ಬೌದ್ಧಿಕ, ನೈತಿಕತೆಯತ್ತ ಗಮನ ಹರಿಸಿ: ಗುರುಬಸವರಾಜ್
ಬಳ್ಳಾರಿ: ವಿದ್ಯಾರ್ಥಿಗಳು ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಯಲ್ಲೂ ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಂಡಲ್ಲಿ ಬೌದ್ಧಿಕ ಹಾಗೂ ನೈತಿಕವಾಗಿ ಸದೃಢರಾಗಿ ಬೆಳೆಯಲು ಸಾಧ್ಯ ಎಂದು ವೀ.ವಿ. ಸಂಘದ ಅಧ್ಯಕ್ಷ ಅಲ್ಲಂ ಗುರುಬಸವರಾಜ್ ಹೇಳಿದರು.
ಅವರು ನಗರದ ವೀರಶೈವ ಕಾಲೇಜು ಆವರಣದಲ್ಲಿ ಸೋಮವಾರ ನಡೆದ ಸರ್ವ ಸಂಘಗಳ ಸಮಾರೋಪದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಾಲೇಜಿನಲ್ಲಿ ವ್ಯಾಸಂಗ ಮಾಡಿ, ಪದವಿಗಳನ್ನು ಪಡೆದ ಹಲವಾರು ವಿದ್ಯಾರ್ಥಿಗಳು ರಾಷ್ಟ್ರ ಮತ್ತು ಅಂತಾರಾಷ್ಟ್ರ ಮಟ್ಟದಲ್ಲೂ ಬೆಳೆದಿದ್ದಾರೆ ಎಂದರು.
ವೀವಿ ಸಂಘದ ಉಪಾಧ್ಯಕ್ಷ ಕೆ.ಎಂ. ಮಹೇಶ್ವರಸ್ವಾಮಿ, ನ್ಯಾಯವಾದಿ ಸಂಗನಕಲ್ಲು ಇಂದುಶೇಖರ್, ಹೊಸಪೇಟೆಯ ಪ್ರೌಢದೇವರಾಯ ತಾಂತ್ರಿಕ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಅರವಿ ಬಸವನಗೌಡ ಕಾರ್ಯದರ್ಶಿ ಗುರುಸಿದ್ದಸ್ವಾಮಿ, ಸಹ ಕಾರ್ಯರ್ಶಿ ಜೆ.ಎಸ್. ನೇಪಾಕ್ಷಪ್ಪ, ಕೋಶಾಧಿಕಾರಿ ಸಂಗನಕಲ್ಲು ಹಿಮಂತರಾಜ್, ಆಡಳಿತ ಮಂಡಳಿ ಸದಸ್ಯ ಎಂ. ಶರಣಬಸವನಗೌಡ, ಎಸ್.ಎಂ. ಪ್ರಭುಸ್ವಾಮಿ, ಇಂ.ಕೆ. ಬಸವನಗೌಡ, ಆರ್. ಬಸವರಾಜ್ ಇತರರಿದ್ದರು.
ಆಡಳಿತ ಮಂಡಳಿ ಅಧ್ಯಕ್ಷ ಜಾನೆಕುಂಟೆ ಬಸವರಾಜ್ ಸ್ವಾಗತಿಸಿದರು. ಪ್ರಾಚಾರ್ಯ ಪ್ರೊ.ಪಿ. ಬಸವರಾಜ್ ವಾರ್ಷಿಕ ವರದಿ ವಾಚಿಸಿದರು. ಪ್ರೊ. ಸಿದ್ಧರಾಮ ಜೆ. ಮುಳಜೆ ನಿರ್ವಹಿಸಿದರು. ಪ್ರೊ.ಎಂ. ಮಲ್ಲಿಕಾರ್ಜುನ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

