ಯೋಧರ ಹತ್ಯೆ: ಹಿಂಜಾವೇ ಧರಣಿ
ಬಳ್ಳಾರಿ: ಜಮ್ಮು- ಕಾಶ್ಮೀರದಲ್ಲಿ ಭಾರತೀಯ ವೀರಯೋಧರು ಹಾಗೂ ಪೊಲೀಸರನ್ನು ಹತ್ಯೆಗೈದ ಪಾಕ್ ಪ್ರೇರಿತ ಉಗ್ರರ ಕೃತ್ಯವನ್ನು ಖಂಡಿಸಿ ಬೃಹತ್ ಪ್ರತಿಭಟನೆ ನಡೆಸಿದ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ನಗರದ ಗಡಿಗಿ ಚನ್ನಪ್ಪ ವೃತ್ತದಲ್ಲಿ ಉಗ್ರರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.
ಚನ್ನಪ್ಪ ವೃತ್ತದಲ್ಲಿ ಜಮಾಯಿಸಿದ ವೇದಿಕೆ ಹಾಗೂ ಹಿಂದೂಪರ ಸಂಘಟನೆಗಳ ನೂರಾರು ಕಾರ್ಯಕರ್ತರು, ಪಾಕಿಸ್ತಾನ ಪ್ರೇರಿತ ಉಗ್ರರ ದಷ್ಕೃತ್ಯಗಳನ್ನು ಖಂಡಿಸಿ, ವಿವಿಧ ಘೋಷಣೆಗಳನ್ನು ಕೂಗಿದರು.
ಭಾರತ- ಪಾಕ್ ಗಡಿ ಹಾಗೂ ಜಮ್ಮು- ಕಾಶ್ಮೀರದಲ್ಲಿ ಮೂರು ತಿಂಗಳಿಂದ ಭಾರತೀಯ ಯೋಧರು ಹಾಗೂ ಪೊಲೀಸರ ಮೇಲೆ ದಾಳಿ ಮಾಡುತ್ತಿರುವ ಪಾಕ್ ಪ್ರೇರಿತ ಉಗ್ರಗಾಮಿಗಳು ಭಾರತೀಯ ಸೈನಿಕರನ್ನು ಕ್ರೂರವಾಗಿ ಹಿಂಸಿಸಿ ಹತ್ಯೆಗೈಯ್ಯುತ್ತಿದ್ದಾರೆ. ಅಲ್ಲದೇ ಉಗ್ರಗಾಮಿ ಸಂಘಟನೆಗಳ ಸದಸ್ಯರು ದೇಶದ ವಿವಿಧೆಡೆ ನಡೆಸುತ್ತಿರುವ ದುಷ್ಕೃತ್ಯಗಳಿಂದ ಜನರ ಜೀವನಕ್ಕೂ ಸಂಚಕಾರ ಒಡ್ಡುತ್ತಿದ್ದು, ದೇಶವನ್ನೇ ನಾಶಗೊಳಿಸಲು ಹೊರಟಿರುವ ಉಗ್ರಗಾಮಿಗಳಿಗೆ ಹಾಗೂ ಪಾಕಿಸ್ತಾನಕ್ಕೆ ಕೇಂದ್ರ ಸರ್ಕಾರ ಸೂಕ್ತ ಎಚ್ಚರಿಕೆ ನೀಡಬೇಕು ಎಂದು ಪ್ರತಿಭಟನಾನಿರತರು ಆಗ್ರಹಿಸಿದರು.
ದೇಶದಲ್ಲಿ ಶಾಂತಿ ಸುವ್ಯವಸ್ಥೆಗೆ ಧಕ್ಕೆಯುಂಟು ಮಾಡುತ್ತಿರುವ ಉಗ್ರಗಾಮಿ ಸಂಘಟನೆಗಳಿಗೆ ಹಾಗೂ ಪ್ರೇರಿತ ಪಾಕಿಸ್ತಾನದೊಂದಿಗೆ ಮಾತುಕತೆ ನಡೆಸುವ ಅಗತ್ಯವಿಲ್ಲ. ಪ್ರಧಾನಮಂತ್ರಿ ಡಾ. ಮನಮೋಹನ್ ಸಿಂಗ್ ಪಾಕ್ ವಿರುದ್ಧ ಕಠಿಣ ನಿಲುವು ತೆಗೆದುಕೊಳ್ಳಬೇಕು. ಉಗ್ರಗಾಮಿಗಳನ್ನು ಬಗ್ಗು ಬಡಿಯಬೇಕು. ಇದು ಸಾಧ್ಯವಾಗದಿದ್ದಲ್ಲಿ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಜಿಲ್ಲಾ ಸಂಚಾಲಕ ಶ್ರೀರಾಮುಲು, ನಗರ ಸಂಚಾಲಕ ಜನಾರ್ದನ, ಅನಿಲ್ ನಾಯ್ಡು, ಅಶೋಕ್, ನಿಂಗಪ್ಪ, ಬಾಲಾಜಿರಾವ್, ಗೋವಿಂದ್, ರಘು, ಮಹೇಶ್, ರಾಜು, ಸುರೇಶ್, ನಗರಾಜ್ ಸೇರಿದಂತೆ ನೂರಾರು ಜನರು ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

