ಆಕಸ್ಮಿಕ ಬೆಂಕಿ: 4 ಗುಡಿಸಲು ಭಸ್ಮ, ಅಪಾರ ನಷ್ಟ
ಕೂಡ್ಲಿಗಿ: ತಾಲೂಕಿನ ಎಸ್. ಇಮಡಾಪುರದಲ್ಲಿ ಶನಿವಾರ ಮಧ್ಯರಾತ್ರಿ ಬೆಂಕಿ ಆಕಸ್ಮಿಕದಿಂದ ನಾಲ್ಕು ಗುಡಿಸಲುಗಳು ಸಂಪೂರ್ಣ ಸುಟ್ಟು ಭಸ್ಮವಾಗಿ ಅಪಾರ ನಷ್ಟ ಉಂಟಾಗಿರುವ ಘಟನೆ ನಡೆದಿದೆ.
ಗ್ರಾಮದ ಜಗದೀಶ್, ತಿಪ್ಪಜ್ಜ ನಾಗಮ್ಮ ಹಾಗೂ ಎ. ನಿಂಗಪ್ಪರಿಗೆ ಸೇರಿದ ಗುಡಿಸಲುಗಳು ಬೆಂಕಿಗೆ ಆಹುತಿಯಾಗಿವೆ. ಜಗದೀಶ್ಗೆ ಸೇರಿದ ಗುಡಿಸಲಿನಲ್ಲಿ ರು. 35 ಸಾವಿರ ನಗದು, ಬಂಗಾರದ ಒಡವೆ, ನಾಲ್ಕು ಚೀಲ ರಾಗಿ, ಜೋಳ ಸೇರಿದಂತೆ ಹೆಚ್ಚಿನ ನಷ್ಟ ಸಂಭವಿಸಿದೆ. ಅದರಂತೆ ಇನ್ನುಳಿದ ಗುಡಿಸಲಿನಲ್ಲಿದ್ದ ಆಹಾರಧಾನ್ಯ, ಬಟ್ಟೆಬರೆ, ಪಾತ್ರೆಗಳು, ಚಿನ್ನದ ಒಡವೆಗಳು, ನಗದು ಸೇರಿ ಅಂದಾಜು ರು. 4 ಲಕ್ಷಕ್ಕೂ ಅಧಿಕ ನಷ್ಟ ಸಂಭವಿಸಿದೆ. ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಸ್ಥಳೀಯ ಯುವಕರು ಹಾಗೂ ಕೂಡ್ಲಿಗಿ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿ, ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ. ಸ್ಥಳಕ್ಕೆ ಕಾನಹೊಸಹಳ್ಳಿ ಗ್ರಾಪಂ ಅಧ್ಯಕ್ಷೆ ಗಿರಿಜಾ ಜಗದೀಶ್, ತಹಸೀಲ್ದಾರ್ ಕೃಷ್ಣಮೂರ್ತಿ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸೂರು ಕಳೆದುಕೊಂಡ ಕುಟುಂಬಗಳಿಗೆ ತಾತ್ಕಾಲಿಕವಾಗಿ ಗ್ರಾಪಂನಿಂದ ಆಹಾರಧಾನ್ಯ ನೀಡಲಾಗಿದೆ. ತಾಲೂಕಿನ ಕಾನಹೊಸಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

