ಮೋದಿ ಪ್ರಧಾನಿಯಾದ್ರೆ ದೇಶಕ್ಕೆ ಕಂಟಕ
ಹೊಸಪೇಟೆ: ಮೋದಿ ಗುಜರಾತ್ ಸಿಎಂ ಆಗಿದ್ದಾಗ 2002ರಲ್ಲಿ ಗೋಧ್ರಾ ಹತ್ಯಾಕಾಂಡದಲ್ಲಿ 3 ಸಾವಿರಕ್ಕೂ ಅಧಿಕ ಮುಸ್ಲಿಂ ಹೆಣ್ಮಕ್ಕಳನ್ನು ತ್ರಿಶೂಲದಿಂದ ಇರಿದು ಹತ್ಯೆ ನಡೆಸಲಾಯಿತು. ಬಿಜೆಪಿ ಹಿಂಸೆ ನಂಬಿದ ಪಕ್ಷ. ಇಂಥವರು ಪ್ರಧಾನಿಯಾದರೆ ದೇಶ ಸುರಕ್ಷಿತವಾಗಿರಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಹೊಸಪೇಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎನ್.ವೈ. ಹನುಮಂತಪ್ಪ ಪರ ಮತ ಪ್ರಚಾರದ ಬಹಿರಂಗ ಸಭೆಯಲ್ಲಿ ಮಾತನಾಡಿದ ಅವರು, ಇಷ್ಟು ದಿನ ನನಗೆ ಹೆಂಡತಿಯಿಲ್ಲ ಎಂದ ಮೋದಿ ಇದ್ದಾಳೆ ಎನ್ನುತ್ತಾರೆ. ತನ್ನ ಪತ್ನಿ ಸಾಕಲಾಗದವರು ದೇಶವನ್ನು ಹೇಗೆ ಅಭಿವೃದ್ಧಿಪಡಿಸುತ್ತಾರೆ? ಮೋದಿ ಪ್ರಧಾನಿಯಾಗದಂತೆ, ಶ್ರೀರಾಮುಲು ಗೆಲ್ಲದಂತೆ ಮತದಾರರು ಕಾಂಗ್ರೆಸ್ ಅಭ್ಯರ್ಥಿ ಎನ್.ವೈ. ಹನುಮಂತಪ್ಪಗೆ ಮತ ಹಾಕಬೇಕೆಂದು ವಿನಂತಿಸಿದರು.
ಆಸ್ಪತ್ರೆಗಳಿಗೆ ಭೇಟಿ ನೀಡಿ ಸಮಸ್ಯೆ ಅರ್ಥ ಮಾಡಿಕೊಳ್ಳದ ಆಗಿನ ಆರೋಗ್ಯ ಸಚಿವ ಬಿ. ಶ್ರೀರಾಮುಲು, ಸಿಎಂ ಬಿ.ಎಸ್. ಯಡಿಯೂರಪ್ಪ ಕೇಂದ್ರ ಸರ್ಕಾರ ಜಾರಿಗೊಳಿಸಿದ ಆರೋಗ್ಯ ಕವಚ ವಾಹನ ಮೇಲೆ ತಮ್ಮ ಭಾವಚಿತ್ರಗಳನ್ನು ಹಾಕಿಸಿಕೊಂಡು ಪ್ರಚಾರ ಪಡೆದರು. ಬಳ್ಳಾರಿ ಜಿಲ್ಲೆಯಲ್ಲಿ ಜನಾರ್ದನ ರೆಡ್ಡಿ, ಶ್ರೀರಾಮುಲು ಹೇಳಿದಂತೆ ಎಲ್ಲ ಅಧಿಕಾರಿಗಳು ಕೇಳಬೇಕು, ಜನ ಸಹಕರಿಸಬೇಕಿತ್ತು. ಈ ಅಂಶವನ್ನು ಆಗಿನ ಲೋಕಾಯುಕ್ತ ನ್ಯಾ. ಸಂತೋಷ ಹೆಗ್ಡೆ ಲೋಕಾಯುಕ್ತ ವರದಿಯಲ್ಲಿ ತಿಳಿಸಿದ್ದಾರೆ. ಜನಾರ್ದನ ರೆಡ್ಡಿ ಸರ್ವಾಧಿಕಾರಿಯಾಗಿ ಅಧಿಕಾರ ನಡೆಸುತ್ತಾರೆ. ವಿಧಾನಸಭೆಯಲ್ಲೂ ರೆಡ್ಡಿ ಸಹೋದರರು ಬಳ್ಳಾರಿ ಬನ್ನಿ ನೋಡಿಕೊಳ್ಳುವುದಾಗಿ ಹೇಳಿದ್ದರು. ನಾವೆಲ್ಲ ಬಂದರೆ ಅವರೇ ಓಡಿ ಹೋಗಿದ್ದರು. ಅಂದಿನಿಂದಲೇ ಜನಾರ್ದನ ರೆಡ್ಡಿ ಕೌಂಟ್‌ಡೌನ್ ದಿನಗಳು ಆರಂಭವಾದವು ಎಂದು ಸ್ಮರಿಸಿಕೊಂಡರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

