ಬಳ್ಳಾರಿ

ಪೌರ ಕಾರ್ಮಿಕರ ದಿನಾಚರಣೆ ಇಂದು

Published On :

ಹೊಸಪೇಟೆ: ಕರ್ನಾಟಕ ರಾಜ್ಯ ಪೌರ ನೌಕರರ ಸಂಘದಿಂದ ಪೌರ ಕಾರ್ಮಿಕರ ದಿನಾಚರಣೆ ನಗರದ ಎಂ.ಪಿ. ಪ್ರಕಾಶ್ ಕಲಾಮಂದಿರದಲ್ಲಿ ಸೆ. 25ರಂದು ಬೆಳಗ್ಗೆ 11 ಗಂಟೆಗೆ ನಡೆಯಲಿದೆ. ಸ್ಥಳೀಯ ಶಾಸಕ ಬಿ.ಎಸ್. ಆನಂದ್ ಸಿಂಗ್ ಕಾರ್ಯಕ್ರಮ ಉದ್ಘಾಟಿಸುವರು. ಸಹಾಯಕ ಆಯುಕ್ತ ಪಿ. ಸುನೀಲ್ ಕುಮಾರ್ ಅಧ್ಯಕ್ಷತೆ ವಹಿಸುವರು. ಕರ್ನಾಟಕ ರಾಜ್ಯ ಪೌರ ನೌಕರರ ಸಂಘದ ರಾಜ್ಯಾಧ್ಯಕ್ಷ ಜಿ.ಎಸ್. ಮಂಜುನಾಥ, ಹೊಸಪೇಟೆ ನಗರಸಭಾ ಪೌರಾಯುಕ್ತ ಮಹಮ್ಮದ್ ಮುನೀರ್, ತಹಸೀಲ್ದಾರ್ ರಮೇಶ್ ಕೋನರಡ್ಡಿ, ಪೌರಾಯುಕ್ತ ಕೆ. ರಂಗಸ್ವಾಮಿ, ನಗರಸಭೆಯ ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತ ಸೈಯದ್ ಮಸ್ಸೂರ್ ಅಹ್ಮದ್, ನಗರಸಭೆಯ ಕಚೇರಿ ವ್ಯವಸ್ಥಾಪಕ ರಮೇಶ್ ಬಡಿಗೇರ್, ನಗರಸಭೆಯ ಕಂದಾಯ ಅಧಿಕಾರಿ ಎಸ್. ಅಜಿತ್ ಸಿಂಗ್, ಲೆಕ್ಕ ಅಧೀಕ್ಷಕ ಮೆಹಬೂಬ್ ಅಲಿ, ಸಮುದಾಯ ವ್ಯವಹಾರಿಕ ಅಧಿಕಾರಿ ಟಿ. ಮಂಜುನಾಥ, ಜಿಲ್ಲಾ ಕಾರ್ಯದರ್ಶಿ ಕೆ. ಮಲ್ಲೇಶಪ್ಪ, ಕರ್ನಾಟಕ ರಾಜ್ಯ ಪೌರ ನೌಕರರ ಸಂಘದ ಅಧ್ಯಕ್ಷ ಜಿ. ನೀಲಕಂಠ, ಗೌರವಾಧ್ಯಕ್ಷ ನಾಗಪ್ಪ, ಕಾರ್ಯದರ್ಶಿ ಓಬಣ್ಣ ನಗರಸಭೆಯ 35 ಸದಸ್ಯರು ಭಾಗವಹಿಸುವರು.
ಮಠಪತಿ ಪದಗ್ರಹಣ
ಬಳ್ಳಾರಿ: ಬಳ್ಳಾರಿ ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿಯಾಗಿ ಎಸ್.ಎಸ್. ಮಠಪತಿ ಅಧಿಕಾರ ವಹಿಸಿಕೊಂಡರು. ಸಂಬಂಧಿಸಿದವರು ಇವರೊಂದಿಗೆ ಪತ್ರ ವ್ಯವಹಾರ ಮಾಡಲು ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ, ಜಿಲ್ಲಾಧಿಕಾರಿಗಳ ಕಚೇರಿ ಆವರಣ, ಬಳ್ಳಾರಿ. ಈ ವಿಳಾಸದಲ್ಲಿ ವ್ಯವಹರಿಸಬೇಕು ಅಥವಾ ದೂ.ಸಂ- 08392-273236, 276398 ಅಥವಾ ಮೊ.ಸಂ-9480719685 ಅಥವಾ ಮಿಂಚಂಚೆ ಜಡ್ಟಜಜಡ.ಛಿಜಟಟಛ್ಠಣಅ್ಜಟಛ್ಝಟ.್ಛ್ಟಟನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
ಜೂಜಾಟ: 8 ಬಂಧನ
ಬಳ್ಳಾರಿ: ಮಟಕಾ ಜೂಜಾಟ ಅಡ್ಡೆಯ ಮೇಲೆ ಸೋಮವಾರ ದಾಳಿ ಮಾಡಿ, 8 ಜನರನ್ನು ಬಂಧಿಸಿ ಅವರಿಂದ ರು. 5,300 ವಶಪಡಿಸಿಕೊಳ್ಳಲಾಗಿದೆ. ತಾಲೂಕಿನ ದಮ್ಮೂರು ಗ್ರಾಮದ ಆಂಜನೇಯ ಸ್ವಾಮಿ ದೇವಸ್ಥಾನದ ಸಮೀಪದಲ್ಲಿ ಮಟಕಾ ಜೂಜಾಟ ಆಡುತ್ತಿದ್ದ ಸಂದರ್ಭದಲ್ಲಿ ಕುರುಗೋಡು ಪಿಎಸ್‌ಐ ಸೋಮಶೇಖರ ನೇತೃತ್ವದಲ್ಲಿ ದಾಳಿ ಮಾಡಲಾಗಿದೆ. ಈ ಕುರಿತು ಕುರುಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.