ಸ್ಟ್ರಾಂಗ್ರೂಂಗೆ 15 ಸಿಸಿ ಕ್ಯಾಮೆರಾ
ಕನ್ನಡಪ್ರಭ ವಾರ್ತೆ, ಬಳ್ಳಾರಿ, ಏ. 18
ಇವಿಎಂ ಯಂತ್ರಗಳನ್ನು ಸಂಗ್ರಹಿಸಿರುವ ಸ್ಟ್ರಾಂಗ್ ರೂಮ್ ವ್ಯವಸ್ಥೆ ಮಾಡಿರುವ ಸ್ಥಳದಲ್ಲಿ ಸುಮಾರು 15 ಸಿಸಿ ಕ್ಯಾಮೆರಾ ಅಳವಡಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಅಮ್ಲಾನ್ ಆದಿತ್ಯ ಬಿಸ್ವಾಸ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಚೇತನ್ಸಿಂಗ್ ರಾಥೋಡ್ ತಿಳಿಸಿದ್ದಾರೆ.
ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಸಿ ಕ್ಯಾಮೆರಾಗಳು ಸೆರೆ ಹಿಡಿಯುವ ದೃಶ್ಯವನ್ನು ವೀಕ್ಷಣೆಯ ವ್ಯವಸ್ಥೆಯನ್ನು ಅಲ್ಲಿಯೇ ಮಾಡಲಾಗಿದೆ. ಅಗತ್ಯ ಬಿದ್ದರೆ ಹೆಚ್ಚಿನ ಕ್ಯಾಮೆರಾಗಳನ್ನು ಅಳವಡಿಸಲಾಗುತ್ತದೆ. ಈಗಾಗಲೇ ಬೇಕಾಗುವ ಅಗತ್ಯ ಭದ್ರತೆ ಒದಗಿಸಲಾಗಿದೆ ಎಂದರು.
ಈ ಲೋಕಸಭಾ ಕ್ಷೇತ್ರದಲ್ಲಿ 12 ಮಾದರಿ ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದ ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾರ್ವತಿ ನಗರದ ಪಾರ್ಕ್ ಬಳಿ ಇರುವ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಮತಗಟ್ಟೆ 72ರಲ್ಲಿ ಶೇ. 53.43, ಮತಗಟ್ಟೆ 73ರಲ್ಲಿ ಶೇ. 52.52, ಮತಗಟ್ಟೆ 74ರಲ್ಲಿ ಶೇ. 60.13ರಷ್ಟು, ತಹಸೀಲ್ದಾರ್ ಕಚೇರಿ ಆವರಣದಲ್ಲಿರುವ ಹಿಂದು ಧಾರ್ಮಿಕ ದತ್ತಿ ಇಲಾಖೆ ಸಹಾಯಕ ಆಯುಕ್ತರ ಕಚೇರಿಯಲ್ಲಿ ಸ್ಥಾಪಿಸಿದ್ದ ಮತಗಟ್ಟೆ 119ರಲ್ಲಿ ಶೇ. 51.31, ಮತಗಟ್ಟೆ 121ರಲ್ಲಿ ಶೇ. 67.16ರಷ್ಟು ಮತದಾನವಾಗಿದೆ ಎಂದು ತಿಳಿಸಿದ್ದಾರೆ.
ಬಳ್ಳಾರಿ ಗ್ರಾಮೀಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ತಾಲೂಕು ಪಂಚಾಯಿತಿ ಕಚೇರಿಯಲ್ಲಿ ಸ್ಥಾಪಿಸಿದ್ದ ಮತಗಟ್ಟೆ 22ರಲ್ಲಿ ಶೇ. 60.10ರಷ್ಟು, 23ರಲ್ಲಿ ಶೇ. 61.26, 25ರಲ್ಲಿ ಶೇ. 63.24ರಷ್ಟು ಮತದಾನವಾಗಿದೆ. ವಿಜಯ ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಹೊಸಪೇಟೆಯ ಹುಡಾ ಕಚೇರಿಯಲ್ಲಿ ಸ್ಥಾಪಿಸಿದ್ದ ಮತಗಟ್ಟೆಯಲ್ಲಿ ಶೇ. 68.73ರಷ್ಟು ಹೊಸಪೇಟೆ ನಗರಸಭೆ ಕಚೇರಿಯ ಹೊಸ ಕಟ್ಟಡದಲ್ಲಿ ಸ್ಥಾಪಿಸಿದ್ದ ಮತಗಟ್ಟೆಯಲ್ಲಿ ಶೇ. 69.39ರಷ್ಟು, ಸಂಡೂರು ವಿಧಾನಸಭೆ ವ್ಯಾಪ್ತಿಯ ತೋರಣಗಲ್ಲಿನಲ್ಲಿರುವ ವಿಶಾಲ ಬಾಲವಾಡಿ ಜೆಎಸ್ಡಬ್ಲ್ಯು ಫೌಂಡೇಷನ್ನಲ್ಲಿ ಸ್ಥಾಪಿಸಿದ್ದ ಮತಗಟ್ಟೆ 92ರಲ್ಲಿ ಶೇ. 69.76, 93ರಲ್ಲಿ ಶೇ. 61.60ರಷ್ಟು ಮತದಾನವಾಗಿದೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

