ಬಳ್ಳಾರಿ

ಬಸವಣ್ಣ ಕಾಲುವೆ ಸ್ವಚ್ಛಗೊಳಿಸಿ: ವೆಂಕಟೇಶ

Published On :

ಕನ್ನಡಪ್ರಭ ವಾರ್ತೆ, ಹೊಸಪೇಟೆ, ಸೆ. 21
ನಗರದ ಬಸವಣ್ಣ ಕಾಲುವೆಯ ಅಕ್ಕಪಕ್ಕದ ರಸ್ತೆ ದುರಸ್ತಿಗೊಳಿಸಬೇಕು ಮತ್ತು ಕಾಲುವೆಯಲ್ಲಿರುವ ಹಸಿರು ಎಲೆಯ ಹುಲ್ಲನ್ನು ತೆಗೆದು ಕಾಲುವೆ ಸ್ವಚ್ಛಗೊಳಿಸಬೇಕು. ಇಲ್ಲವಾದಲ್ಲಿ ಮುನಿರಾಬಾದ್‌ನ ನೀರಾವರಿ ಇಲಾಖೆಯ ಕಚೇರಿಗೆ ಬೀಗ ಹಾಕಿ ಪ್ರತಿಭಟನೆ ನಡೆಸಲಾಗುವುದು ಎಂದು ರಾಜ್ಯ ರೈತ ಸಂಘದ ನಗರ ಘಟಕದ ಅಧ್ಯಕ್ಷ ಟಿ. ವೆಂಕಟೇಶ್ ಹೇಳಿದರು.
ನಗರದ ಪ್ರವಾಸಿ ಮಂದಿರದಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ನಗರದಲ್ಲಿ ಹಾದು ಹೋಗಿರುವ ಬಸವಣ್ಣ ಕಾಲುವೆಯನ್ನು ನಾಲ್ಕು ವರ್ಷಗಳಿಂದ ದುರಸ್ತಿಗೊಳಿಸಿಲ್ಲ ಮತ್ತು ಕಾಲುವೆಯಲ್ಲಿ ಬೆಳೆದಿರುವ ಹುಲ್ಲು ಮತ್ತು ಮುಳ್ಳು ಗಿಡಗಳನ್ನು ಸ್ವಚ್ಛಗೊಳಿಸಿಲ್ಲ. ಕಾಲುವೆಯಲ್ಲಿ ಹುಲ್ಲು ಮತ್ತು ಮುಳ್ಳು ಗಿಡಗಳು ಬೆಳೆದು ನಿಂತಿರುವುದರಿಂದ ನೀರು ಕಾಲುವೆಯಲ್ಲಿ ಸರಾಗವಾಗಿ ಹರಿದು ಹೋಗುತ್ತಿಲ್ಲ. ಬಸವಣ್ಣ ಕಾಲುವೆಯ 0 ಕಿ.ಮೀ.ಯಿಂದ 3.5 ಕಿ.ಮೀ. ವರೆಗೆ ಕಾಲುವೆಯ ಅಕ್ಕಪಕ್ಕದಲ್ಲಿರುವ ರಸ್ತೆ ದುರಸ್ತಿಗೊಳಿಸಬೇಕು. ಹಾಗೂ ಕಾಲುವೆಯಲ್ಲಿ ಬೆಳೆದು ನಿಂತಿರುವ ಹುಲ್ಲು ಸ್ವಚ್ಛಗೊಳಿಸಬೇಕು ಎಂದು ಶನಿವಾರ ಮುನಿರಾಬಾದ್‌ನ ನೀರಾವರಿ ಇಲಾಖೆಯ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲಾಗಿದೆ.
ಪ್ರತಿಭಟನೆ ಎಚ್ಚರಿಕೆ: 15 ದಿನಗಳ ಒಳಗಾಗಿ ಕಾಲುವೆ ಅಕ್ಕಪಕ್ಕದಲ್ಲಿರುವ ರಸ್ತೆ ದುರಸ್ತಿಗೊಳಿಸಬೇಕು ಮತ್ತು ಕಾಲುವೆಯಲ್ಲಿ ಬೆಳೆದು ನಿಂತಿರುವ ಹುಲ್ಲು ಮತ್ತು ಮುಳ್ಳುಗಿಡಗಳನ್ನು ಸ್ವಚ್ಛಗೊಳಿಸಬೇಕು. ಇಲ್ಲವಾದಲ್ಲಿ ನೀರಾವರಿ ಕಚೇರಿಗೆ ಬೀಗ ಹಾಕಿ ಪ್ರತಿಭಟನೆ ನಡೆಸಲಾಗುವುದು ಎಂದು ಅವರು ಎಚ್ಚರಿಸಿದರು.
ನಗರದ ರಾಯ, ಬಸವಣ್ಣ, ತುರ್ತು ಕಾಲುವೆಯ ಅಕ್ಕಪಕ್ಕದಲ್ಲಿರುವ ರಸ್ತೆಗಳನ್ನು ದುರಸ್ತಿಗೊಳಿಸಬೇಕು. ಕಾಲುವೆಯ ಪಕ್ಕದಲ್ಲಿರುವ ರಸ್ತೆಗಳು ತಗ್ಗು-ಗುಂಡಿಗಳಿಂದ ಕೂಡಿದ್ದು, ಈ ರಸ್ತೆಯಲ್ಲಿ ರೈತರು ಎತ್ತಿನ ಬಂಡಿ ಓಡಾಡುವುದು ಕಷ್ಟವಾಗಿದ್ದು, ಕಬ್ಬು ಕಟಾವು ಮಾಡಿಕೊಂಡು ಕಾಲುವೆ ಪಕ್ಕದಲ್ಲಿರುವ ರಸ್ತೆಯಲ್ಲಿ ಅನೇಕ ರೈತರು ಸಂಚಾರ ಮಾಡುತ್ತಿದ್ದಾರೆ. ಆದರೆ, ರಸ್ತೆ ದುರಸ್ತಿಗೊಳಿಸುವಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ತಕ್ಷಣವೇ ಕಾಲುವೆಯನ್ನು ಸ್ವಚ್ಛಗೊಳಿಸಬೇಕು ಮತ್ತು ಕಾಲುವೆ ಅಕ್ಕಪಕ್ಕದಲ್ಲಿರುವ ರಸ್ತೆಗಳನ್ನು ದುರಸ್ತಿಗೊಳಿಸಬೇಕು ಎಂದು ಒತ್ತಾಯಿಸಿದರು. ರಾಜ್ಯ ರೈತ ಸಂಘದ ತಾಲೂಕು ಅಧ್ಯಕ್ಷ ಜೆ. ಕಾರ್ತಿಕ್, ರೈತ ಸಂಘದ ಸ್ಥಳೀಯ ಮುಖಂಡರಾದ ಚನ್ನದೊರೆ, ರಾಮಕೃಷ್ಣ, ಮೇಘನಾಥ, ಅಂಬಣ್ಣ, ಮೂರ್ತಿ ಸೇರಿದಂತೆ ಇತರರು ಸುದ್ದಿಗೋಷ್ಠಿಯಲ್ಲಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.