ಅಭಿವೃದ್ಧಿ ಗಮನಿಸಿ ಮತ ನೀಡಿ
ಬಳ್ಳಾರಿ: ಕಾಂಗ್ರೆಸ್ ರಾಜ್ಯ ಮತ್ತು ಕೇಂದ್ರದಲ್ಲಿ ಜನಪರ ಕಾರ್ಯ ಮಾಡಿದೆ. ಸರ್ಕಾರವು ಜನಪರ ಕಾಳಜಿ ಇಟ್ಟುಕೊಂಡು ಹಲವು ಯೋಜನೆಗಳನ್ನು ರೂಪಿಸಿದೆ. ಅಭಿವೃದ್ಧಿ ಪರವಾಗಿ ಚಿಂತಿಸುತ್ತಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ತಮಗೆ ಮತ ನೀಡುವ ಮೂಲಕ ಜಯಶೀಲರನ್ನಾಗಿ ಮಾಡಬೇಕೆಂದು ಅಭ್ಯರ್ಥಿ ಎನ್.ವೈ. ಹನುಮಂತಪ್ಪ ತಿಳಿಸಿದರು.
ಬಳ್ಳಾರಿ ಲೋಕಸಭಾ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ಎನ್.ವೈ. ಹನುಮಂತಪ್ಪ ಅವರು ಬಳ್ಳಾರಿ ತಾಲೂಕಿನ ಕಪ್ಪಗಲ್, ಸಿರಿವಾರ ಗ್ರಾಮದಲ್ಲಿ ಬಿರುಸಿನ ಪ್ರಚಾರ ನಡೆಸಿದರು.
ಕರಪತ್ರಗಳನ್ನು ಹಂಚುವ ಮೂಲಕ ಕಾಂಗ್ರೆಸ್ ಸರ್ಕಾರದ ಸಾಧನೆಯನ್ನು ಜನರಿಗೆ ಮನವರಿಕೆ ಮಾಡಿಕೊಡಲಾಯಿತು. ತಾಲೂಕಿನ ಕಪ್ಪಗಲ್ ಗ್ರಾಮ ಹಾಗೂ ಸಿರಿವಾರ ಗ್ರಾಮದಲ್ಲಿ ಪಾದಯಾತ್ರೆ ನಡೆಸಿ, ಮನೆ ಮನೆಗೆ ತೆರಳಿ ಮತಯಾಚನೆ ಮಾಡಿದರು. ಪ್ರಚಾರ ಕಾರ್ಯದಲ್ಲಿ ಕರಪತ್ರಗಳನ್ನು ಹಂಚಿ, ಮತ ಯಾಚನೆ ಮಾಡಿದರು. ಕಾಂಗ್ರೆಸ್ ಮುಖಂಡರಾದ ಕೆ.ಎಂ. ಮಹೇಶ್ವರಸ್ವಾಮಿ, ಅಸುಂಡಿ ನಾಗರಾಜ್ ಗೌಡ, ಜೀತೇಂದ್ರಗೌಡ ಮಾತನಾಡಿ, ನಿವೃತ್ತ ನ್ಯಾಯಾಮೂರ್ತಿ ಆಗಿರುವ ಎನ್.ವೈ. ಹನುಮಂತಪ್ಪ ಅವರು ಸರಳ ವ್ಯಕ್ತಿಯಾಗಿದ್ದು, ಹನುಮಂತಪ್ಪ ಅವರನ್ನು ಚುನಾವಣೆಯಲ್ಲಿ ಗೆಲ್ಲಿಸುವ ಮೂಲಕ ಕ್ಷೇತ್ರದ ಅಭಿವೃದ್ಧಿ ಸಹಕರಿಸಬೇಕು. ಹನುಮಂತಪ್ಪ ಅವರು ಗೆಲ್ಲುವುದರಿಂದ ಲೋಕಸಭೆಯಲ್ಲಿ ಸಮರ್ಥವಾಗಿ ಕ್ಷೇತ್ರ ಪ್ರತಿನಿಧಿಸಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

