ವೈದ್ಯರ ಮೇಲೆ ಹಲ್ಲೆ: ಬಂಧನಕ್ಕೆ ಆಗ್ರಹ
ಹಗರಿಬೊಮ್ಮನಹಳ್ಳಿ: ಹಗರಿಬೊಮ್ಮನಹಳ್ಳಿ ಪಟ್ಟಣದ ರಾಮನಗರದಲ್ಲಿನ ಗಂಗಾವತಿ ಭೀಮಪ್ಪನವರ್ ಸರ್ಕಾರಿ ಆಸ್ಪತ್ರೆಯ ಸ್ಟಾಫ್ ನರ್ಸ್ ಸಾವಿಗೆ ಆಸ್ಪತ್ರೆಯ ಮುಖ್ಯ ವೈಧ್ಯಾಧಿಕಾರಿಯೇ ಕಾರಣ ಎಂದು ಅವರ ಮೇಲೆ ಹಲ್ಲೆ ನಡೆಸಿದವರನ್ನು ಬಂಧಿಸುವಂತೆ ಒತ್ತಾಯಿಸಿ ಭಾರತೀಯ ವೈದ್ಯಕೀಯ ಸಂಘ ಹಾಗೂ ಹಲವು ಸಂಘಸಂಸ್ಥೆಗಳ ಪದಾಧಿಕಾರಿಗಳು ಪಟ್ಟಣದ ಪೊಲೀಸರಿಗೆ ಮನವಿ ಸಲ್ಲಿಸಿದ್ದಾರೆ.
ಗರ್ಭಕೋಶದ ಶಸ್ತ್ರ ಚಿಕಿತ್ಸೆ ವೇಳೆಯಲ್ಲಿ ಸ್ಟಾಫ್ ನರ್ಸ್ ಖಷ್ಣುದ್ ಬಾನು ಏ. 16ರಂದು ಸಾವನ್ನಪ್ಪಿದ್ದಳು. ಈ ವೇಳೆ ಮೃತಳ ಕುಟುಂಬದವರು ನರ್ಸ್ ಸಾವಿಗೆ ಮುಖ್ಯ ವೈದ್ಯಾಧಿಕಾರಿ ಪ್ರಕಾಶ ರೆಡ್ಡಿಯೇ ಕಾರಣ ಎಂದು ಆರೋಪಿಸಿ, ಆಸ್ಪತ್ರೆ ಮುಂದೆ ಶವವಿಟ್ಟು ಪ್ರತಿಭಟಿಸಿದ್ದರು. ಅಲ್ಲದೆ ವೈದ್ಯರ ಮೇಲೆ ಕೊಲೆ ಆರೋಪದ ದೂರು ದಾಖಲು ಮಾಡಿದ್ದರು. ಇದೇ ವೇಳೆ ಮೃತಳ ಸಂಬಂಧಿಕರು ನನ್ನ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಏ. 16ರಂದು ಸಂಜೆ ಪೊಲೀಸ್ ಠಾಣೆಯಲ್ಲಿ ಮುಖ್ಯ ವೈದ್ಯಾಧಿಕಾರಿ ಪ್ರತಿ ದೂರು ದಾಖಲು ಮಾಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವೈದ್ಯರಿಗೆ ಮಧ್ಯಂತರ ನಿರೀಕ್ಷಣಾ ಜಾಮೀನು ಸಿಕ್ಕಿದೆ.
ವೈದ್ಯರ ಮೇಲೆ ಹಲ್ಲೆ ಮಾಡಿದವರನ್ನು ಬಂಧಿಸುವಂತೆ ಒತ್ತಾಯಿಸಿ ವೈದ್ಯಕೀಯ ಸಂಘದ ಡಾ. ಬಸವರಾಜರೆಡ್ಡಿ, ಡಾ. ಸತ್ಯನಾರಾಯಣ, ಬಂಡ್ರಿ ವಿಶ್ವನಾಥ, ಸಿದ್ದಮಲ್ಲಪ್ಪ, ರೊಟರಿ ಕ್ಲಬ್ ಅಂಬಾಡಿ ನಾಗರಾಜ, ಕರವೇ ನಾರಾಯಣಗೌಡ ಬಣದ ಅಧ್ಯಕ್ಷ ಎನ್.ಎಂ. ಗೌಸ್, ಮೈತ್ರಿ ಸಂಘಟನೆಯ ಅಮರನಾಥ ಚಿದ್ರಿ, ವಕೀಲರ ಸಂಘದ ಮಾಜಿ ಅಧ್ಯಕ್ಷ ಬಿ.ವಿ. ಶಿವಯೋಗಿ, ಸತ್ಸಂಗ ಸಮಿತಿ ಅಧ್ಯಕ್ಷ ಜಿ. ಲಕ್ಷ್ಮಿಪತಿ, ಎಪಿಎಂಸಿ ಸದಸ್ಯ ಹೂಗಾರ ಮಲ್ಲಣ್ಣ, ಅಕ್ಕಿ ಶಿವಕುಮಾರ ಸೇರಿದಂತೆ ಹಲವರು ವೈದ್ಯರ ಮೇಲೆ ಹಲ್ಲೆ ಮಾಡಿದವರನ್ನು ಬಂಧಿಸುವಂತೆ ಪೊಲೀಸರಿಗೆ ಮನವಿ ಸಲ್ಲಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

