ಬಳ್ಳಾರಿ

ಬಿಜೆಪಿಗೆ 18ಕ್ಕೂ ಹೆಚ್ಚು ಸ್ಥಾನ: ಶಿವರಾಮಗೌಡ

Published On :

ಸಿರುಗುಪ್ಪ:  ಕರ್ನಾಟಕದಲ್ಲಿ ಬಿಜೆಪಿ 18ಕ್ಕೂ ಹೆಚ್ಚು ಸ್ಥಾನಗಳಲ್ಲಿ ಜಯಗಳಿಸಲಿದೆ ಎಂದು ಕೊಪ್ಪಳ ಸಂಸದ ಎನ್. ಶಿವರಾಮಗೌಡ ಭವಿಷ್ಯ ನುಡಿದರು. ತಾಲೂಕಿನ ತೆಕ್ಕಲಕೋಟೆ ಕಂಬಾಳಿ ಮಠದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಚುನಾವಣೆಯಲ್ಲಿ ಬಿಜೆಪಿಗೆ ಬಹುತೇಕ ಹೆಚ್ಚಿನ ಸ್ಥಾನಗಳು ಬರುವುದರಲ್ಲಿ ಅನುಮಾನವೇ ಇಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು. ದೇಶದಲ್ಲಿ ಕಾಂಗ್ರೆಸ್ ಸರ್ಕಾರದಿಂದ ಬೆಲೆ ಏರಿಕೆ, ಸ್ಥಿರ ಸರ್ಕಾರ ನೀಡುವಲ್ಲಿ ವೈಫಲ್ಯದಿಂದಾಗಿ ಜನರು ಬೇಸತ್ತು ಬಿಜೆಪಿಯತ್ತ ವಾಲಿದ್ದಾರೆ. ಕಳೆದ ಲೋಕಸಭಾ ಚುನಾವಣಿಯಲ್ಲಿ 17 ಜನರು ಕಣದಲ್ಲಿದ್ದು 84 ಸಾವಿರ ಮತಗಳಿಂದ ನನ್ನ ಗೆಲವಿಗೆ ಮತದಾರರು ಕಾರಣರಾಗಿದ್ದರು. ಈ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕರಡಿ ಸಂಗಣ್ಣ 1 ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲವು ಸಾಧಿಸುತ್ತಾರೆ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.