ಇಂದಿನಿಂದ ಸಿಇಟಿ: ನಿಷೇಧಾಜ್ಞೆ ಜಾರಿ
ಬಳ್ಳಾರಿ: ಜಿಲ್ಲೆಯಲ್ಲಿ ಮೇ 1, 2ರಂದು ಸಿಇಟಿ ಪರೀಕ್ಷೆಗಳು ನಡೆಯಲಿರುವುದರಿಂದ ಪರೀಕ್ಷಾ ಕೇಂದ್ರದ ಸುತ್ತಮುತ್ತ 200 ಮೀ ವ್ಯಾಪ್ತಿ ಪ್ರದೇಶದಲ್ಲಿ ನಿಷೇರ್ಧಾಜ್ಞೆ ಜಾರಿಗೊಳಿಸಲಾಗಿದ್ದು, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಅಮ್ಲಾನ್ ಆದಿತ್ಯ ಬಿಸ್ವಾಸ್ ಆದೇಶ ಹೊರಡಿಸಿದ್ದಾರೆ.
ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸುವ ಉದ್ದೇಶದಿಂದ ಈ ನಿಷೇಧಾಜ್ಞೆ ಹೊರಡಿಸಲಾಗಿದ್ದು, ಮೇ 1 ಮತ್ತು 2ರಂದು ಪರೀಕ್ಷಾ ಕೇಂದ್ರದ ಸುತ್ತಮುತ್ತಲಿನ ಎಲ್ಲ ಜೆರಾಕ್ಸ್ ಸೆಂಟರ್, ಸೈಬರ್ ಕೆಫೆ, ಟ್ಯೂಷನ್ಗಳನ್ನು ಮುಚ್ಚುವಂತೆ ಆದೇಶಿಸಲಾಗಿದೆ. ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಪರೀಕ್ಷಾ ಸಮಯದಲ್ಲಿ ಮೊಬೈಲ್ ಫೋನ್, ಫ್ಯಾಕ್ಸ್ ಯಂತ್ರ, ಜೆರಾಕ್ಸ್, ಬ್ಲೂ-ಟೂತ್, ಪೇಜರ್, ವೈರ್ಲೆಸ್ ಸೆಟ್, ಕ್ಯಾಲ್ಕ್ಯುಲೇಟರ್, ಲಾಗ್ ಟೇಬಲ್, ಮಾರ್ಕರ್ಸ್ ಮತ್ತಿತರ ಎಲೆಕ್ಟ್ರಾನಿಕ್ ಉಪಕರಣಗಳನ್ನು ಹೊಂದಿರಬಾರದು. ಪರೀಕ್ಷಾ ಕೇಂದ್ರದ ಒಳಗಡೆ ಪರೀಕ್ಷಾ ಕಾರ್ಯಕ್ಕೆ ನಿಯೋಜಿಸಿದ ಸಿಬ್ಬಂದಿಗಳನ್ನು ಹೊರತುಪಡಿಸಿ ಅನ್ಯ ವ್ಯಕ್ತಿಗಳ ಪ್ರವೇಶವನ್ನು ನಿಷೇಧಿಸಲಾಗಿದೆ. ಅನರ್ಹ ಸಿಬ್ಬಂದಿಗಳು ಪರೀಕ್ಷಾ ಕೇಂದ್ರದ ಒಳಗೆ ಬರುವಂತಿಲ್ಲ ಹಾಗೂ ಪರೀಕ್ಷಾ ಕಾರ್ಯವನ್ನು ನಿರ್ವಹಿಸುವಂತಿಲ್ಲ ಎಂದು ಅವರು ಸೂಚಿಸಿದ್ದಾರೆ.
ವೇಳಾಪಟ್ಟಿ: ಸಿಇಟಿ ಪರೀಕ್ಷೆಯು ಮೇ 1,2ರಂದು ಬೆಳಗ್ಗೆ 10-30 ರಿಂದ ಮಧ್ಯಾಹ್ನ 3-50ರವರಗೆ ನಡೆಯಲಿದೆ. ಮೇ 1ರ ಬೆಳಗ್ಗೆ 10-30 ರಿಂದ 11-50ರವರೆಗೆ ಜೀವಶಾಸ್ತ್ರ, ಮಧ್ಯಾಹ್ನ 2-30 ರಿಂದ 3-50ರವರೆಗೆ ಗಣಿತಶಾಸ್ತ್ರ, ಮೇ 2ರಂದು ಬೆಳಗ್ಗೆ 10-30 ರಿಂದ ಮಧ್ಯಾಹ್ನ 11-50ರವರೆಗೆ ಭೌತಶಾಸ್ತ್ರ ಹಾಗೂ ಮಧ್ಯಾಹ್ನ 2-30 ರಿಂದ 3-50ರವರೆಗೆ ರಸಾಯನಶಾಸ್ತ್ರ ಪರೀಕ್ಷೆ ನಡೆಯಲಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

