ಬಳ್ಳಾರಿ

ಸ್ಲಂ ಪ್ರದೇಶದವರ ಪ್ರತಿಭೆ ಗುರುತಿಸಿ

Published On :

ಕನ್ನಡಪ್ರಭ ವಾರ್ತೆ, ಹೊಸಪೇಟೆ, ಸೆ. 22
ಸ್ಲಂಗಳ ಪ್ರದೇಶದ ಪ್ರತಿಭಾವಂತರ ಪ್ರತಿಭೆ ಗುರುತಿಸಲು ಉತ್ತಮ ವೇದಿಕೆಗಳನ್ನು ನಿರ್ಮಿಸಿಕೊಡುವ ಮೂಲಕ ಸ್ಲಂ ಪ್ರದೇಶದ ಯುವಕರನ್ನು ಬೆಳೆಸಬೇಕಾಗಿದೆ ಎಂದು ನಗರದ ನೂರು ಹಾಸಿಗೆ ಸರ್ಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಎರಿಯಪ್ಪ ಹೇಳಿದರು.
ನಗರದಲ್ಲಿ ಸ್ಲಂ ಜನಾಂದೋಲನ-ಕರ್ನಾಟಕ, ಹೊಸಪೇಟೆ ಸ್ಲಂ ಜನಜಾಗೃತಿ ಆಂದೋಲನ ಸಮಿತಿ ಯುವ ಘಟಕ ಸ್ಲಂ ಕಮಿಟಿ ಆಫೀಸ್‌ನಲ್ಲಿ ಯುವಕರಿಗೆ ಹಾಡಿನ ಸ್ಪರ್ಧೆ ಮತ್ತು ರಂಗೋಲಿ ಸ್ಪರ್ಧೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಸಂಘ-ಸಂಸ್ಥೆಗಳು ಪ್ರತಿಭಾವಂತರಿಗೆ ಉತ್ತಮ ವೇದಿಕೆ ನಿಮಾರ್ಣ ಮಾಡಿಕೊಟ್ಟಾಗ ಪ್ರತಿಭಾವಂತರು ತನ್ನಲ್ಲಿರುವ ಪ್ರತಿಭೆ ಪ್ರದರ್ಶಿಸಲು ಸಾಧ್ಯ. ಇಂಥ ಕೆಲಸವನ್ನು ಇಲ್ಲಿನ ಸ್ಲಂ ಜನಜಾಗೃತಿ ಆಂದೋಲನ ಸಮಿತಿಯ ಕೈಗೊಂಡಿರುವುದು ಉತ್ತಮ ಕಾರ್ಯವಾಗಿದೆ ಎಂದರು.
ಸ್ಥಳೀಯ ಮುಖಂಡ ಡಿಂಗ್ರಿ ನರಸಪ್ಪ ಮಾತನಾಡಿ, ಜಾನಪದ ಮತ್ತು ಭಾವಗೀತೆಗಳ ಮೂಲ ಅರ್ಥ, ಅವುಗಳ ತಾತ್ಪರ್ಯ ಅರ್ಥ ಮಾಡಿಕೊಂಡು ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸುವ ಮೂಲಕ ಪ್ರತಿಭಾವಂತರಾಗಿ ಬೆಳೆಯಬೇಕು ಎಂದರು.
ಸ್ಲಂ ಸಮಿತಿ ಉಪಾಧ್ಯಕ್ಷ ಸುನೀಲ್, ಸಂಚಾಲಕಿ ಎನ್. ಹುಲಿಗೆಮ್ಮ, ಸಮಾನ ಮಕ್ಕಳ ಮಂಟಪದ ಸಂಯೋಜಕ ಕೆ. ವೆಂಕಟೇಶುಲು, ಹನುಮಂತರಾಯ, ಸಮಾನ ಮಕ್ಕಳ ಮಂಟಪದ ಕಾರ್ಯಕರ್ತರು ಸಭೆಯಲ್ಲಿ ಭಾಗವಹಿಸಿದ್ದರು. ಇದೇ ಸಂದರ್ಭದಲ್ಲಿ ಜಾನಪದ, ಭಾವಗೀತೆ ಹಾಗೂ ರಂಗೋಲಿ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.