ಬಳ್ಳಾರಿ

ವಿದ್ಯಾರ್ಥಿಗಳಿಗೆ ಜಿಎಸ್‌ಎಸ್ ಆದರ್ಶ

Published On :

ಹೊಸಪೇಟೆ: ಭಿನ್ನಮತವನ್ನು ಇಟ್ಟುಕೊಂಡೇ ಪ್ರಜಾಪ್ರಭುತ್ವದಲ್ಲಿ ಗಾಢ ಸಂಬಂಧಗಳನ್ನು ಹೊಂದಲು ಸಾಧ್ಯವಿದೆ ಎನ್ನುವುದನ್ನು ರಾಷ್ಟ್ರಕವಿ ಡಾ.ಜಿ.ಎಸ್.ಶಿವರುದ್ರಪ್ಪ ತಮ್ಮ ಸಾಹಿತ್ಯದಲ್ಲಿ ಸಾರಿ ಹೇಳಿದ್ದಾರೆ ಎಂದು ಬಂಡಾಯ ಲೇಖಕ ಅಲ್ಲಮಪ್ರಭು ಬೆಟ್ಟದೂರು ಹೇಳಿದರು.
ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಡಾ.ಜಿ.ಎಸ್.ಶಿವರುದ್ರಪ್ಪನವರ ನೆನಪು ಹಣತೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಎಲ್ಲ ಕಾಲಕ್ಕೂ ಸಲ್ಲುವ ಬರಹವನ್ನು ನೀಡಿದ ಜಿಎಸ್‌ಎಸ್ ಮಾದರಿ ವ್ಯಕ್ತಿತ್ವ ಗಳಿಸಿಕೊಂಡಿದ್ದರು. ವಿದ್ಯಾರ್ಥಿ ಮತ್ತು ಅಧ್ಯಾಪಕರಿಗೆ ಜಿಎಸ್‌ಎಸ್ ಅವರ ಕರ್ತೃತ್ವ ಶಕ್ತಿ ಮತ್ತು ಕ್ರಿಯಾಶೀಲತೆ ಆದರ್ಶವಾಗಬೇಕಾದ ಅಗತ್ಯವಿದೆ ಎಂದರು.
ಥಿಯೋಸಾಫಿಕಲ್ ಮಹಿಳಾ ಕಾಲೇಜಿನ ನಿವೃತ್ತ ಪ್ರಾಚಾರ್ಯ ಪ್ರೊ.ಯು. ರಾಘವೇಂದ್ರರಾವ್ ಮಾತನಾಡಿದರು. ಕಾಲೇಜಿನ ಪ್ರಾಚಾರ್ಯ ಡಾ.ಕಡ್ಲಬಾಳ ಪನ್ನಂಗಧರ ಅಧ್ಯಕ್ಷತೆ ವಹಿಸಿದ್ದರು. ಲೇಖಕರಾದ ಡಾ.ಮೃತ್ಯುಂಜಯ ರುಮಾಲೆ, ಥಿಯೋಸಾಫಿಕಲ್ ಮಹಿಳಾ ಕಾಲೇಜಿನ ಪ್ರಾಚಾರ್ಯ ಡಾ.ಬಿ.ಮಂಜುಳಾ, ಕನ್ನಡ ವಿಭಾಗದ ಮುಖ್ಯಸ್ಥ ಮತ್ತು ಸಾಂಸ್ಕೃತಿಕ ಕಾರ್ಯದರ್ಶಿ ಡಾ.ಬಿ.ಜಿ.ಕನಕೇಶಮೂರ್ತಿ, ನಾವೀನ್ಯ ಕೂಟದ ಸಂಚಾಲಕ ಡಾ.ಕೆ.ವೆಂಕಟೇಶ್ ಭಾಗವಹಿಸಿದ್ದರು. ಡಾ.ಎಂ.ಕೆ.ಗದ್ದಿಗೇಶ್ ಸ್ವಾಗತಿಸಿದರು. ಡಿ.ಎಂ. ಮಲ್ಲಿಕಾರ್ಜುನಯ್ಯ ವಂದಿಸಿದರು. ಸುಷ್ಮಾ ಮಕಾಳಿ ಮತ್ತು ಎ.ವಿ. ಅಶ್ವಿನಿ ಜಿಎಸ್‌ಎಸ್ ಕಾವ್ಯಗಾಯನ ಕಾರ್ಯಕ್ರಮವನ್ನು ನಡೆಸಿಕೊಟ್ಟರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.