ಸುದ್ದಿ ಸಂಕ್ಷೇಪ
ಅರ್ಜಿ ಆಹ್ವಾನ
ಬಳ್ಳಾರಿ: ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ಸಂಡೂರು ಹಾಗೂ ಸಿರುಗುಪ್ಪ ತಾಲೂಕಿನ ಮೊರಾರ್ಜಿ ದೇಸಾಯಿ ಮಾದರಿ ವಸತಿ ಶಾಲೆಯಲ್ಲಿ ಖಾಲಿಯಿರುವ ಬೋಧಕ ಸಿಬ್ಬಂದಿಗಳ ಹುದ್ದೆಯನ್ನು ಭರ್ತಿ ಮಾಡಲು ಹೊರ ಸಂಪನ್ಮೂಲ ಏಜೆನ್ಸಿ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಸಂಡೂರು ತಾಲೂಕಿನ ಬನ್ನಿಹಟ್ಟಿ ಹಾಗೂ ಸಿರುಗುಪ್ಪ ತಾಲೂಕಿನ ಕೆಂಚನಗುಡ್ಡ ವಸತಿ ಶಾಲೆಗಳಲ್ಲಿ ವಿಜ್ಞಾನ ಶಿಕ್ಷಕ (ಪಿಸಿಎಂ) ಹುದ್ದೆಗಳು ಖಾಲಿಯಿದ್ದು, ಇತ್ತೀಚೆಗೆ ಸರ್ಕಾರಿ ಸೇವೆಯಿಂದ ನಿವೃತ್ತಿ ಹೊಂದಿರುವ ಅನುಭವಿ ಶಿಕ್ಷಕರು ಅರ್ಜಿ ಸಲ್ಲಿಸಬಹುದಾಗಿದೆ. ಆಯ್ಕೆಯಾದವರಿಗೆ ಅನುದಾನ ಲಭ್ಯತೆ ಆಧಾರದ ಮೇಲೆ ಮಾಹೆಯಾನ ರು. 8 ಸಾವಿರ ಸಂಭಾವನೆ ನೀಡಲಾಗುವುದು. ಆಸಕ್ತರು ತಮ್ಮ ಅರ್ಜಿಯೊಂದಿಗೆ ನಿವೃತ್ತ ನೌಕರರ ಪಿಂಚಣಿ ಪ್ರಮಾಣಪತ್ರ ಝೆರಾಕ್ಸ್ ಪ್ರತಿ, ವಿಷಯಕ್ಕೆ ಸಂಬಂಧಪಟ್ಟ ದಾಖಲಾತಿಗಳು, ಅರ್ಜಿದಾರರು ಹೊಂದಿರುವ ಬ್ಯಾಂಕ್ ಖಾತೆ ವಿವರಗಳನ್ನು ಲಗತ್ತಿಸಿ ಸೆ. 25ರೊಳಗಾಗಿ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಮೊ.ಸಂ- 9448466877, ದೂ.ಸಂ-08392-242453ನ್ನು ಸಂಪರ್ಕಿಸಬಹುದೆಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಪೂಲಯ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಎಂಜಿನಿಯರ್ಸ್ ದಿನಾಚರಣೆ
ಮುನಿರಾಬಾದ್: ಇಲ್ಲಿನ ವಿಶ್ವೇಶ್ವರಯ್ಯ ಸ್ಮಾರಕ ಭವನದಲ್ಲಿ ಶನಿವಾರ ಸಂಜೆ ಎಂಜಿನಿಯರ್ಸ್ ದಿನ ಆಚರಿಸಲಾಯಿತು. ನೀರಾವರಿ ತಜ್ಞ ಪರಮಶಿವಯ್ಯ ಉಪನ್ಯಾಸ ನೀಡಿದರು. ಎಂಜಿನಿಯರ್ಸ್ ಸಂಘದ ಅಧ್ಯಕ್ಷ ರಾಧಾಕೃಷ್ಣ, ಕಾರ್ಯದರ್ಶಿ ನರಸಿಂಹಮೂರ್ತಿ, ನಿವೃತ್ತ ಮುಖ್ಯ ಅಭಿಯಂತ ವಿಪಿ ಉದ್ದಿಹಾಳ್, ನಿವೃತ್ತ ಕಾರ್ಯಪಾಲಕ ಅಭಿಯಂತ ಈಶ್ವರಪ್ಪ ಹಾಗೂ ಗೋವಿಂದಲು ಇದ್ದರು. ಶ್ರೀ ರಕ್ಷಾ ಪ್ರಾರ್ಥಿಸಿದರು. ಬದರಿನಾರಾಯಣ್ ಸ್ವಾಗತಿಸಿದರು. ನರಸಿಂಹ ಮೂರ್ತಿ ನಿರೂಪಿಸಿದರು.
ಇಂದು ಲೋಕಾಯುಕ್ತರ ಪ್ರವಾಸ: ದೂರು ಆಹ್ವಾನ
ಕೊಪ್ಪಳ: ಲೋಕಾಯುಕ್ತ ಡಿವೈಎಸ್ಪಿ ಸೆ. 23ರಂದು ಗಂಗಾವತಿ ಹಾಗೂ ಕನಕಗಿರಿ, ಸೆ. 24ರಂದು ಕುಷ್ಟಗಿ ಹಾಗೂ ಯಲಬುರ್ಗಾದಲ್ಲಿ ಪ್ರವಾಸ ಕೈಗೊಂಡು ಸಾರ್ವಜನಿಕರಿಂದ ಕುಂದುಕೊರತೆಗಳ ದೂರು ಸ್ವೀಕರಿಸಲಿದ್ದಾರೆ. ಲೋಕಾಯುಕ್ತ ಡಿವೈಎಸ್ಪಿ ಸೆ. 23ರ ಬೆಳಗ್ಗೆ 10.30 ರಿಂದ ಮಧ್ಯಾಹ್ನ 1.30ರ ವರೆಗೆ ಗಂಗಾವತಿ ಪ್ರವಾಸಿ ಮಂದಿರದಲ್ಲಿ ಹಾಗೂ ಅದೇ ದಿನ ಮಧ್ಯಾಹ್ನ 2. 30ರಿಂದ ಸಂಜೆ 5. 30ರ ವರೆಗೆ ಕನಕಗಿರಿ ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕರಿಂದ ಕುಂದುಕೊರತೆ ದೂರು ಸ್ವೀಕರಿಸಲಿದ್ದಾರೆ. ಸೆ. 24ರಂದು ಬೆಳಗ್ಗೆ 10.30ರಿಂದ ಮಧ್ಯಾಹ್ನ 1.30ರ ವರೆಗೆ ಕುಷ್ಟಗಿ ಪ್ರವಾಸಿ ಮಂದಿರದಲ್ಲಿ ಹಾಗೂ ಅದೇ ದಿನ ಮಧ್ಯಾಹ್ನ 2. 30ರಿಂದ ಸಂಜೆ 5. 30ರ ವರೆಗೆ ಯಲಬುರ್ಗಾ ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕರ ದೂರು ಸ್ವೀಕರಿಸಲಿದ್ದಾರೆ. ಜನರು ತಮ್ಮ ಕುಂದುಕೊರತೆಗಳ ಬಗ್ಗೆ ಅರ್ಜಿ ನೀಡಿ ಸದುಪಯೋಗ ಪಡೆಯಲು ಕೋರಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

