371 ಜೆ ತಿದ್ದುಪಡಿಗೆ ಕಾಂಗ್ರೆಸ್ ಕಾರಣ: ಪನ್ನರಾಜ್
ಕನ್ನಡಪ್ರಭ ವಾರ್ತೆ, ಬಳ್ಳಾರಿ, ಏ. 14
ಸ್ವಾತಂತ್ರ್ಯ ಬಂದಾಗ ಎಷ್ಟು ಸಂತೋಷವಾಗಿತ್ತೋ, ಅಷ್ಟೇ ಸಂತೋಷ ಹೈದರಾಬಾದ್ ಕರ್ನಾಟಕದ 371ಜೆ ತಿದ್ದುಪಡಿಯಾದ ಸಂದರ್ಭದಲ್ಲಿ ಬಳ್ಳಾರಿ ಜನತೆಗೆ ಆಗಿದೆ. ತಿದ್ದುಪಡಿಗೆ ಕಾಂಗ್ರೆಸ್ ಕಾರಣವಾಗಿದ್ದು, ಕಾಂಗ್ರೆಸ್ಗೆ ಮತ ನೀಡುವ ಮೂಲಕ ಅವರನ್ನು ಬೆಂಬಲಿಸೋಣ ಎಂದು ಹೈದರಾಬಾದ್ ಕರ್ನಾಟಕ ಹೋರಾಟ ಸಮಿತಿ, ವೀರಶೈವ ಸಮಾಜದ ಮುಖಂಡ ಸಿರಿಗೇರಿ ಪನ್ನರಾಜ್ ವಿನಂತಿಸಿದರು.
ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಎಲ್.ಕೆ. ಆಡ್ವಾಣಿ ಸೇರಿದಂತೆ ಬಿಜೆಪಿಯ ಹಲವು ನಾಯಕರು ಹೈದರಾಬಾದ್ ಕರ್ನಾಟಕದ 371ಜೆ ತಿದ್ದುಪಡಿಗೆ ವಿರೋಧ ವ್ಯಕ್ತಪಡಿಸಿದ್ದರು. ರಾಜ್ಯದಿಂದಲೇ ರಾಜ್ಯಸಭೆಗೆ ಆಯ್ಕೆಯಾಗಿ ಹೋಗಿದ್ದ ವೆಂಕಯ್ಯನಾಯ್ಡು ವಿರೋಧ ತೋರಿದ್ದರು. 371 ಜೆ ತಿದ್ದುಪಡಿಗೆ ಕಾಂಗ್ರೆಸ್ ಕಾರಣವಾಗಿರುವುದರಿಂದ ಅವರಿಗೆ ಮತ ಹಾಕಬೇಕು ಎಂದು ಮನವಿ ಮಾಡಿದರು.
ಕಳಂಕ: ಬಿಜೆಪಿ ಸರ್ಕಾರದ ಆಡಳಿತಾವಧಿಯಲ್ಲಿ ಜನರು ಭಯದ ವಾತಾವರಣದಲ್ಲಿಯೇ ಬದುಕುತ್ತಿದ್ದರು. ಎಲ್ಲ ರಾಜಕೀಯ ಪಕ್ಷಗಳಲ್ಲಿ ಹಿರಿಯರ ಮಾತನ್ನು ಎಲ್ಲರೂ ಕೇಳುತ್ತಾರೆ. ಆದರೆ ಬಿಜೆಪಿಯಲ್ಲಿ ಬಳ್ಳಾರಿಯವರ ಮಾತನ್ನು ಪಕ್ಷದ ಮುಖಂಡರು ಕೇಳುತ್ತಿದ್ದರು ಎನ್ನುವುದು ಪ್ರಜಾಪ್ರಭುತ್ವದ ದೊಡ್ಡ ದುರಂತ. ಅವರ ಕರ್ನಾಟಕ ರಾಜಕೀಯ ಪರಂಪರೆಗೆ ಕಳಂಕ ತಂದಿದ್ದರು ಎಂದರು.
'ಕರ್ನಾಟಕ ಇಂಡಸ್ಟ್ರೀಸ್ ಪಾಲಿಸಿ 2014' ಮತ್ತು ವಿಶೇಷ ತೆರಿಗೆ ವಿನಾಯ್ತಿಯನ್ನು ಹೈದರಾಬಾದ್ ಕರ್ನಾಟಕಕ್ಕೆ ನೀಡಬೇಕೆಂದು ಹೈದರಾಬಾದ್ ಕರ್ನಾಟಕ ಹೋರಾಟ ಸಮಿತಿಯ ವತಿಯಿಂದ ಸಿಎಂಗೆ ಬೇಡಿಕೆ ಸಲ್ಲಿಸಲಾಗಿದೆ. ಚುನಾವಣೆ ಬಳಿಕ ಕಾರ್ಯೋನ್ಮುಖರಾಗುವುದಾಗಿ ಸಿದ್ದರಾಮಯ್ಯ ತಿಳಿಸಿದ್ದಾರೆ ಎಂದರು.
ಮುಖಂಡರಾದ ವಿ. ಜನಾರ್ದನ, ಗಾದಿಲಿಂಗಪ್ಪ ಇತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

