ಬಳ್ಳಾರಿ

ಹೈಕ ವಿಮೋಚನಾ ದಿನಾಚರಣೆ ಇಂದು

Published On :

ಬಳ್ಳಾರಿ: ಜಿಲ್ಲಾಡಳಿತದ ವತಿಯಿಂದ ಸೆ. 17ರಂದು ಬೆಳಗ್ಗೆ 10.30 ಗಂಟೆಗೆ ಹೈದರಾಬಾದ್ ಕರ್ನಾಟಕ ವಿಮೋಚನಾ ದಿನಾಚರಣೆಯನ್ನು ನಗರದ ಡಾ. ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ.
ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪಿ.ಟಿ. ಪರಮೇಶ್ವರ ನಾಯ್ಕ ಧ್ವಜಾರೋಹಣ ನೆರವೇರಿಸಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಶಾಸಕ ಅನಿಲ್ ಲಾಡ್ ಅಧ್ಯಕ್ಷತೆ ವಹಿಸಲಿದ್ದು, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಬೆಂಡಿಗೇರಿ ಶೋಭಾ, ಸಂಸದೆ ಜೆ. ಶಾಂತಾ, ಕೊಪ್ಪಳ ಸಂಸದ ಶಿವರಾಮಗೌಡ, ಶಾಸಕರಾದ ಬಿ.  ಶ್ರೀರಾಮುಲು, ಆನಂದ್ ಸಿಂಗ್, ಟಿ.ಎಚ್. ಸುರೇಶ್‌ಬಾಬು, ಈ. ತುಕಾರಾಂ, ಬಿ. ನಾಗೇಂದ್ರ, ಭೀಮಾನಾಯ್ಕ, ಬಿ.ಎಂ. ನಾಗರಾಜ, ವಿಧಾನಪರಿಷತ್ ಸದಸ್ಯ ಮೃತ್ಯುಂಜಯ ಜಿನಗಾ, ಅಮರನಾಥ ಪಾಟೀಲ್ ಆಗಮಿಸಲಿದ್ದಾರೆ.
ಜಿಲ್ಲಾಧಿಕಾರಿ ಅಮ್ಲಾನ್ ಆದಿತ್ಯ ಬಿಸ್ವಾಸ್, ಜಿಪಂ ಸಿಇಒ ಮಂಜುನಾಥ್ ನಾಯಕ್, ಎಸ್ಪಿ ಡಾ. ಚೇತನ್‌ಸಿಂಗ್ ರಾಥೋಡ್ ಮತ್ತಿತರರು ಉಪಸ್ಥಿತರಿರುತ್ತಾರೆ. ದಿನಾಚರಣೆ ಅಂಗವಾಗಿ ದೇಶಭಕ್ತಿ ಗೀತೆ ಗಾಯನ, ಸಮೂಹ ನೃತ್ಯ, ಜಾನಪದ ನೃತ್ಯ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.