ಬಳ್ಳಾರಿ

ಹಗರಿಬೊಮ್ಮನಹಳ್ಳಿ: ಬಿಜೆಪಿ ಸೇರ್ಪಡೆ

Published On :

ಹಗರಿಬೊಮ್ಮನಹಳ್ಳಿ: ಬಳ್ಳಾರಿ ಜಿಲ್ಲಾ ವಕ್ಫ್ ಬೋರ್ಡ್ ಮಾಜಿ ಅಧ್ಯಕ್ಷ ಎನ್. ನೂರ್‌ಬಾಷಾ ಸಮ್ಮುಖದಲ್ಲಿ ಹಗರಿಬೊಮ್ಮನಹಳ್ಳಿ ಪಟ್ಟಣದ ವಿವಿಧ ಪ್ರದೇಶಗಳಲ್ಲಿನ ಮುಸ್ಲಿಂ ಯುವಕರು ಬಿಜೆಪಿಗೆ ಸೇರ್ಪಡೆಯಾದರು. ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ ಪಕ್ಷದ ಲೋಕಸಭಾ ಅಭ್ಯರ್ಥಿ ಬಿ. ಶ್ರೀರಾಮುಲು ಅವರನ್ನು ಗೆಲ್ಲಿಸುವುದು ಅಗತ್ಯವಿದೆ. ಈ ದಿಸೆಯಲ್ಲಿ ಮನೆ ಮನೆಗೆ ತೆರಳಿ ಮತದಾರರ ಮನವೋಲಿಸುವ ಕಾರ್ಯ ಬಿರುಸುಗೊಳಿಸುವಂತೆ ನೂರ್ ಬಾಷಾ ಯುವಕರಲ್ಲಿ ಮನವಿ ಮಾಡಿದರು.
ಪಟ್ಟಣದ ಯುವ ಮುಖಂಡ ಅಮೀನ್ ದೀನ್ ಮುಖಂಡತ್ವದಲ್ಲಿ ಇಸ್ಮಾಯಿಲ್, ಎನ್. ರಾಜಾಭಕ್ಷಿ, ಯಾಸಿನ್, ಮೆಹಬೂಬ್, ನೂರಿಸಾಬ್, ಅಲ್ತಾಫ್, ಇಮಾಮ್, ಹಜರತ್, ನಜೀರ್, ಕಲಂದರ್, ಇಮ್ರಾನ್, ರೆಹಮಾನ್, ದಾದು, ಪೀರಾ ಹನ್ಸಿ, ಎನ್. ಖಾಜಾಸಾಬ್, ಮದರ್ ಸಾಬ್, ರಜಕ್ ಸಾಬ್ ಬಿಜೆಪಿಗೆ ಸೇರ್ಪಡೆಗೊಂಡರು. ವಕ್ಫ್ ಬೋರ್ಡ್ ಮಾಜಿ ಉಪಾಧ್ಯಕ್ಷ ಮಹಮ್ಮದ್ ಸಫುಲ್ಲಾ ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.