ಕೊಟ್ಟೂರು: ಅಕ್ರಮ ಮರಳು ವಶ
ಕೊಟ್ಟೂರು: ಮರಳನ್ನು ಅಕ್ರಮವಾಗಿ ಬೇರೆಡೆಗೆ ಸಾಗಿಸಲೆಂದು ಸಂಗ್ರಹಿಸಿಟ್ಟಿದ್ದ ರಾಶಿಯನ್ನು ಕೂಡ್ಲಿಗಿ ತಾಲೂಕು ತಹಸೀಲ್ದಾರರು ಶುಕ್ರವಾರ ವಶಪಡಿಸಿಕೊಂಡ ಘಟನೆ ಸಮೀಪದ ಮಂಗನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಮಂಗನಹಳ್ಳಿ ಗ್ರಾಮದ ಹಳ್ಳದಿಂದ 60ರಿಂದ 70 ಲೋಡ್ನಷ್ಟು ಮರಳನ್ನು ಅಗೆದು ಗ್ರಾಮದ ಪ್ರಭಾವಿ ವ್ಯಕ್ತಿಯೊಬ್ಬರು ಅಕ್ರಮವಾಗಿ ಬೇರೆಡೆಗೆ ಸಾಗಿಸಲೆಂದು ರಾತ್ರಿಯ ಸಮಯದಲ್ಲಿ ಸಂಗ್ರಹಿಸಿಟ್ಟಿದ್ದರು ಎಂದು ಗೊತ್ತಾಗಿದೆ. ಇದರ ಮಾಹಿತಿ ಅರಿತ ಕೂಡ್ಲಿಗಿ ತಹಸೀಲ್ದಾರ್ ಎಲ್. ಕೃಷ್ಣಮೂರ್ತಿ, ಕೊಟ್ಟೂರು ಕಂದಾಯ ಅಧಿಕಾರಿ ಸೋಮನಗೌಡ, ಗ್ರಾಮ ಲೆಕ್ಕಿಗರಾದ ಸೌಭಾಗ್ಯಾ ಮತ್ತು ವಿಜಯಕುಮಾರರೊಂದಿಗೆ ಸ್ಥಳಕ್ಕೆ ಧಾವಿಸಿ ಮರಳಿನ ರಾಶಿಯನ್ನು ತಮ್ಮ ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿಕೊಂಡರು.
ಈ ಘಟನೆ ನಡೆಯುತ್ತಿದ್ದಂತೆಯೇ ಅಕ್ರಮವಾಗಿ ಸಾಗಿಸಲು ಯತ್ನಿಸಿದ್ದ ವ್ಯಕ್ತಿ ಗ್ರಾಮದಿಂದ ಪರಾರಿಯಾಗಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ.
ಮಂಗನಹಳ್ಳಿ ಗ್ರಾಮದ ಟ್ಯಾಂಕ್ ಪಕ್ಕದಲ್ಲಿ ವಶಪಡಿಸಿಕೊಂಡ ಮರಳಿನ ರಾಶಿಯನ್ನು ಸದ್ಯದ ಮಟ್ಟಿಗೆ ಕಂದಾಯ ಇಲಾಖೆ ಅಧಿಕಾರಿ ಮತ್ತು ಸಿಬ್ಬಂದಿ ಕಾಯಲು ವ್ಯವಸ್ಥೆ ಕಲ್ಪಿಸಲಾಗಿದೆ.
ಮರಳನ್ನು ವಶಪಡಿಸಿಕೊಂಡ ಬಗ್ಗೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ ಎಂದು ತಿಳಿಸಿದ ತಹಸೀಲ್ದಾರ್ ಎಲ್. ಕೃಷ್ಣಮೂರ್ತಿ, ಅಕ್ರಮವಾಗಿ ಮರಳು ಅಗೆಯುವುದು ಮತ್ತು ಸಾಗಿಸುವುದರ ಮೇಲೆ ನಿಗಾ ಇಡಲು ರಾತ್ರಿ ಪಹರೆ ಸಹ ಕಂದಾಯ ಇಲಾಖೆಯ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

