ಇಂದಿನಿಂದ ಅಹವಾಲು ಸ್ವೀಕಾರ
ಬಳ್ಳಾರಿ: ಜಿಲ್ಲೆಯ ಲೋಕಾಯುಕ್ತ ಪೊಲೀಸ್ ಅಧೀಕ್ಷಕ (ಪ್ರಭಾರ) ಶ್ರೀಧರ್ ನೇತೃತ್ವದಲ್ಲಿ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ಏ. 28ರಿಂದ ಜಿಲ್ಲೆಯ ಎಲ್ಲ ತಾಲೂಕು ಕೇಂದ್ರಗಳಲ್ಲಿ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿ ಇತ್ಯರ್ಥಪಡಿಸಲಿದ್ದಾರೆ.
ಏ. 28ರಂದು ಸಿರುಗುಪ್ಪ ತಾಲೂಕು ಮತ್ತು ಹೂವಿನಹಡಗಲಿ, 29ರಂದು ಸಂಡೂರು ಮತ್ತು ಹಗರಿಬೊಮ್ಮನಹಳ್ಳಿ ಹಾಗೂ 30ರಂದು ಬಳ್ಳಾರಿ, ಕೂಡ್ಲಿಗಿ ಮತ್ತು ಹೊಸಪೇಟೆ ತಾಲೂಕುಗಳಲ್ಲಿ ಅಹವಾಲುಗಳನ್ನು ಸ್ವೀಕರಿಸಲಾಗುವುದು.
ಲೋಕಾಯುಕ್ತ ಪೊಲೀಸ್ ಉಪಾಧೀಕ್ಷ ಎನ್.ಆರ್. ಮಹಾಂತರೆಡ್ಡಿ ಹಾಗೂ ಪೊಲೀಸ್ ನಿರೀಕ್ಷಕರು ತಾಲೂಕುಗಳಿಗೆ ಭೇಟಿ ನೀಡಿ ಆಯಾ ತಾಲೂಕುಗಳ ಪ್ರವಾಸಿ ಮಂದಿರದಲ್ಲಿ ಬೆಳಗ್ಗೆ 11ರಿಂದ ಮಧ್ಯಾಹ್ನ 1.30ರ ವರೆಗೆ ಹೊಸಪೇಟೆ ತಾಲೂಕಿನಲ್ಲಿ ಮಧ್ಯಾಹ್ನ 2ರಿಂದ 4ರ ವರೆಗೆ ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ.
ಸರ್ಕಾರಿ ಕಚೇರಿಗಳಲ್ಲಿ ತಮ್ಮ ಕೆಲಸಗಳನ್ನು ಮಾಡಿಕೊಡಲು ಅನಗತ್ಯ ವಿಳಂಬ ಮಾಡಿದ ಸಮಸ್ಯೆಗಳಿದ್ದರೆ ಅರ್ಜಿ ಸಲ್ಲಿಸಿದರೆ ವಿಚಾರಿಸಲಾಗುವುದು. ಸಾಧ್ಯವಾದರೆ ಸ್ಥಳದಲ್ಲೇ ಇತ್ಯರ್ಥಪಡಿಸಲಾಗುವುದು.
ಸಾರ್ವಜನಿಕರಿಗೆ ತಮ್ಮ ಅರ್ಜಿಗಳ ವಿಚಾರಣೆಗೆಗಾಗಿ ಲೋಕಾಯುಕ್ತರಿಗೆ ಅರ್ಜಿ ಸಲ್ಲಿಸಲು ಅರ್ಜಿ ನಮೂನೆ 1 ಮತ್ತು 2 ಅನ್ನು ನೀಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

