ಬಳ್ಳಾರಿ

ಮಕ್ಕಳಿಗೆ ನೈತಿಕ ಶಿಕ್ಷಣ ನೀಡಿ

Published On :

ಹೊಸಪೇಟೆ: ಮಕ್ಕಳಿಗೆ ಬಾಲ್ಯದಿಂದಲೇ ಉತ್ತಮ ಸಂಸ್ಕಾರ, ಸಂಸ್ಕೃತಿ, ಧರ್ಮ, ಭಕ್ತಿ, ನೈತಿಕ ಶಿಕ್ಷಣ ಬಹಳ ಮುಖ್ಯ. ಧಾರ್ಮಿಕ, ನೈತಿಕ ಶಿಕ್ಷಣ ದೇಶದ ಭವಿಷ್ಯದ ದೃಷ್ಟಿಯಿಂದ ಅಗತ್ಯ ಎಂದು ಉಡುಪಿ ಪೇಜಾವರ ಅಧೋಕ್ಷಜ ಮಠದ ವಿಶ್ವೇಶತೀರ್ಥ ಶ್ರೀಪಾದಂಗಳವರು ಹೇಳಿದರು.
ನಗರದಲ್ಲಿ ಶುಕ್ರವಾರ ವಿಜಯನಗರ ಕಾಲೇಜಿನ ಸುವರ್ಣ ಮಹೋತ್ಸವ ಸಮಾರಂಭದ ಎರಡೇ ದಿನ ವಿಶೇಷ ಉಪನ್ಯಾಸ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡಿದ ಅವರು, ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣ ಸಹಕಾರಿ. ದೀನದಲಿತರಲ್ಲಿ ದೇವರನ್ನು ಕಾಣಬೇಕು. ಯುವಕರು ದೈವಭಕ್ತಿ, ದೇಶಭಕ್ತಿ ಮೈಗೂಡಿಸಿಕೊಳ್ಳಿ ಎಂದರು.
ಕೊಪ್ಪಳ ಗವಿಸಿದ್ದೇಶ್ವರ ಸಂಸ್ಥಾನ ಗವಿಮಠದ ಅಭಿನವ ಗವಿಸಿದ್ಧೇಶ್ವರ ಸ್ವಾಮೀಜಿ ಸಮ್ಮುಖ ವಹಿಸಿ ಮಾತನಾಡಿ, ಶಿಕ್ಷಣ ಸಂಸ್ಥೆಗಳು ಡಿಗ್ರಿ ಉತ್ಪಾದಿಸುವ ಕಾರ್ಖಾನೆಗಳಾಗದೆ, ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ನಿರ್ಮಾಣಕ್ಕೆ ಮುಂದಾಗಬೇಕು. ಮನುಷ್ಯನ ವ್ಯಕ್ತಿತ್ವ ನಿರ್ಮಾಣವೇ ನಿಜವಾದ ಶಿಕ್ಷಣ ಎಂದರು.
ಸಮಾರಂಭ ಉದ್ಘಾಟಿಸಿದ, 'ಸುವರ್ಣಕ್ಕೆ ಸಂದ ಸಮಯ' ಕೃತಿ ಬಿಡುಗಡೆ ಮಾಡಿದ ಬಿಜಾಪುರ ಮಹಿಳಾ ವಿವಿ ಕುಲಪತಿ ಮೀನಾ ಆರ್. ಚಂದಾವರ್‌ಕರ್ ಮಾತನಾಡಿ, 21ನೇ ಶತಮಾನದ ಆಗು-ಹೋಗುಗಳನ್ನು ನೋಡಿಕೊಂಡು ಇಂದು ನೈತಿಕ ಶಿಕ್ಷಣ ನೀಡುವುದು ಅವಶ್ಯವಾಗಿದೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಬಳ್ಳಾರಿ ವೀ.ವಿ. ಸಂಘದ ಕಾರ್ಯದರ್ಶಿ ಗುರುಸಿದ್ಧಮೂರ್ತಿ ಮಾತನಾಡಿದರು. ಹಂಪಿ ಕನ್ನಡ ವಿವಿ ಕುಲಪತಿ ಡಾ. ಹಿ.ಚಿ. ಬೋರಲಿಂಗಯ್ಯ, ದಾವಣಗೆರೆ ವಿವಿ ಕುಲಪತಿ ಪ್ರೊ. ಕಲಿವಾಳ ಬಿ.ಬಿ., ಬಸವ ಸಮಿತಿ ಅಧ್ಯಕ್ಷ ಅರವಿಂದ ಜತ್ತಿ, ವೀ.ವಿ. ಸಂಘದ ಕೋಶಾಧ್ಯಕ್ಷ ಸಂಗನಕಲ್ ಹಿಮಂತರಾಜ್, ವಿಜಯನಗರ ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ಸಾಲಿಸಿದ್ದಯ್ಯಸ್ವಾಮಿ, ಅರವಿ ಬಸವನಗೌಡ, ಬಿ. ಶಿವರಾಮ ರೆಡ್ಡಿ, ಐಗೋಳ್ ಚಿದಾನಂದ, ಪಾಲಾಕ್ಷ ರೆಡ್ಡಿ ಎಚ್., ಜಿ. ಮಹಾಲಿಂಗಯ್ಯ, ಪಿ.ಎನ್. ಶ್ರೀಪಾದ, ನಿರ್ಮಲ್ ಕುಮಾರ್ ಜೈನ್, ಕೆ. ಕೊಟ್ರೇಶ್, ಎನ್.ಎಸ್. ರೇವಣಸಿದ್ದಪ್ಪ, ಡಾ. ಪದ್ಮಿನಿರಾವ್ ಇತರರಿದ್ದರು. ಎಸ್.ಎಸ್. ಪೊಲೀಸ್ ಪಾಟೀಲ್ ಸ್ವಾಗತಿಸಿ, ಡಾ. ಎಸ್.ವೈ. ತಿಮ್ಮಾರೆಡ್ಡಿ ನಿರೂಪಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.