ಬಳ್ಳಾರಿ

ಸರ್ಕಾರಿ ನೌಕರರ ರಕ್ಷಣೆಗೆ ಆಗ್ರಹ

Published On :

ಹೊಸಪೇಟೆ: ಸರ್ಕಾರಿ ನೌಕರರ ಮೇಲೆ ನಡೆಯುತ್ತಿರುವ ಮಾನಸಿಕ ಮತ್ತು ದೈಹಿಕ ಹಲ್ಲೆ ಖಂಡಿಸಿ ಮತ್ತು ಸರ್ಕಾರಿ ನೌಕರರಿಗೆ ಜೀವ ರಕ್ಷಣೆ ನೀಡುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಹಾಗೂ ಸರ್ಕಾರಿ ನೌಕರರ ಒಕ್ಕೂಟದ ನೇತೃತ್ವದಲ್ಲಿ ತಾಲೂಕಿನ ವಿವಿಧ ಇಲಾಖೆ ಸರ್ಕಾರಿ ನೌಕರರು ನಗರದಲ್ಲಿ ಪ್ರತಿಭಟನೆ ನಡೆಸಿದರು.
ಸರ್ಕಾರಿ ನೌಕರರ ಒಕ್ಕೂಟದ ಮುಖಂಡ ಎಂ.  ಜಂಬಯ್ಯ ನಾಯಕ ಮಾತನಾಡಿ, ರಾಜ್ಯದಲ್ಲಿ ಗ್ರಾಮೀಣಾಭಿವೃದ್ಧ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸರ್ಕಾರಿ ನೌಕರರು ಹಾಗೂ ಸಿಬ್ಬಂದಿ ಮೇಲೆ ವಿನಾ ಕಾರಣ ಹಲ್ಲೆ ಮತ್ತು ದಾಳಿ ನಡೆಯುತ್ತಿವೆ. ಕಿರುಕುಳ ನೀಡುತ್ತಾ, ದೌರ್ಜನ್ಯಗಳು ನಡೆಯುತ್ತಿರುವುದರಿಂದ ಕೆಲ ಸರ್ಕಾರಿ ನೌಕರರು ಆತ್ಮಹತ್ಯೆಗೆ ಶರಣಾಗುತ್ತಿರುವ ಘಟನೆಗಳು ನಡೆಯುತ್ತಿವೆ. ಸರ್ಕಾರಿ ನೌಕರರ ಮೇಲೆ ಹಲ್ಲೆ ನಡೆಸುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಸಂಘದ ಮುಖಂಡರಾದ ಕೆ.ಎಂ. ಗುರುಬಸವರಾಜ,  ಬಿ.ಸಿ. ಸುರೇಶ, ಟಿ.ಕೆ. ವೆಂಕಟೇಶ್ವರ ರೆಡ್ಡಿ, ರಾಘವೇಂದ್ರ ಹೆಗಡಿಯಾಳ್, ಎನ್.ಎಸ್. ರೇವಣಸಿದ್ದಪ್ಪ, ತಾಯಪ್ಪ ನಾಯಕ, ನಾಗರಾಜ್ ಪತ್ತಾರ, ಚಂದ್ರಪ್ಪ, ರಾಘವೇಂದ್ರರಾವ್, ಬಸವರಾಜ್, ಕುಬೇರಾಚಾರ್ಯ, ದಿವಾಕರ್, ಸಿದ್ದಪ್ಪ, ಉಮೇಶ್, ನಾಗರಾಜ್ ಹವಾಲ್ದಾರ್ ಸೇರಿದಂತೆ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯಿತ್ ರಾಜ್ ಇಲಾಖೆಯ ನೌಕರರ ಸಂಘ, ಶಿಕ್ಷಕರ ಸಂಘ, ಎಂಜಿನಿಯರ್, ಪಿಡಿಒಗಳು, ಗ್ರಾಪಂ ಕಾರ್ಯದರ್ಶಿಗಳು ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.