ಶಿರಾಜ್ ಶೇಖ್ ಕಾಂಗ್ರೆಸ್ಗೆ ಸೇರಿಸಿಕೊಳ್ಳಲು ಮನವಿ
ಹೊಸಪೇಟೆ: ಮಾಜಿ ಶಾಸಕ ಶಿರಾಜ್ ಶೇಖ್ ಅವರನ್ನು ಕಾಂಗ್ರೆಸ್ಗೆ ಸೇರಿಸಿಕೊಳ್ಳಬೇಕು ಎಂದು ತಾಲೂಕಿನ ಮರಿಯಮ್ಮನಹಳ್ಳಿ ಹೋಬಳಿಯ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಕಾಂಗ್ರೆಸ್ ವರಿಷ್ಠರಿಗೆ ಮನವಿ ಮಾಡಿದ್ದಾರೆ. ಮಾಜಿ ಶಾಸಕ ಶಿರಾಜ್ ಶೇಖ್ ಕಾಂಗ್ರೆಸ್ಗೆ ಬಂದರೆ ಹಗರಿಬೊಮ್ಮನಹಳ್ಳಿ ಕ್ಷೇತ್ರದಲ್ಲಿ ಪಕ್ಷಕ್ಕೆ ಶಕ್ತಿ ಬರಲಿದೆ. ಶಿರಾಜ್ ಶೇಖ್ ಶಾಸಕರಾಗಿದ್ದಾಗ ಸಾಕಷ್ಟು ಅಭಿವೃದ್ಧಿ ಕಾಮಗಾರಿಗಳನ್ನು ಮಾಡುವ ಮೂಲಕ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದರು. ಹಗರಿಬೊಮ್ಮನಹಳ್ಳಿಯಲ್ಲಿ ಸೋನಿಯಾ ನಗರ, ಕೂಡ್ಲಿಗಿಯಲ್ಲಿ ರಾಜೀವ್ ನಗರ, ಮರಿಯಮ್ಮನಹಳ್ಳಿ ಪ್ರಿಯಾಂಕ ನಗರ ಕ್ಷೇತ್ರದ ಬಹುತೇಕ ಗ್ರಾಮಗಳಲ್ಲಿ ಗುಂಪು ಮನೆಗಳನ್ನು ನಿರ್ಮಿಸಿ ವಸತಿ ಕ್ಷೇತ್ರದಲ್ಲಿ ಸಾಕಷ್ಟು ಸಾಧನೆ ಮಾಡಿ ರಾಷ್ಟ್ರಪ್ರಶಸ್ತಿ ಪಡೆದುಕೊಂಡಿರುವ ಜನಪ್ರಿಯ ಶಾಸಕರಾಗಿ ಗುರುತಿಸಿಕೊಂಡಿರುವ ಮುಖಂಡರಾಗಿದ್ದಾರೆ. ಇಂತಹ ಮುಖಂಡರು ಕಾಂಗ್ರೆಸ್ಗೆ ಬರುವುದರಿಂದ ಪಕ್ಷಕ್ಕೆ ಒಳಿತಾಗಲಿದೆ ಎಂದರು. ಕೆ.ಎಚ್. ಸುಬ್ರಮಣ್ಯ, ಎಂ. ಅಂಜಿನಪ್ಪ, ಎಂ. ನಜೀರ್ ಸಾಹೇಬ್, ಹುರುಕೊಳ್ಳಿ ಮಂಜುನಾಥ, ಎಲ್. ಹನುಮಂತಪ್ಪ, ಬಿ. ವೆಂಕಟೇಶ್ ಇತರರಿದ್ದರು.
ಬೀದಿ ನಾಟಕಕ್ಕೆ ಚಾಲನೆ
ಬಳ್ಳಾರಿ: ಮತ ಮಾರಿಕೊಳ್ಳದೆ ಪ್ರಜಾಪ್ರಭುತ್ವ ವ್ಯವಸ್ಥೆ ಸದೃಢಗೊಳಿಸುವ ನಿಟ್ಟಿನಲ್ಲಿ ಎಲ್ಲ ಮತದಾರರೂ ಮುಕ್ತವಾಗಿ ಮತದಾನ ಮಾಡಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾ ಸಹಾಯಕ ನಿರ್ದೇಶಕ ಬಿ. ನಾಗರಾಜ್ ಹೇಳಿದರು. ಅವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಸ್ವೀಪ್ ಸಮಿತಿ ಏರ್ಪಡಿಸಿದ್ದ ಬೀದಿ ನಾಟಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಜಿಲ್ಲೆಯ ವಿವಿಧ ವಿಧಾನಸಭಾ ಕ್ಷೇತ್ರದ 30 ಪ್ರದೇಶದಲ್ಲಿ ಬೀದಿ ನಾಟಕ, ವಾಯ್ಸ್ ಅನೌನ್ಸ್ಮೆಂಟ್, ಸಿಡಿ ಪ್ರದರ್ಶನ ಏರ್ಪಡಿಸಲಾಗುವುದು. ಬಳ್ಳಾರಿಯ ರಂಗಜಂಗಮದ ಅಣ್ಣಾಜಿ ಕೃಷ್ಣಾರೆಡ್ಡಿ ಮತ್ತು ತಂಡ ಬೀದಿ ನಾಟಕ ಪ್ರದರ್ಶಿಸಲಿದ್ದಾರೆಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

