ವ್ಯಕ್ತಿತ್ವ ವಿಕಸನದಿಂದ ಶಿಕ್ಷಣ ಸಾರ್ಥಕ: ಪ್ರೊ. ಕಿನ್ನರಯ್ಯ
ಗಂಗಾವತಿ: ವಿದ್ಯಾಭ್ಯಾಸದ ಮೂಲಕ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನವಾದಾಗ ಶಿಕ್ಷಣ ಪಡೆದಿದ್ದಕ್ಕೂ ಸಾರ್ಥಕವಾಗುತ್ತದೆ ಎಂದು ಪ್ರೊ. ಕಿನ್ನರಯ್ಯ ಹೇಳಿದರು. ಅವರು ನಗರದ ಕಲ್ಮಠ ಮಹಿಳಾ ಮಹಾವಿದ್ಯಾಲಯದ ವಾರ್ಷಿಕೋತ್ಸವದಲ್ಲಿ ಮಾತನಾಡಿದರು. ಪ್ರಾಚಾರ್ಯ ಡಾ. ಶರಣಬಸಪ್ಪ ಕೋಲ್ಕಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಲ್ಮಠದ ಡಾ. ಕೊಟ್ಟೂರು ಮಹಾಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಆಡಳಿತ ಮಂಡಳಿಯ ಎಚ್. ಪ್ರಭಾಕರ, ಕೆ. ಚನ್ನಬಸಯ್ಯ, ನೂಲ್ವಿ ಮಲ್ಲಿಕಾರ್ಜುನ, ಎಚ್.ಎಂ. ಮಂಜುನಾಥ, ಸುರೇಶ ಸಿಂಗನಾಳ, ವಿದ್ಯಾರ್ಥಿನಿಯರ ಪ್ರತಿನಿಧಿ ರಜಿಯಾ ಹಾಗೂ ಎಚ್.ಎಂ. ಕಾವ್ಯ ಇದ್ದರು. ಇದೇ ಸಂದರ್ಭದಲ್ಲಿ ಹಳೆ ವಿದ್ಯಾರ್ಥಿನಿಯರ ಸಂಘದ ಅಧ್ಯಕ್ಷೆ ಹೇಮಾವತಿ ಹಂದ್ರಾಳ ಅವರಿಂದ ಏಕವ್ಯಕ್ತಿ ಚಿತ್ರಕಲಾ ಪ್ರದರ್ಶನ ನಡೆಯಿತು.
ವೀರಶೈವ, ಲಿಂಗಾಯತರು ಒಂದೇ ಧರ್ಮ, ಎರಡು ಹೆಸರು
ಸಿರುಗುಪ್ಪ: ವೀರಶೈವ ಹಾಗೂ ಲಿಂಗಾಯತರು ಬೇರೆ ಎಂದು ವಾದ ಮಾಡುವುದರಲ್ಲಿ ಅರ್ಥವಿಲ್ಲ. ಅವು ಒಂದೇ ಧರ್ಮಕ್ಕೆ ಇಟ್ಟಿರುವ ಎರಡು ಹೆಸರುಗಳೆಂದು ಅಖಿಲ ಭಾರತ ವೀರಶೈವ ಮಹಾಸಭಾ ಅಭಿಪ್ರಾಯಪಟ್ಟಿದೆ ಎಂದು ಶ್ರೀಶೈಲ ಜಗದ್ಗುರು ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಹೇಳಿದರು. ತಾಲೂಕಿನ ತೆಕ್ಕಲಕೋಟೆಯ ಕಂಬಾಳಿ ಮಠದ ಆವರಣದಲ್ಲಿ ಶುಕ್ರವಾರ ಜರುಗಿದ ಧರ್ಮಸಂದೇಶ ಕಾರ್ಯಕ್ರಮದಲ್ಲಿ ಶ್ರೀಗಳು ಆಶೀರ್ವಚನ ನೀಡಿದರು. ಸಭೆಯಲ್ಲಿ ಕಂಬಾಳಿ ಮಠದ ವೀರಭದ್ರ ಶಿವಾಚಾರ್ಯ ಸ್ವಾಮೀಜಿ, ಮಾನ್ವಿ ಕಲ್ಮಠದ ಶಿವಮೂರ್ತಿ ಶ್ರೀ, ಎಮ್ಮಿಗನೂರಿನ ವಾಮದೇವ ಮಹಾಂತ ಶ್ರೀ, ಬೂದಿಬಸವೇಶ್ವರ ಶ್ರೀ, ರೌಡಕುಂದ ಮರಿಸಿದ್ಧಲಿಂಗ ಇದ್ದರು
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

