ಬಳ್ಳಾರಿ

ಮತದಾನ ಜಾಗೃತಿ: ಪಥಸಂಚಲನ

Published On :

ಬಳ್ಳಾರಿ: ಏ. 17ರಂದು ನಡೆಯುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತದಾರರು ನಿರ್ಭಿತಿಯಿಂದ ಮತಹಾಕುವಂತೆ ಜನರಿಗೆ ಮನವರಿಕೆ ಮಾಡಿಕೊಡುವ ಉದ್ದೇಶದಿಂದ ಪೊಲೀಸ್ ಇಲಾಖೆ ಅರೆಸೇನಾಪಡೆ, ಸ್ಥಳೀಯ ಪೊಲೀಸ್ ಸಿಬ್ಬಂದಿ ಬಳ್ಳಾರಿ ನಗರ ಹಾಗೂ ನಗರಕ್ಕೆ ಹೊಂದಿಕೊಂಡಿರುವ ಗ್ರಾಮದಲ್ಲಿ ಪಥಸಂಚಲನ ನಡೆಸುವ ಮೂಲಕ ಮತದಾರರಿಗೆ ಸುರಕ್ಷತೆ, ನಿರ್ಭೀತಿ ಮತದಾನ ಕುರಿತು ಜಾಗೃತಿ ಮೂಡಿಸಿದರು.
ಬಳ್ಳಾರಿ ನಗರದಲ್ಲಿ ಬೆಳಗ್ಗೆಯಿಂದ ಸಂಜೆವರೆಗೆ ಪಥಸಂಚಲ ನಡೆಸಲಾಯಿತು. ನಗರದ ಕಪ್ಪಗಲ್ ರಸ್ತೆ, ತಾಳೂರು ರಸ್ತೆ, ಗಾಂಧಿನಗರ, ಹುಸೇನ್‌ನಗರ, ಶ್ರೀರಾಂಪುರ ಕಾಲನಿ, ಅಂದ್ರಾಳ್ ರಸ್ತೆ, ಕೌಲ್‌ಬಜಾರ್, ತ ರೇಡಿಯೋ ಪಾರ್ಕ್, ದೇವಿನಗರ, ಅವಂಭಾವಿ, ಕೊಳಗಲ್ ಸೇರಿದಂತೆ ಬಳ್ಳಾರಿ ನಗರದ ಬಹುತೇಕ ಬಡಾವಣೆಗಳಲ್ಲಿ ಹಾಗೂ ನಗರಕ್ಕೆ ಹೊಂದಿಕೊಂಡಿರುವ ಗ್ರಾಮಗಳಲ್ಲಿ ಪಥಸಂಚಲ ನಡೆಸಿ, ಮತದಾರರಿಗೆ ಜಾಗೃತಿ ಮೂಡಿಸಿದರು. 300ಕ್ಕೂ ಹೆಚ್ಚು ಅರೆಸೇನಾ ಪಡೆ ಹಾಗೂ ಸ್ಥಳೀಯ ಪೊಲೀಸ್ ಸಿಬ್ಬಂದಿ ಇದ್ದರು. ಮಂಗಳವಾರ ಸಿರುಗುಪ್ಪ ತಾಲೂಕಿನ ತೆಕ್ಕಲಕೋಟೆ, ಸಿರುಗುಪ್ಪ ಇತರ ಕಡೆಗಳಲ್ಲಿ ಪಥಸಂಚಲನ ನಡೆಸಲಿದ್ದಾರೆ.

ಮತದಾರರ ಜಾಗೃತಿ: ಫೋನ್ ಇನ್ ಕಾರ್ಯಕ್ರಮ
ಹೊಸಪೇಟೆ: ಲೋಕಸಭೆ ಚುನಾವಣೆಯ ಮತದಾನ ಬಳ್ಳಾರಿ ಕ್ಷೇತ್ರದಲ್ಲಿ ಏ. 17ರ ಬೆಳಗ್ಗೆ 7ರಿಂದ ಸಂಜೆ 6ರ ವರೆಗೆ ನಡೆಯಲಿದೆ ಎಂದು ಚುನಾವಣಾಧಿಕಾರಿಯಾದ ಜಿಪಂ ಮುಖ್ಯ ಯೋಜನಾಧಿಕಾರಿ ಚಂದ್ರಶೇಖರ ಗುಡಿ, ತಹಸೀಲ್ದಾರ್ ರಮೇಶ್ ಕೋನರಡ್ಡಿ ಹೇಳಿದರು. ನಗರದ ಆಕಾಶವಾಣಿಯಲ್ಲಿ ಸೋಮವಾರ ಮತದಾರರ ಜಾಗೃತಿಗಾಗಿ ಫೋನ್ ಇನ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೂಲಿಕಾರ್ಮಿಕರಿಗೆ ಮತದಾನದಲ್ಲಿ ಭಾಗವಹಿಸಲು ಅನುಕೂಲವಾಗಲಿ ಎಂದು ಈ ಸಮಯ ನಿಗದಿಪಡಿಸಿದೆ. ಮತದಾರ ಆಮಿಷಕ್ಕೆ ಒಳಗಾಗದೆ ನಿರ್ಭೀತಿಯಿಂದ ಮತ ಚಲಾಯಿಸಬೇಕು. ಮತದಾನ ಅತ್ಯಂತ ಪವಿತ್ರ ಕಾರ್ಯ. ಮತದಾನಕ್ಕೆ ಮತದಾರರ ಪಟ್ಟಿಯಲ್ಲಿ ಹೆಸರು ಪರಿಶೀಲಿಸಿ. ಮತದಾರರ ಗುರುತಿನ ಚೀಟಿ, ಆಧಾರ್ ಚೀಟಿ, ರೇಷನ್ ಕಾರ್ಡು ಇಲ್ಲವೆ ಯಾವುದಾದರೂ ಒಂದು ಗುರುತಿನ ಚೀಟಿ ತೋರಿಸಿ ಮತ ಚಲಾಯಿಸಿ ಎಂದು ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.