ಬಳ್ಳಾರಿ

ಬಸ್ ಸೌಲಭ್ಯಕ್ಕಾಗಿ ಎಐಡಿಎಸ್‌ಒ ಪ್ರತಿಭಟನೆ

Published On :

ಬಳ್ಳಾರಿ: ಜಿಲ್ಲೆಯ ಸಿರುಗುಪ್ಪ ತಾಲೂಕಿನ ಸಿರಿಗೇರಿಯಿಂದ ಬಳ್ಳಾರಿಗೆ ನಿತ್ಯವೂ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ಸಮಯದಲ್ಲಿ ಬಸ್ ಸೌಲಭ್ಯ ಕಲ್ಪಿಸುವಂತೆ ಎಐಡಿಎಸ್‌ಒ ನೇತೃತ್ವದಲ್ಲಿ ವಿದ್ಯಾರ್ಥಿಗಳು ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.
ಎಐಡಿಎಸ್‌ಒ ಗೋವಿಂದ ಪ್ರತಿಭಟನೆಯ ನೇತೃತ್ವ ವಹಿಸಿ ಮಾತನಾಡಿ, ಸಿರಿಗೇರಿ ಗ್ರಾಮದಿಂದ ಬಳ್ಳಾರಿ ನಗರಕ್ಕೆ ನಿತ್ಯ ನೂರಾರು ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕೆಂದು ಬರುತ್ತಿದ್ದಾರೆ. ಈ ವಿದ್ಯಾರ್ಥಿಗಳ ಶಾಲಾ-ಕಾಲೇಜುಗಳ ಸಮಯಕ್ಕೆ ಸರಿಯಾಗಿ ಬಸ್‌ಗಳು ಬಾರದೇ ಇರುವುದರಿಂದ ತೀವ್ರ ಸಮಸ್ಯೆ ಉಂಟಾಗಿದೆ. ಆದ್ದರಿಂದ ವಿದ್ಯಾರ್ಥಿಗಳಿಗೆ, ಗ್ರಾಮಸ್ಥರಿಗೆ ಅನುಕೂಲವಾದ ಸಮಯದಲ್ಲಿ ಬಸ್‌ಗಳ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಆಗ್ರಹಿಸಿದರು.
ಬೆಳಗ್ಗೆ, ಮಧ್ಯಾಹ್ನದ ವೇಳೆಯಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಬಸ್ ಸಂಚಾರ ಕಲ್ಪಿಸುವಂತೆ ಪ್ರತಿಭಟನಾಕಾರರು ಒತ್ತಾಯಿಸಿದರು.
ನಗರದ ಮುನ್ಸಿಪಲ್ ಕಾಲೇಜಿನಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆಯು ರಾಯಲ್ ವೃತ್ತದ ಮೂಲಕ ವಿಭಾಗೀಯ ನಿಯಂತ್ರಣಾಧಿಕಾರಿಗಳ ಕಚೇರಿಗೆ ತೆರಳಿ ಕೆಎಸ್‌ಆರ್‌ಟಿಸಿಯ ವಿಭಾಗಿಯ ಸಂಚಾಲನ ಅಧಿಕಾರಿ ಅಂಜಿನಪ್ಪರಿಗೆ ಮನವಿ ಸಲ್ಲಿಸಿದರು.
ಎಐಡಿಎಎಸ್‌ಒ ಕಾರ್ಯದರ್ಶಿ ಜಿ.ಸುರೇಶ್, ಸಮಿತಿಯ ಸದಸ್ಯರಾದ ರಫೀಕ್, ಪ್ರಕಾಶ್, ಹಾಗೂ ವಿದ್ಯಾರ್ಥಿಗಳಾದ ನೂರ್ ಬಾಷಾ, ರಾಘವೇಂದ್ರ, ರಮೇಶ್ ಆರ್. ವಿರೂಪಾಕ್ಷ, ದಾಸಪುರ ರಮೇಶ್, ಹೊನ್ನೂರುಸಾಬ್, ನೂರಾರು ವಿದ್ಯಾರ್ಥಿ-ವಿದ್ಯಾರ್ಥಿನಿಯರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.