ಬಳ್ಳಾರಿ

ಎಲ್‌ಎಲ್‌ಸಿಗೆ ನೀರು ಬಿಡುವಂತೆ ಆಗ್ರಹ

Published On :

ಬಳ್ಳಾರಿ: ಎಲ್‌ಎಲ್ ಕಾಲುವೆಯ ನೀರನ್ನು ಆಂಧ್ರಪ್ರದೇಶಕ್ಕೆ ನದಿಯ ಮೂಲಕ ಹರಿ ಬಿಟ್ಟಿದ್ದು, ನೀರಿನ ಸಮಸ್ಯೆಯಿಂದಾಗಿ ರೈತರು ತೊಂದರೆ ಎದುರಿಸುವಂತಾಗಿದೆ. ಎಲ್‌ಎಲ್ ಕಾಲುವೆಗೆ ತುಂಗಭದ್ರಾ ಜಲಾಶಯದಿಂದ ಸಮರ್ಪಕವಾಗಿ ನೀರು ಬಿಡುವಂತೆ ಒತ್ತಾಯಿಸಿ ಜಿಲ್ಲಾ ಬಿತ್ತನೆ ಬೀಜ, ರಸಗೊಬ್ಬರ ಮತ್ತು ಕ್ರಿಮಿನಾಶಕ ಮಾರಾಟಗಾರರ ಸಂಘದ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಿ, ಜಿಲ್ಲಾಡಳಿತಕ್ಕೆ ಮನವಿಪತ್ರ ಸಲ್ಲಿಸಿದರು.
ಎಲ್‌ಎಲ್ ಕಾಲುವೆಯ ಮೂಲಕ ಆಂಧ್ರಪ್ರದೇಶಕ್ಕೆ ನೀರನ್ನು ಹರಿಸಲಾಗುತ್ತಿದ್ದು, ಇದೀಗ ಹೊಳೆ (ನದಿ) ಮೂಲಕ 1200  ಕ್ಯುಸೆಕ್ ನೀರು ಬಿಡುಗಡೆ ಮಾಡಿರುವುದರಿಂದ ಕಾಲುವೆಯಲ್ಲಿ ನೀರು ಕಡಿತಗೊಂಡಿದ್ದು, ನೀರಿಲ್ಲದೆ ರೈತರು ಬೆಳೆದ ಬತ್ತ ಸೇರಿದಂತೆ ಇತರೆ ಬೆಳೆಗಳಿಗೆ ತೇವಾಂಶದ ಕೊರತೆಯಿಂದ ಸಮಸ್ಯೆ ಉಂಟಾಗುತ್ತದೆ. ಬೆಳೆ ನಷ್ಟದ ಭೀತಿ ಉಂಟಾಗಿದೆ. ಇದರಿಂದಾಗಿ ಸಾವಿರಾರು ಎಕರೆ ಪ್ರದೇಶದಲ್ಲಿ ಬೆಳೆದ ಬತ್ತ ಸೇರಿದಂತೆ ಇತರೆ ಬೆಳೆಗಳು ನಷ್ಟವಾಗಿ, ನೂರಾರು ಕೋಟಿ ರು. ನಷ್ಟ ಉಂಟಾಗಲಿದೆ ಎಂದು ಹೇಳಿದರು.
ಕಾಲುವೆ ಮೂಲಕ ರೈತರಿಗೆ ಸಮರ್ಪಕವಾಗಿ ನೀರೊದಗಿಸುವಂತೆ ಆಗ್ರಹಿಸಿ, ಹಲವು ಸಂದರ್ಭದಲ್ಲಿ ಅಧಿಕಾರಿಗಳಿಗೆ, ಸಂಬಂಧಪಟ್ಟ ಸಚಿವರಿಗೆ ಮನವಿ ನೀಡಿದರೂ ಪ್ರಯೋಜನವಾಗಿಲ್ಲ. ಕಾಲುವೆಗೆ ಹರಿಸುವ ನೀರನ್ನು ಏಕಾಏಕಿ ನಿಲ್ಲಿಸಿ, ನದಿ ಮೂಲಕ ನೀರು ಬಿಟ್ಟಿದ್ದಾರೆ. ಇದನ್ನು ಖಂಡಿಸಿ ರೈತ ಸಂಘಟನೆಗಳು ಪ್ರತಿಭಟನೆ ನಡೆಸಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರು ಸೇರಿದಂತೆ ಇತರರನ್ನು ಭೇಟಿ ಮಾಡಲಾಗಿದೆ. ಆದರೂ ಕ್ರಮ ಕೈಗೊಂಡಿಲ್ಲ ಎಂದು ಪ್ರತಿಭಟನಾ ನಿರತರು ದೂರಿದರು.
ಮುಂದಿನ ದಿನಗಳಲ್ಲಿ ರೈತರು ಸಾಕಷ್ಟು ಸಮಸ್ಯೆ ಎದುರಿಸುತ್ತಿದ್ದಾರೆ, ಮುಂದಿನ ಅನಾಹುತಕ್ಕೆ ತುಂಗಭದ್ರಾ ಜಲಾಶಯದ ಅಧಿಕಾರಿಗಳೆ ಹೊಣೆಗಾರರಾಗಲಿದ್ದಾರೆ ಎಂದು ತಿಳಿಸಿದರು. ಪ್ರತಿಭಟನೆಯಲ್ಲಿ ಸಂಘದ ಐಥಾನ ರೆಡ್ಡಿ, ಬಿ. ವೀರೇಶ್‌ಗೌಡ, ಎಚ್. ಲಕ್ಷ್ಮಿಕಾಂತರೆಡ್ಡಿ, ಎಚ್. ತಿಮ್ಮನಗೌಡ, ಜಿ. ಸಂಜೀವರೆಡ್ಡಿ, ಟಿ. ರಮಣ ರೆಡ್ಡಿ, ಎಂ. ವೀರನಗೌಡ, ಎಚ್.ವಿ. ಲಕ್ಷ್ಮಿರೆಡ್ಡಿ ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.