ಬಳ್ಳಾರಿ

ಅಂಬೇಡ್ಕರ್ ತತ್ವ ಅಳವಡಿಸಿಕೊಳ್ಳಿ

Published On :

ಹೊಸಪೇಟೆ: ಶೋಷಿತ ವರ್ಗಗಳ ಧ್ವನಿಯಾದ ಡಾ. ಬಿ.ಆರ್. ಅಂಬೇಡ್ಕರ್ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹಂಪಿ ಕನ್ನಡ ವಿವಿ ಉಪ ಕುಲಸಚಿವ ಡಾ. ಎ. ವೆಂಕಟೇಶ್ ಹೇಳಿದರು.
ಹಂಪಿ ಕನ್ನಡ ವಿವಿಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಭಾರತರತ್ನ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ 123ನೇ ಜನ್ಮ ದಿನಾಚರಣೆ ಹಾಗೂ ಡಾ. ಬಾಬು ಜಗಜೀವನ್ ರಾಮ್‌ರ 107ನೇ ಜನ್ಮ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.
ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಯೊಬ್ಬರಿಗೂ ಸ್ವಾತಂತ್ರ್ಯ, ಸ್ವಾಭಿಮಾನ, ಶಿಕ್ಷಣ ದೊರೆಯುವಂತಾಗಬೇಕು ಎಂದು ಧ್ವನಿ ಎತ್ತಿದವರು ಎಂದು ತಿಳಿಸಿದರು.
ಹಂಪಿ ಕನ್ನಡ ವಿವಿ ಪ್ರಾಧ್ಯಾಪಕ ಮತ್ತು ಸಮಾಜ ವಿಜ್ಞಾನ ನಿಕಾಯದ ಡೀನ್ ಡಾ. ಕೆ.ಎಂ. ಮೇತ್ರಿ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ, ಡಾ. ಬಿ.ಆರ್. ಅಂಬೇಡ್ಕರ್ ರಚಿಸಿದ ಭಾರತದ ಸಂವಿಧಾನ ಪ್ರಪಂಚಕ್ಕೆ ಮಾದರಿಯಾಗಿದೆ. ಅಲ್ಲದೆ ಸಾಮಾಜಿಕ ನ್ಯಾಯಕ್ಕಾಗಿ ಅಂಬೇಡ್ಕರ್ ಅವಿರತ ಶ್ರಮಿಸಿದ್ದನ್ನು ಮರೆಯಬಾರದು ಎಂದರು. ಹಂಪಿ ಕನ್ನಡ ವಿವಿಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವಿಶೇಷ ಘಟಕದ ಸಂಯೋಜನಾಧಿಕಾರಿ ಡಾ. ತಾರಿಹಳ್ಳಿ ಹನುಮಂತಪ್ಪ ಇತರರು ಸಭೆಯಲ್ಲಿ ಭಾಗವಹಿಸಿದ್ದರು. ಅಂಬಿಕಾ ಮತ್ತು ಹನುಮೇಶ ಪ್ರಾರ್ಥಿಸಿದರು. ಧರ್ಮವೀರ ನಿರೂಪಿಸಿದರು. ಹುಲುಗಪ್ಪ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.