ಬಳ್ಳಾರಿ

ವಿದ್ಯೆಯಿಂದ ಸಮಾಜ, ದೇಶ ಅಭಿವೃದ್ಧಿ

Published On :

ಕನ್ನಡಪ್ರಭ ವಾರ್ತೆ, ಹೊಸಪೇಟೆ, ಫೆ. 9
ಪ್ರತಿಯೊಬ್ಬರು ವಿದ್ಯಾವಂತರಾದಾಗ ಮಾತ್ರ ಸಮಾಜ ಹಾಗೂ ದೇಶ ಅಭಿವೃದ್ಧಿ ಹೊಂದಲು ಸಾಧ್ಯ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರು ಉತ್ತಮ ವಿದ್ಯಾಭ್ಯಾಸ ಪಡೆದುಕೊಳ್ಳುವ ಮೂಲಕ ಪ್ರತಿಭಾವಂತರಾಗಿ ಸಮಾಜದಲ್ಲಿ ಗುರುತಿಸಿಕೊಳ್ಳಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಪಿ. ಸುನಂದಾ ಹೇಳಿದರು.
ಇಲ್ಲಿನ ಷಾಗಿರಿಧಾರಿ ಲಾಲ್ಜೀ ಶೇರಾಜೀ ಪಾಲರೇಚಾ ಮೆಮೋರಿಯಲ್ ಥಿಯೊಸಾಪಿಕಲ್ ಬಾಲಕಿಯರ ಪದವಿ ಪೂರ್ವ ಕಾಲೇಜಿನ ದಶಮಾನೋತ್ಸವ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸಮಾಜದ ಅಭಿವೃದ್ಧಿಗಾಗಿ ಮತ್ತು ಪ್ರತಿಯೊಬ್ಬರಿಗೂ ಶಿಕ್ಷಣ ಸುಲಭವಾಗಿ ದೊರೆಯಬೇಕು ಎನ್ನುವ ಉದ್ದೇಶದಿಂದ ಅನೇಕ ಖಾಸಗಿ ವಿದ್ಯಾಸಂಸ್ಥೆಗಳು ಶಾಲೆ-ಕಾಲೇಜುಗಳನ್ನು ತೆರೆದು ಗುಣಮಟ್ಟದ ಶಿಕ್ಷಣ ನೀಡಲು ಮುಂದಾಗಿದ್ದಾರೆ. ಥಿಯೋಸಾಪಿಕಲ್ ಸೊಸೈಟಿ ವಿದ್ಯಾಸಂಸ್ಥೆಯ ಕಾಲೇಜುಗಳಲ್ಲಿ ವಿದ್ಯಾಭ್ಯಾಸ ಮಾಡಿದ ಅನೇಕ ವಿದ್ಯಾರ್ಥಿಗಳು ಪ್ರತಿಭಾವಂತರಾಗಿ ವಿವಿಧ ಕ್ಷೇತ್ರಗಳಲ್ಲಿ ಉತ್ತಮ ಹುದ್ದೆಗಳನ್ನು ಪಡೆದುಕೊಂಡು ಸೇವೆ ಸಲ್ಲಿಸುತ್ತಿದ್ದಾರೆ. ತಮ್ಮ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡಿದ ವಿದ್ಯಾರ್ಥಿಗಳು ಉತ್ತಮ ಸ್ಥಾನ ಪಡೆದುಕೊಂಡಾಗ ವಿದ್ಯಾಸಂಸ್ಥೆಗಳಿಗೆ ಹಾಗೂ ಊರಿಗೆ ಕೀರ್ತಿ ಹೆಚ್ಚಿಸಿದಂತಾಗುತ್ತದೆ.
ಈ ನಿಟ್ಟಿನಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿಗಳು ತಮ್ಮ ಶಾಲಾ-ಕಾಲೇಜುಗಳಿಗೆ ಕೀರ್ತಿ ತರುವಂತ ಕಾರ್ಯದಲ್ಲಿ ತೊಡಗಿಕೊಳ್ಳುವ ಮೂಲಕ ಪ್ರತಿಭಾವಂತರಾಗಿ ಬೆಳೆಯಬೇಕು ಎಂದರು.
ಥಿಯೋಸಾಫಿಕಲ್ ಮಹಿಳಾ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಬಾಬುಲಾಲ್ ಜಿ. ಜೈನ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.
ಸ್ಥಳೀಯ ಮುಖಂಡರಾದ ಎಚ್. ವೆಂಕಟರಾವ್, ಜಿ. ಭರಮಲಿಂಗನಗೌಡ, ಅಶೋಕ್ ಜೀರೆ, ಅರಳಿ ಕೊಟ್ರಪ್ಪ, ರತನ್ ಚಂದ್, ಬಿಸಾಟಿ ಸೋಮಪ್ಪ, ಭೂಪಾಲ್ ರಾಘವೇಂದ್ರ ಶೆಟ್ಟಿ, ರಘೋತ್ತಮ, ಕಾಲೇಜಿನ ಪ್ರಾಚಾರ್ಯ ಪಿ.ಎಂ. ಜಗದೀಶ್ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ಭೂಪಾಲ್ ರಾಘವೇಂದ್ರ ಶೆಟ್ಟಿ ಸ್ವಾಗತಿಸಿದರು. ಪ್ರತಿಭಾ ವಂದಿಸಿದರು. ಸ್ಪಪ್ನ ನಿರೂಪಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.