ಬಳ್ಳಾರಿ

ನೀರಿಗಾಗಿ ಗುಂಡ್ಲುವದ್ದಿಗೇರಿ ಗ್ರಾಮಸ್ಥರ ನಿತ್ಯ ಪರದಾಟ

Published On :

ಹೊಸಪೇಟೆ: ತಾಲೂಕಿನ ಗುಂಡ್ಲುವದ್ದಿಗೇರಿ ಗ್ರಾಮದಲ್ಲಿ ಅನೇಕ ದಿನಗಳಿಂದಲೂ ಕುಡಿಯುವ ನೀರಿನ ಅಭಾವ ಕಾಣಿಸಿಕೊಂಡಿದ್ದು, ನೀರನ್ನು ತರಲು ಕಿ.ಮೀ. ದೂರ ಹೋಗುವಂಥ ಸ್ಥಿತಿ ನಿರ್ಮಾಣವಾಗಿದೆ.
ಗ್ರಾಮದಲ್ಲಿ ಕುಡಿಯುವ ನೀರಿನ ಅಭಾವವಿದ್ದರೂ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಸಮಸ್ಯೆ ಬಗೆಹರಿಸಲು ಮುಂದಾಗಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಗ್ರಾಮದಲ್ಲಿ ಕೊಳವೆ ಬಾವಿಗಳಿದ್ದರೂ ನಿಲ್ಲದ ವಿದ್ಯುತ್‌ನಿಂದ ಸಮರ್ಪಕ ನೀರು ಲಭ್ಯವಾಗುತ್ತಿಲ್ಲ. ಪದೇ ಪದೇ ವಿದ್ಯುತ್ ಕಡಿತ ಮಾಡುತ್ತಿರುವುದರಿಂದ ಗ್ರಾಮದಲ್ಲಿ ಕುಡಿಯುವ ನೀರಿನ ಸರಬರಾಜು ಆಗುತ್ತಿಲ್ಲ. ಮಕ್ಕಳಿಂದ ಹಿಡುದು ಮಹಿಳೆಯರು, ವಯೋವೃದ್ದರೂ, ಸುಡು ಬಿಸಿಲಿನಲ್ಲಿ ಬಹು ದೂರ ಹೋಗಿ ಕುಡಿಯಲು ನೀರು ತರುವ ಪರಿಸ್ಥಿತಿ ನಿರ್ಮಾಣವಾಗಿದೆ.
ಗ್ರಾಮದ ಹೊರಗಿನ ರಾಜ್ಯ ಹೆದ್ದಾರಿ(47)ಯಲ್ಲಿ ಇರುವ ಸಿಹಿ ನೀರಿನ ಪೈಪ್‌ನಿಂದ ನೀರು ತರಬೇಕಾಗಿದೆ. ರಸ್ತೆಯಲ್ಲಿ ಸಂಚರಿಸುವ ಭಾರಿ ವಾಹನಗಳ ಓಡಾಟ ಗ್ರಾಮಸ್ಥರಿಗೆ ಕಂಟಕಪ್ರಾಯವಾಗಿದೆ. ಇದರಿಂದ ಗ್ರಾಮಸ್ಥರು ಆತಂಕಕ್ಕೆ ಒಳಗಾಗಿದ್ದಾರೆ. ಬವಣೆಗೆ ಬಸವಳಿದ ಗ್ರಾಮಸ್ಥರು, ಜನಪ್ರತಿನಿಧಿ ಹಾಗೂ ಅಧಿಕಾರಿಗಳ ವಿರುದ್ಧ ಆಕ್ರೋಶವ್ಯಕ್ತಪಡಿಸಿದ್ದಾರೆ.
ಸಂಬಂಧ ಪಟ್ಟ ಅಧಿಕಾರಿಗಳು ಗ್ರಾಮಕ್ಕೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು ಎಂದು ಆಗ್ರಹಿಸಿದ್ದಾರೆ. ಸಮಸ್ಯೆ ಬಗೆಹರಿಯದಿದ್ದರೆ ರಾಜ್ಯ ಹೆದ್ದಾರಿ(47) ಬಂದ್ ಮಾಡಿ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.