ಶೈಕ್ಷಣಿಕ ಅಭಿವೃದ್ಧಿಯಿಂದ ವಾಲ್ಮೀಕಿ ಜನಾಂಗ ಏಳ್ಗೆ
ಬಳ್ಳಾರಿ: ವಾಲ್ಮೀಕಿ ಜನಾಂಗವು ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದಿದಾಗ ಮಾತ್ರ ಸಮುದಾಯದ ಏಳ್ಗೆ ಸಾಧ್ಯ ಎಂದು ವಾಲ್ಮೀಕಿ ನಾಯಕರ ವಿದ್ಯಾಭಿವೃದ್ಧಿ ಸಂಘದ ಜಿಲ್ಲಾಧ್ಯಕ್ಷ ವಿ.ಎನ್. ಗಿರಿಮಲ್ಲಪ್ಪ ಕರೆ ನೀಡಿದರು. ನಗರದ ಸಂಘದ ಕಚೇರಿಯಲ್ಲಿ ಏರ್ಪಡಿಸಿದ್ದ ವಾಲ್ಮೀಕಿ ಸಮುದಾಯದ ಪಾಲಿಕೆಯ ನೂತನ ಸದಸ್ಯರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ವಾಲ್ಮೀಕಿ ಸಮುದಾಯದ ಎಲ್ಲ ಮುಖಂಡರು ಒಗ್ಗೂಡಿ ಸಮಾಜದ ಅಭಿವೃದ್ಧಿಗೆ ಶ್ರಮಿಸಬೇಕು. ತಮ್ಮ ಮಕ್ಕಳಿಗೆ ವಿದ್ಯಾಭ್ಯಾಸ ಕೊಡಿಸಿ, ದೇಶದ ಸತ್ಪ್ರಜೆಗಳನ್ನಾಗಿ ರೂಪಿಸಬೇಕು ಎಂದು ತಿಳಿಸಿದರು. ನಗರದಲ್ಲಿ ನಿರ್ಮಾಣಗೊಳ್ಳುತ್ತಿರುವ ವಾಲ್ಮೀಕಿ ಭವನದ ಕಾಮಗಾರಿಯನ್ನು ಶೀಘ್ರವೇ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿಗಳಲ್ಲಿ ಮನವಿ ಮಾಡಿದರು. ಕಾರ್ಯಕ್ರಮದಲ್ಲಿ ಪಾಲಿಕೆಯ ಸದಸ್ಯರಾದ ಬಿ. ಕುಮಾರಸ್ವಾಮಿ, ಸೀತಾರಾಮ್, ವೆಂಕಟಲಕ್ಷ್ಮಿ, ಲಕ್ಷ್ಮಿದೇವಿ, ನಾಗಮ್ಮ, ರೇಣುಕಾ ಅವರನ್ನು ಸನ್ಮಾನಿಸಿದರು. ರಾಜ್ಯಶ್ರೀ ವಾಲ್ಮೀಕಿ ಮಹರ್ಷಿ ಪ್ರಶಸ್ತಿ ವಿಜೇತ ವಿ.ಎನ್. ಗಿರಿಮಲ್ಲಪ್ಪ ಅವರನ್ನು ಸಂಘದ ವತಿಯಿಂದ ಗೌರವಿಸಲಾಯಿತು. ಸಂಘದ ಉಪಾಧ್ಯಕ್ಷ ಎನ್.ಕೆ. ಸದಾಶಿವಪ್ಪ, ಟಿ. ಮಲ್ಲಿಕಾರ್ಜುನ, ವೆಂಕಟಸ್ವಾಮಿ, ಭೀಮಣ್ಣ, ಬಿ. ಗೋಪಾಲ್, ಬಾದಾಮಿ ಶಿವಲಿಂಗ ನಾಯಕ, ಗುಜ್ಜಲ ಗಾದಿಲಿಂಗಪ್ಪ, ಪ್ರಧಾನ ಕಾರ್ಯದರ್ಶಿ ಬಿ. ಓಬಳೇಶಿ, ಜೋಳದರಾಶಿ ತಿಮ್ಮಪ್ಪ, ವಿಜಯಕುಮಾರ್, ಉಮಾಪತಿ, ಮೋಕಾ ರಾಮಯ್ಯ, ಸಂಗನಕಲ್ಲು ವಿಜಯ್, ವೆಂಕಟೇಶಲು, ಪಿ. ಜಗನ್, ಬಸವರಾಜ್ ಇದ್ದರು. ಬಿ. ಜಯರಾಮ್ ಸ್ವಾಗತಿಸಿದರು. ಬಿ. ರುದ್ರಪ್ಪ ನಿರೂಪಿಸಿದರು. ಕಿಶೋರ್ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

