ಆತ್ಮ ರಕ್ಷಣೆಗೆ ಕರಾಟೆ ಕಲಿಕೆ ಅಗತ್ಯ
ಕನ್ನಡಪ್ರಭ ವಾರ್ತೆ, ಬಳ್ಳಾರಿ, ಸೆ. 22
ಸಮಾಜದ ಆನೇಕ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳೆಯರು ಹಾಗೂ ಯುವತಿಯರು ಆತ್ಮ ರಕ್ಷಣೆಗೆ ಕರಾಟೆ ಕಲಿಯುವುದು ಪ್ರಸ್ತುತ ಅತ್ಯಗತ್ಯವಾಗಿದೆಂದು ಡಿವೈಎಸ್ಪಿ ಟಿ.ಎಸ್. ಮುರುಗಣ್ಣನವರ್ ಅಭಿಪ್ರಾಯಪಟ್ಟರು.
ಬಳ್ಳಾರಿಯ ಕೆಬಿಐ ವಿಜಯ್ಸ್ ಕರಾಟೆ ಬುಡಕಾನ್ ಇಂಟರ್‌ನ್ಯಾಷನಲ್ ಸಂಸ್ಥೆ ಹಾಗೂ ಜಿಲ್ಲಾ ಬ್ರಾಹ್ಮಣ ಸಂಘರ್ಷ ಸಮಿತಿ ಸಹಯೋಗದಲ್ಲಿ ನಗರದಲ್ಲಿ ಹಮ್ಮಿಕೊಂಡಿದ್ದ ಕರಾಟೆ ವಿವಿಧ ವಿಭಾಗಗಳಲ್ಲಿ ತರಬೇತಿ ಹೊಂದಿದ ಪಟುಗಳಿಗೆ ಪ್ರಮಾಣ ಪತ್ರ ವಿತರಿಸಿ ಮಾತನಾಡಿದರು.
ಆರೋಗ್ಯ ಪೂರ್ಣ ಜೀವನ ನಡೆಸಲು ಹಾಗೂ ಒತ್ತಡದಿಂದ ಹೊರಬರಲು ಯೋಗ, ಧ್ಯಾನ ಅಗತ್ಯವಾಗಿದೆ. ತಂದೆ, ತಾಯಿಗಳು ಮಕ್ಕಳಿಗೆ ತಪ್ಪದೇ ಕರಾಟೆ ಕಲೆಯನ್ನು ಕಲಿಯಲು ಅಗತ್ಯ ಪ್ರೋತ್ಸಾಹ, ಸಹಕಾರ ನೀಡಬೇಕು ಎಂದರು. ಅಧ್ಯಕ್ಷತೆ ವಹಿಸಿದ್ದ ಸಮಿತಿ ಅಧ್ಯಕ್ಷ ಡಾ. ರಾಧಾಕೃಷ್ಣ ಮಾತನಾಡಿ, ಸಮಿತಿಯಿಂದ ಈಗಾಗಲೇ ಆರೋಗ್ಯ ಶಿಬಿರ, ರಕ್ತದಾನ ಕಾರ್ಯಕ್ರಮ ಹಮ್ಮಿಕೊಂಡಿದ್ದು ಮುಂದಿನ ಗಾಂಧಿ ಜಯಂತಿ ದಿನದಂದು ಸಮಾಜದ ನಾನಾ ವರ್ಗದ ಕಡುಬಡ ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲವಾಗುವ ಯೋಜನೆಗಳನ್ನು ರೂಪಿಸಲಾಗುವುದು ಎಂದರು.
ವಿಜಯ್ಸ್ ಬುಡಕಾನ್ ಕರಾಟೆ ಸಂಸ್ಥೆಯಲ್ಲಿ ನಾನಾ ವಿಭಾಗಗಳಲ್ಲಿ ತರಬೇತಿ ಪಡೆದ 15ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಲಾಯಿತು.
ಸಮಿತಿ ಕಾರ್ಯದರ್ಶಿ ಕೆ.ಎಸ್. ಗುರುರಾಜ್, ಕರಾಟೆ ಮಾಸ್ಟರ್ ವಿಜಯ್ ವಿಠಲ್, ಮುಖಂಡರಾದ ವೇಣುಗೋಪಾಲ್, ಮಧುಸೂದನ್, ನಾಗರಾಜ್, ಮುರಳೀಧರ್ ಇತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

