನಲ್ಲಿ ಇಂತಹ ಹೇಯಕೃತ್ಯಗಳಾಗದಂತೆ ಎಚ್ಚರ ವಹಿಸಿ ಎಂಬಿತ್ಯಾದಿ ಘೋಷಣೆಗಳನ್ನು ಕೂಗಿದರು.
ಜನವಾದಿ ಮಹಿಳಾ ಸಂಘಟನೆಯ ಬಿ. ಮಾಳಮ್ಮ ಮಾತನಾಡಿ, ಈ ಪ್ರಕರಣವನ್ನು ನಮ್ಮ ಸಂಘಟನೆ ತೀವ್ರವಾಗಿ ಖಂಡಿಸುತ್ತದೆ. ಸಾಮೂಹಿಕ ಅತ್ಯಾಚಾರಕ್ಕೀಡಾಗಿ, ಹತ್ಯೆಯಾಗಿರುವ ಬಾಲಕಿಯ ಕುಟುಂಬಕ್ಕೆ ನ್ಯಾಯ ಕಲ್ಪಿಸಿಕೊಡಲು ನಾವು ಎಂತಹ ಹೋರಾಟಕ್ಕೂ ಸಿದ್ಧ. ಪ್ರಕರಣ ಜರುಗಿ ಮೂರು ದಿನ ಕಳೆದರೂ ಕೂಡ ಇನ್ನೂ ದುಷ್ಕರ್ಮಿಗಳನ್ನು ಪತ್ತೆ ಹಚ್ಚುವಲ್ಲಿ ಪೊಲೀಸರು ವಿಫಲರಾಗಿದ್ದಾರೆ. ಕೂಡಲೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ತಂಡಗಳನ್ನು ರಚಿಸಿ ದುಷ್ಕರ್ಮಿಗಳ ಪತ್ತೆ ಹಚ್ಚಿ ಬಂಧಿಸಬೇಕೆಂದು ಆಗ್ರಹಿಸಿದರು.
ಇಡೀ ಪ್ರಕರಣ ನೋಡಿದರೆ ಅತ್ಯಂತ ಜಟಿಲವಾಗಿ ಕಾಣುತ್ತಿದೆ. ಸ್ಥಳೀಯ ಪೊಲೀಸರು ಪತ್ತೆ ಕಾರ್ಯ ನಿರ್ವಹಿಸುವುದರ ಜತೆಗೆ ಪ್ರಕರಣಕ್ಕೆ ವೇಗ ಹೆಚ್ಚಿಸಲು ಪ್ರಕರಣವನ್ನು ಸಿಓಡಿ ತನಿಖೆಗೆ ಒಪ್ಪಿಸಬೇಕೆಂದು ಮಾಳಮ್ಮ ಸರ್ಕಾರವನ್ನು ಒತ್ತಾಯಿಸಿದರು.
ಸಿಪಿಎಂ ಪಕ್ಷದ ಮುಖಂಡ ಎಸ್. ಜಗನ್ನಾಥ, ಕೊಟಗಿ ಮಲ್ಲಿಕಾರ್ಜುನ, ಕೈಲಾಶ, ತಿಂದಪ್ಪ, ರಂಗಪ್ಪ ಹಲವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

