ಬಳ್ಳಾರಿ

ಭ್ರಷ್ಟಾಚಾರಿಗಳ ವಿರುದ್ಧ ಮತ ಚಲಾಯಿಸಿ

Published On :

ಬಳ್ಳಾರಿ: ಕಾಂಗ್ರೆಸ್ ಮತ್ತು ಬಿಜೆಪಿ ಎರಡು ಒಂದೇ ನಾಣ್ಯದ ಎರಡು ಮುಖಗಳಂತಿದ್ದು, ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಮತದಾರರು ಅಕ್ರಮ ಗಣಿಗಾರಿಕೆ, ಭೂ ಕಬಳಿಕೆ, ಭ್ರಷ್ಟಾಚಾರಿಗಳ ವಿರುದ್ಧ ಮತ ಚಲಾಯಿಸುವ ಮೂಲಕ ತಕ್ಕಪಾಠ ಕಲಿಸಬೇಕು ಎಂದು ಸಮಾಜ ಪರಿವರ್ತನಾ ಸಮಾಜದ ಮುಖ್ಯಸ್ಥ ಎಸ್.ಆರ್. ಹಿರೇಮಠ್ ಮನವಿ ಮಾಡಿದರು.
ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಚುನಾವಣೆಯು ಮತದಾರರಿಗೆ ಉತ್ತಮ ಅವಕಾಶವಾಗಿದ್ದು, ಯೋಗ್ಯ ಅಭ್ಯರ್ಥಿಗೆ ತಮ್ಮ ಅಮೂಲ್ಯ ಮತ ಚಲಾಯಿಸುವ ಮೂಲಕ ಸದೃಢ ಪ್ರಜಾಪ್ರಭುತ್ವ ನಿರ್ಮಾಣಕ್ಕೆ ಮುಂದಾಗಬೇಕು. ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳ ಅಭ್ಯರ್ಥಿಗಳಿಗೆ ಈ ಬಾರಿ ಸೋಲು ಅನುಭವಿಸುವಂತೆ ಮಾಡಬೇಕು ಎಂದು ಕೋರಿದರು.
ಪ್ರಸಕ್ತ ಲೋಕಸಭೆ ಚುನಾವಣೆ ಕಿರುಹೊತ್ತಿಗೆ ಬಿಡುಗಡೆಗೊಳಿಸಿದ ಎಸ್.ಆರ್. ಹಿರೇಮಠ್, ಕೋಮುವಾದ ಮುಕ್ತನಾಡು ಮಾಡುವಲ್ಲಿ ಶ್ರಮಿಸುವ ಪಕ್ಷಗಳಿಗೆ ಆದ್ಯತೆ ನೀಡಬೇಕು. ಭ್ರಷ್ಟಾಚಾರ ಮುಕ್ತ ಭಾರತ ಮತದಾರರ ಆದ್ಯತೆಯಾಗಬೇಕು. ಮಾನವ ಹಕ್ಕುಗಳನ್ನು ರಕ್ಷಣೆಗೆ ಒತ್ತು ಕೊಡುವ ಪಕ್ಷ ಬೆಂಬಲಿಸಬೇಕು ಎಂದರು.
ಯಾವ ಕಾರಣಕ್ಕೂ ಕೃಷಿಯೋಗ್ಯ ಭೂಮಿಯನ್ನು ಕೃಷಿಯೇತರ ಉದ್ದೇಶಕ್ಕಾಗಿ ಪರಿವರ್ತನೆಗೆ ಅವಕಾಶ ನೀಡಬಾರದು. ಈ ಬಗೆಯ ಪರಿವರ್ತನೆ ನಿಷೇಧಿಸಬೇಕು. ನೈಸರ್ಗಿಕ ಸಂಪನ್ಮೂಲಗಳ ರಫ್ತು ನಿಷೇಧಿಸಬೇಕು ಎಂದು ಒತ್ತಾಯಿಸಿದರು. ಈ ಸಂದರ್ಭ ಗ್ರಾಮ ಗಣರಾಜ್ಯ ವೇದಿಕೆಯ ಜಿ.ಎನ್ ಸಿಂಹ, ಇತರರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.