ಬಳ್ಳಾರಿ

ಮತದಾರರಸೆಳೆಯಲು ನಾನಾ ರೀತಿಯ ಕಸರತ್ತು

Published On :

ಹೂವಿನಹಡಗಲಿ: ಚುನಾವಣೆ ದಿನ ಹತ್ತಿರವಾಗುತ್ತಿದ್ದಂತೆ ಬಳ್ಳಾರಿ ಲೋಕಸಭಾ ಕ್ಷೇತ್ರದಲ್ಲಿ ವಿವಿಧ ಪಕ್ಷಗಳ ನಾಯಕರು ಸುಡು ಬಿಸಿಲು ಲೆಕ್ಕಿಸದೇ ಅಬ್ಬರದ ಪ್ರಚಾರದಲ್ಲಿ ತೊಡಗಿದ್ದಾರೆ. ಮತದಾರರನ್ನು ಸೆಳೆಯಲು ಎಲ್ಲ ರೀತಿಯ ಪ್ರಯತ್ನ ಮಾಡುತ್ತಿದ್ದಾರೆ.
ಈಗಾಗಲೇ ಬಿಜೆಪಿ, ಕಾಂಗ್ರೆಸ್, ಜೆಡಿಎಸ್, ಆಮ್ ಆದ್ಮಿ, ಎಸ್‌ಯುಸಿಐ ಪಕ್ಷಗಳು ಒಂದು ಸುತ್ತಿನ ಬಹಿರಂಗ ಪ್ರಚಾರ ನಡೆಸಿದ್ದು, ಈಗ ಮನೆ ಮನೆಗೆ ತೆರಳಿ ಮತ ಬೇಟೆಯಾಡಲು ಪ್ರಚಾರ ಮಾಡುತ್ತಿದ್ದಾರೆ.
ಪಟ್ಟಣದಲ್ಲಿ ಮಾಜಿ ಶಾಸಕ ಬಿ. ಚಂದ್ರನಾಯ್ಕ ನೇತೃತ್ವದ ತಂಡ ಬಿಜೆಪಿ ಸರ್ಕಾರ ಸಾಧನೆಗಳನ್ನು ಮುಂದಿಟ್ಟುಕೊಂಡು ಅಭ್ಯರ್ಥಿ ಬಿ. ಶ್ರೀರಾಮುಲು ಪರ ಮನೆ ಮನೆಗಳಿಗೆ ತೆರಳಿ ಮತಯಾಚನೆ ಮಾಡುತ್ತಿದ್ದರೇ, ಅತ್ತ ಕಾಂಗ್ರೆಸ್ ಅಭ್ಯರ್ಥಿ ಎನ್.ವೈ. ಹನುಮಂತಪ್ಪ ಪರ ಯುವ ಕಾಂಗ್ರೆಸ್ ಘಟಕ ಹಣ್ಣಿ ಅಶೋಕ ನೇತೃತ್ವದಲ್ಲಿ 80ಕ್ಕೂ ಹೆಚ್ಚು ಬೈಕ್ ರ್ಯಾಲಿ ಮಾಡುವ ಮೂಲಕ ಮತದಾರರನ್ನು ಸೆಳೆಯಲು ಕಸರತ್ತು ನಡೆಸಿದೆ.
ಹಳ್ಳಿಯತ್ತ ಹೆಜ್ಜೆ ಹಾಕಿದ ನಾಯಕರು
ಚುನಾವಣೆ ಬಂದಾಗೊಮ್ಮೆ ಮತದಾರರನ್ನು ಭೇಟೆ ಮಾಡುತ್ತಿರುವ ರಾಜಕೀಯ ನಾಯಕರು ಹಳ್ಳಿಯತ್ತ ಮುಖ ಮಾಡಿದ್ದಾರೆ. ತಾಲೂಕಿನ ಕೊನೆ ಭಾಗದ ಹಳ್ಳಿಗಳನ್ನು ಬಿಡದಂತೆ ಭೇಟಿ ಮಾಡುತ್ತಿರುವ ನಾಯಕರಿಗೆ ಮತದಾರರ ಬೇಡಿಕೆಗಳು ಸುರಿಮಳೆಯಾಗುತ್ತಿವೆ.
ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿರುವ ಹಳ್ಳಿಗಳಲ್ಲಿ ರಸ್ತೆ, ಚರಂಡಿ, ವಿದ್ಯುತ್ ಸಮಸ್ಯೆ, ಕುಡಿಯುವ ನೀರು ಸೇರಿದಂತೆ ಇನ್ನಿತರ ಸಮಸ್ಯೆಗಳನ್ನು ಎಲ್ಲ ಪಕ್ಷದ ನಾಯಕರಿಗೆ ಮತದಾರರು ಮನವರಿಕೆ ಮಾಡುತ್ತಿದ್ದಾರೆ. ಕಿತ್ತು ಹೋಗಿರುವ ರಸ್ತೆ, ರಸ್ತೆ ಹರಿಯುತ್ತಿರುವ ಚರಂಡಿ ಕಲುಷಿತ ನೀರು, ನೀರಿನ ಬವಣೆ, ರೈತರ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಸಮಸ್ಯೆಗಳನ್ನು ನಾಯಕರಿಗೆ ಮನವರಿಕೆ ಮಾಡಲಾಗುತ್ತಿದೆ.
ಇಂಥ ಹಲವು ಸಮಸ್ಯೆಗಳಿಂದ ಮುಕ್ತಿ ಕಾಣದ ಹಳ್ಳಿ ಮತದಾರರು ಯಾರಿಗೆ ಮಣೆ ಹಾಕುತ್ತಾರೋ ಗೊತ್ತಿಲ್ಲ. ಮನೆಗೆ ಬಂದ ಎಲ್ಲ ರಾಜಕೀಯ ಪಕ್ಷದ ಮುಖಂಡರಿಗೆ ಮತ ಹಾಕುತ್ತೇವೆ ಎಂದು ಹೇಳುತ್ತಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.