ಬಿಜೆಪಿಗರ ಮಾತು ಕೇಳಬೇಡಿ
ಹೊಸಪೇಟೆ: ಮೋದಿ ಬೂದಿ ಹಚ್ಚಿಕೊಂಡು ಮತ ಯಾಚಿಸುತ್ತಿರುವ ಬಿಜೆಪಿಗರ ಮಾತಿಗೆ ಮತದಾರರು ಕಿವಿಗೊಡಬೇಡಿ ಎಂದು ಕೇಂದ್ರ ಮಾಜಿ ಸಚಿವ ಸಿ.ಎಂ. ಇಬ್ರಾಹಿಂ ಹೇಳಿದರು.
ಹೊಸಪೇಟೆಯಲ್ಲಿ ಶುಕ್ರವಾರ ಕಾಂಗ್ರೆಸ್ ಅಭ್ಯರ್ಥಿ ಎನ್.ವೈ. ಹನುಮಂತಪ್ಪ ಪರ ಮತಯಾಚನೆಯ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು,
ದೇಶದಲ್ಲಿ ಮೋದಿ ಹವಾ ಇದೆ ಎಂದು ಬುರುಡೆ ಬಿಡುತ್ತಿದ್ದಾರೆ. ಮೋದಿ ಬಲೂನು ಒಡೆದಾಗ ಬಿಜೆಪಿ ನಾಯಕರೆಲ್ಲ ಠುಸ್ಸೆನ್ನುತ್ತಾರೆ. ರಾಜ್ಯದಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಚುನಾವಣೆ ಪ್ರಚಾರ ಮಾಡಿದ ಮೋದಿ ಜೈಲುವಾಸ ಅನುಭವಿಸಿ ಬಂದ ಬಿ.ಎಸ್. ಯಡಿಯೂರಪ್ಪ, ಕಟ್ಟಾಸುಬ್ರಹ್ಮಣ್ಯ ನಾಯ್ಡು ಅವರನ್ನು ಅಕ್ಕಪಕ್ಕ ಕುಳ್ಳರಿಸಿಕೊಂಡು ಕಾಂಗ್ರೆಸ್ನವರ ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಾರೆ. ಹೀಗೆ ಹೇಳುವ ಮೋದಿ ಭ್ರಷ್ಟರು ಯಾರೆಂಬುದನ್ನು ಅರ್ಥ ಮಾಡಿಕೊಳ್ಳಲಿ. ರೆಡ್ಡಿ ಸೋದರರು, ಶ್ರೀರಾಮುಲು ಅಧಿಕಾರದಲ್ಲಿದ್ದಾಗ ಅವರ ವಿರುದ್ಧ ಯಾರೂ ಮಾತನಾಡದ ಸ್ಥಿತಿಯಿತ್ತು. ರಿಪಬ್ಲಿಕ್ ಆಫ್ ಬಳ್ಳಾರಿ ಎನ್ನುತ್ತಿದ್ದ ಜಿಲ್ಲೆಗೆ ಪಾದಯಾತ್ರೆ ಮೂಲಕ ಹೋರಾಟ ಮಾಡಿ ಸ್ವಾತಂತ್ರ್ಯ ದೊರಕಿಸಿಕೊಟ್ಟವರು ಸಿದ್ದರಾಮಯ್ಯ. ಶ್ರೀರಾಮುಲುಗೆ ಪುನಃ ಅವಕಾಶ ನೀಡಬೇಡಿ ಎಂದು ಮತದಾರರಲ್ಲಿ ವಿನಂತಿಸಿಕೊಂಡರು.
ಕಾಂಗ್ರೆಸ್ ಸೇರಿದ ಮಾಜಿ ಶಾಸಕ ಸಿರಾಜ್ ಶೇಖ್ ಅವರನ್ನು ಸಿಎಂ ಸಿದ್ದರಾಮಯ್ಯ ಸ್ವಾಗತಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

