ಸುದ್ದಿ ಸಂಕ್ಷೇಪ
ಸಂತೋಷ್‌ಕುಮಾರ್‌ಗೆ ಪಿಎಚ್‌ಡಿ ಪದವಿ
ಕೊಟ್ಟೂರು: ಪಟ್ಟಣದ ಕೊಟ್ಟೂರೇಶ್ವರ ಕಾಲೇಜಿನ ಇತಿಹಾಸ ಉಪನ್ಯಾಸಕ ಸಂತೋಷಕುಮಾರ ಎಚ್.ಬಿ. ಅವರಿಗೆ ಹಂಪಿ ಕನ್ನಡ ವಿಶ್ವವಿದ್ಯಾಲಯ ಪಿಎಚ್‌ಡಿ ಪದವಿ ನೀಡಿದೆ. ವಿಶ್ವವಿದ್ಯಾಲಯದ ಚರಿತ್ರೆ ವಿಭಾಗಕ್ಕೆ ಸಲ್ಲಿಸಿದ 'ಹೈದರಾಬಾದ್ ಕರ್ನಾಟಕದಲ್ಲಿ ಸಾಮಾಜಿಕ ಚಳವಳಿಗಳು (ಸಮಕಾಲೀನ ಹಿನ್ನೆಲೆಯ ಅಧ್ಯಯನ)' ಎಂಬ ಮಹಾಪ್ರಬಂಧವನ್ನು ಕನ್ನಡ ವಿಶ್ವವಿದ್ಯಾಲಯಕ್ಕೆ ಮಂಡಿಸಿದ್ದಾರೆ. ವಿ.ವಿ.ಯ ಚರಿತ್ರೆ ವಿಭಾಗದ ಸಹ ಪ್ರಾಧ್ಯಾಪಕ ಡಾ. ಚಿನ್ನಸ್ವಾಮಿ ಸೋಸಲೆಯವರ ಮಾರ್ಗದರ್ಶನದಲ್ಲಿ ಸಂತೋಷ್‌ಕುಮಾರ್ ಎಚ್.ಬಿ. ಈ ಮಹಾಪ್ರಬಂಧವನ್ನು ಸಿದ್ಧಪಡಿಸಿದ್ದಾರೆ.
ಥ್ರೋಬಾಲ್: ವಿಭಾಗ ಮಟ್ಟಕ್ಕೆ ಆಯ್ಕೆ
ಹೂವಿನಹಡಗಲಿ: ತಾಲೂಕಿನ ಹ್ಯಾರಡ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಥ್ರೋಬಾಲ್ ಪಂದ್ಯಾವಳಿಯಲ್ಲಿ ಜಿಲ್ಲಾ ಮಟ್ಟದಲ್ಲಿ ಜಯಗಳಿಸಿ, ವಿಭಾಗಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿಭಾಗ ಮಟ್ಟಕ್ಕೆ ಆಯ್ಕೆಯಾಗಲು ವಿದ್ಯಾರ್ಥಿಗಳಿಗೆ ಪ್ರೋತ್ಸಾಹಿಸಿದ ತಂಡದ ಮ್ಯಾನೇಜರ್ ಎಸ್. ಚಂದ್ರಪ್ಪ ಹಾಗೂ ಶಾಲಾ ದೈಹಿಕ ಶಿಕ್ಷಕ ಎಸ್.ಕೆ. ಚನ್ನಬಸಪ್ಪ ಹಾಗೂ ವಿದ್ಯಾರ್ಥಿಗಳಿಗೆ ಗ್ರಾಮದ ಮುಖಂಡರು, ಎಸ್‌ಡಿಎಂಸಿ ಅಧ್ಯಕ್ಷರು, ಸರ್ವ ಸದಸ್ಯರು ಶಾಲಾ ಮುಖ್ಯಗುರುಗಳು, ಶಿಕ್ಷಕವರ್ಗ, ಕ್ರೀಡಾಭಿಮಾನಿಗಳು ಅಭಿನಂದಿಸಿದ್ದಾರೆ.
ಹೈ-ಕ ದಿನಾಚರಣೆ
ಬಳ್ಳಾರಿ: ಜಿಲ್ಲಾ ಹಾಗೂ ತಾಲೂಕು ಗೃಹರಕ್ಷಕ ದಳದ ವತಿಯಿಂದ ಜಿಲ್ಲಾ ಗೃಹರಕ್ಷಕ ದಳದ ಕಚೇರಿಯಲ್ಲಿ ಹೈದರಾಬಾದ್ ಕರ್ನಾಟಕ ದಿನವನ್ನು ಬುಧವಾರ ಆಚರಿಸಲಾಯಿತು. ಸಮಾದೇಷ್ಟ ಎಂ.ಎ. ಷಕೀಬ್, ಉಪ ಸಮಾದೇಷ್ಟ ಎಸ್.ಎ. ವಾಹೀದ್, ಸೆಕೆಂಡ್ ಇನ್ ಕಮಾಂಡ್ ಎನ್.ಎಸ್. ಲಕ್ಷ್ಮೀನರಸಿಂಹ, ಸಹಾಯಕ ಬೋಧಕ ಎಚ್. ತಿಪ್ಪೇಸ್ವಾಮಿ, ಅಧಿಕಾರಿಗಳಾದ ಜಿ. ಬಸವರಾಜ್, ಸುರೇಶ್, ಬಸವಲಿಂಗ, ಸಿಬ್ಬಂದಿಗಳು, ಗೃಹರಕ್ಷಕರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

