ಕೊಡುಗೈ ದಾನಿ ಹುಚ್ಚಣ್ಣ ಶ್ರೇಷ್ಠಿ ನಿಧನ
ಹೂವಿನಹಡಗಲಿ: ಪಟ್ಟಣದ ಗಣ್ಯ ವರ್ತಕ, ಆರ್ಯವೈಶ್ಯ ಸಮಾಜದ ಹಿರಿಯ ಮುಖಂಡ, ದಾನಶ್ರೇಷ್ಠ ಗಂಗಾವತಿ ಹುಚ್ಚಣ್ಣ ಶ್ರೇಷ್ಠಿ (92) ಶನಿವಾರ ಬೆಳಗ್ಗೆ ನಿಧನರಾದರು. ಮೃತರಿಗೆ ಮೂವರು ಪುತ್ರರು, ಮೂವರು ಪುತ್ರಿಯರು, ಮೊಮ್ಮಕ್ಕಳು, ಮರಿಮೊಮ್ಮಕ್ಕಳು ಇದ್ದಾರೆ.
ಹುಚ್ಚಣ್ಣ ಪಟ್ಟಣ ಪಂಚಾಯಿತಿ, ಜನತಾ ಪಕ್ಷದ ತಾಲೂಕು ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಪಟ್ಟಣದ ತೇರು ಹನುಮಪ್ಪ ದೇವಸ್ಥಾನ ಸಮಿತಿ ಮತ್ತು ವರ್ತಕರ ಸಂಘದ ಅಧ್ಯಕ್ಷರಾಗಿ ಸಾರ್ವಜನಿಕ ಸೇವೆ ಸಲ್ಲಿಸಿದ್ದರು.
ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಗಂಗಾವತಿ ಭಾಗ್ಯಮ್ಮ ಗ್ರಾಮೀಣ ಮಹಾ ವಿದ್ಯಾಲಯ, ಪಂಪಾಪತೆಪ್ಪ ಸರ್ಕಾರಿ ಪದವಿಪೂರ್ವ ಕಾಲೇಜುಗಳಿಗೆ ಪಟ್ಟಣದ ಹೃದಯ ಭಾಗದಲ್ಲಿದ್ದ ತಮ್ಮ ಜಮೀನನ್ನು ದಾನ ಮಾಡುವ ಮೂಲಕ ದಾನಶ್ರೇಷ್ಠರಾಗಿದ್ದರು. ಪಟ್ಟಣದ ಕಲಾಭವನ, ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ ನಿರ್ಮಾಣಕ್ಕೆ ನಿವೇಶನ ಮತ್ತು ಹೊನ್ನಾಯ್ಕನಹಳ್ಳಿಯ ಚೌಕಿ ಮಠಕ್ಕೆ 4 ಎಕರೆ ಜಮೀನು ದಾನವಾಗಿ ನೀಡಿದ್ದಾರೆ.
ಹಿರಿಯಜೀವಿ ಹುಚ್ಚಣ್ಣ ಶ್ರೇಷ್ಠಿ ಅವರ ನಿಧನಕ್ಕೆ ಕಾರ್ಮಿಕ ಸಚಿವ ಪಿ.ಟಿ. ಪರಮೇಶ್ವರ ನಾಯ್ಕ, ಶಾಸಕ ಎಂ.ಪಿ. ರವೀಂದ್ರ, ಮಾಜಿ ಶಾಸಕರಾದ ನಂದಿಹಳ್ಳಿ ಹಾಲಪ್ಪ, ಬಿ. ಚಂದ್ರನಾಯ್ಕ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಐಗೋಳ ಚಿದಾನಂದ, ಎಂ. ಪರಮೇಶ್ವರಪ್ಪ, ಪುರಸಭೆ ಮಾಜಿ ಅಧ್ಯಕ್ಷ ಹಣ್ಣಿ ಕುರುಗೋಡಪ್ಪ, ಜಿಬಿಆರ್ ಕಾಲೇಜು ಆಡಳಿತ ಮಂಡಳಿ, ಜಿಪಿಜಿ ಕಾಲೇಜು ಸಿಡಿಎಂಸಿ, ವರ್ತಕರ ಸಂಘ, ಪತ್ರಕರ್ತರ ಸಂಘದ ಪದಾಧಿಕಾರಿಗಳು ಸಂತಾಪ ಸೂಚಿಸಿದ್ದಾರೆ. ಮೃತರ ಗೌರವಾರ್ಥ ಪಟ್ಟಣದ ಜಿಬಿಆರ್ ಮತ್ತು ಜಿಪಿಜಿ ಕಾಲೇಜಿನಲ್ಲಿ ವಿದ್ಯಾರ್ಥಿಗಳು, ಉಪನ್ಯಾಸಕ ಹಾಗೂ ಸಿಬ್ಬಂದಿ ಮೌನಾಚರಣೆ ಮಾಡಿ ಕಾಲೇಜುಗಳಿಗೆ ರಜೆ ಘೋಷಿಸಲಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

