ಮತಗಟ್ಟೆಗಳ ಮೇಲೆ ತೀವ್ರ ನಿಗಾ
ಕಂಪ್ಲಿ: ಪಟ್ಟಣದಲ್ಲಿ 24 ಹೆಚ್ಚು ವೆಚ್ಚದ ಮತಗಟ್ಟೆಗಳನ್ನು ಗುರುತಿಸಿದ್ದು, ಈ ಮತಗಟ್ಟೆಗಳ ವ್ಯಾಪ್ತಿಯಲ್ಲಿನ ಚಲನವಲನಗಳ ಮೇಲೆ ತೀವ್ರ ನಿಗಾವಹಿಸಲು ಜಾಗ್ರತ ತಂಡಗಳನ್ನು ರಚಿಸಲಾಗಿದೆ ಎಂದು ಪುರಸಭೆ ಕಂದಾಯ ಅಧಿಕಾರಿ ಎಸ್.ಆರ್. ಫಣಿರಾಜ್ ತಿಳಿಸಿದರು.
ಸ್ಥಳೀಯ ಪುರಸಭೆಯಲ್ಲಿ ಶುಕ್ರವಾರ ಜಾಗೃತ ದಳ ಸದಸ್ಯರಿಗೆ ಮಾಹಿತಿ ನೀಡಿಕೆ ಸಭೆಯಲ್ಲಿ ಅವರು ಮಾತನಾಡಿದರು.
ಪಟ್ಟಣದ 23 ವಾರ್ಡ್ಗಳಲ್ಲಿ ಒಟ್ಟು 29 ಮತಗಟ್ಟೆಗಳಿದ್ದು, ಇವುಗಳಲ್ಲಿ 24 ಹೆಚ್ಚು ವೆಚ್ಚದ ಮತಗಟ್ಟೆಗಳೆಂದು ಪರಿಗಣಿಸಲಾಗಿದೆ. ಪ್ರತಿ ಜಾಗೃತಿ ತಂಡದಲ್ಲಿ ಒಬ್ಬ ಮೇಲ್ವಿಚಾರಕ, ಓರ್ವ ತಂಡದ ನಾಯಕ, ಪೌರ ಕಾರ್ಮಕರು, ಅಂಗನವಾಡಿ ಕಾರ್ಯಕರ್ತರು, ಸಹಾಯಕರು, ನೀರು ಸರಬರಾಜು ಮತ್ತು ಪಂಪ್ ಆಪರೇಟರ್ ಸಿಬ್ಬಂದಿ ಸೇರಿ 6ರಿಂದ 8 ಜನರಿದ್ದಾರೆ. ಜಾಗೃತಿ ತಂಡ ತಮ್ಮ ವ್ಯಾಪ್ತಿಯ ಮತಗಟ್ಟೆಗಲ್ಲಿ 24್ಢ7 ಕಾಲಾವಧಿಯಲ್ಲಿ ನಿರಂತರ ನಿಗಾ ವಹಿಸಬೇಕು ಎಂದು ಹೇಳಿದರು.
ಈ ಪ್ರದೇಶಗಳಲ್ಲಿ ಮತದಾರರಿಗೆ ಆಮಿಷ ಒಡ್ಡುವ ಯಾವುದೇ ಘಟನೆಗಳು ಹಾಗೂ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಘಟನೆಗಳು ಕಂಡು ಬಂದಲ್ಲಿ ಕೂಡಲೇ ಮೇಲ್ವಿಚಾರಕರ ಗಮನಕ್ಕೆ ಕಡ್ಡಾಯವಾಗಿ ತರಬೇಕು. ಮೇಲ್ವಿಚಾರಕರು ಫ್ಲೈಯಿಂಗ್ ಸ್ಕ್ವಾಡ್ ಅಥವಾ ಸ್ಟ್ಯಾಟಿಕ್ ಸರ್ವೇವಲ್ ತಂಡದ ಗಮನಕ್ಕೆ ತರಬೇಕು. ಉದಾಸೀನ ತೋರಿದಲ್ಲಿ ಜಾಗ್ರತ ತಂಡದ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ಜಾಗ್ರತ ತಂಡಗಳು ಯಾರ ಮುಲಾಜಿಗೂ ಒಳಗಾಗದೆ ಮುಕ್ತ ಹಾಗೂ ನ್ಯಾಯಯುತ ಚುನಾವಣೆಗಾಗಿ ಕರ್ತವ್ಯ ನಿಷ್ಠೆ ಹಾಗೂ ಸಮಯಪ್ರಜ್ಞೆಯಿಂದ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಹಿರಿಯ ನೈರ್ಮಲ್ಯ ನಿರೀಕ್ಷಕ ಫಕ್ರುದ್ದೀನ್, ವಿಷಯ ನಿರ್ವಾಹಕ ಎನ್. ನಜೀರ್ ಸಾಬ್, ಎಸ್. ಸೋಮಶೇಖರ್, ಅಭಿಯಂತ ಗೋಪಾಲ್, ವೆಂಕಟೇಶ್, ಅಂಜನೇಯಲು, ಜಾಗ್ರತ ತಂಡಗಳ 8 ಜನ ಮೇಲ್ವಿಚಾರಕರು, 24 ತಂಡಗಳ ನಾಯಕರು, ಅಂಗನವಾಡಿ ಮೇಲ್ವಿಚಾರಕರು, ತಂಡಗಳ ಸದಸ್ಯರು ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

