ಮಕ್ಕಳಿಗೆ ಕಡ್ಡಾಯ ಶಿಕ್ಷಣ ನೀಡಿ: ನ್ಯಾ. ಮರಗೂರ
ಬಳ್ಳಾರಿ: ಯಾವುದೇ ಮಗುವು ಶಿಕ್ಷಣದಿಂದ ವಂಚಿತವಾಗಬಾರದು. ಶಾಲೆ ಬಿಟ್ಟ ಮಕ್ಕಳನ್ನು ಕಡ್ಡಾಯವಾಗಿ ಮರಳಿ ಶಾಲೆಗೆ ದಾಖಲಿಸಬೇಕು. ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆಯನ್ನು ವ್ಯವಸ್ಥಿತವಾಗಿ ಅನುಷ್ಠಾನಗೊಳಿಸಬೇಕೆಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಸಿ.ವಿ. ಮರಗೂರ ತಿಳಿಸಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಶಿಕ್ಷಣ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ನಗರದ ಬಿಡಿಎಎ ಮೈದಾನದ ಸಭಾಂಗಣದಲ್ಲಿ ಶನಿವಾರ ಏರ್ಪಡಿಸಿದ್ದ ಮಕ್ಕಳ ಅಪೌಷ್ಟಿಕತೆ ತಡೆಗಟ್ಟುವುದರ ಕುರಿತು ಸಮಗ್ರ ಕಾರ್ಯ ಯೋಜನೆ ಅನುಷ್ಠಾನ ಹಾಗೂ ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಶಾಲೆಗೆ ಕರೆತರುವ ಕುರಿತ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ 10,747 ಮಕ್ಕಳು ಶಾಲೆ ಬಿಟ್ಟಿದ್ದರು. ಅವರಲ್ಲಿ ಹಲವು ಕಾರಣಗಳಿಂದ 3377 ಮಕ್ಕಳು ಹೊರತುಪಡಿಸಿ ಉಳಿದ ಮಕ್ಕಳನ್ನು ಮರಳಿ ಶಾಲೆಗೆ ದಾಖಲಿಸಲಾಗಿದೆ. ಮಕ್ಕಳು ದೇಶದ ಆಸ್ತಿ, ಮಕ್ಕಳನ್ನು ಪೋಷಿಸಿ, ಸಂರಕ್ಷಿಸಿ ಪ್ರೀತಿಸಬೇಕು. ಮಗುವಿನ ಸರ್ವತೋಮುಖ ಬೆಳವಣಿಗೆಗೆ ಪೂರಕ ವಾತಾವರಣ ಒದಗಿಸಿ. ಯಾವುದೇ ಜಾತಿ, ವರ್ಗ, ಸಮುದಾಯದ ಮಗುವಾಗಿದ್ದರೂ ಲಿಂಗತಾರತಮ್ಯ ಮಾಡದೆ ಕಡ್ಡಾಯವಾಗಿ ಶಿಕ್ಷಣ ನೀಡಬೇಕು ಎಂದರು.
ಮುಖ್ಯ ನ್ಯಾಯಿಕ ದಂಡಾಧಿಕಾರಿ ನ್ಯಾ. ಎಂ.ಎಚ್. ಶಾಂತಾ, ಡಿವೈಎಸ್ಪಿ ಮುರುಗಣ್ಣನವರ್ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ವಕೀಲರ ಸಂಘದ ಅಧ್ಯಕ್ಷ ಪಾಟೀಲ್ ಸಿದ್ದಾರೆಡ್ಡಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಕಲಾದಗಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಮಾಧವರಾವ್ ಪಾಟೀಲ್, ಅಂಗನವಾಡಿ ಕಾರ್ಯಕರ್ತೆಯರು, ಶಿಕ್ಷಕರು, ಪೋಷಕರು ಇದ್ದರು. ಡಿಡಿಪಿಐ ವೀರಣ್ಣ ಜತ್ತಿ ಸ್ವಾಗತಿಸಿದರು. ಬಿಇಒ ವೃಷಭೇಂದ್ರ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

