ಬಳ್ಳಾರಿ: ಕೇಂದ್ರ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನ
ಕನ್ನಡಪ್ರಭ ವಾರ್ತೆ, ಬಳ್ಳಾರಿ, ಫೆ. 11
ನೆಹರು ಯುವ ಕೇಂದ್ರವು 2013-14ನೇ ಸಾಲಿಗಾಗಿ ರಾಷ್ಟ್ರೀಯ ಯುವದಳ ಕಾರ್ಯಕರ್ತರ ತಾತ್ಕಾಲಿಕ ಹುದ್ದೆಗೆ ಅರ್ಜಿ ಆಹ್ವಾನಿಸಿದೆ. ನಗರ ಮತ್ತು ಗ್ರಾಮೀಣ ಯುವಜನರಿಗಾಗಿ ಇರುವ ಕೇಂದ್ರ ಸರ್ಕಾರದ ಯುವಪರ ಕಾರ್ಯಕ್ರಮಗಳನ್ನು ಸಂಘಟಿಸುವ ಹಾಗೂ ಯುವಕ-ಯುವತಿ, ಮಹಿಳಾ ಮಂಡಳಿಗಳನ್ನು ರಚಿಸುವ ಕಾರ್ಯ ನಿರ್ವಹಿಸುವಂತಹವರು ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿದಾರರು ಕನಿಷ್ಠ ಎಸ್ಎಸ್ಎಲ್ಸಿ ಪಾಸಾಗಿರಬೇಕು. 18ರಿಂದ 25 ವರ್ಷ (ದಿ. 1-4-2014ಕ್ಕೆ )ರೊಳಗಿನವರಾಗಿರಬೇಕು. ಗ್ರಾಮೀಣ ಪ್ರದೇಶದ ಯುವತಿ, ಯುವಕ, ಮಹಿಳಾ ಮಂಡಳದ ಸದಸ್ಯರಿಗೆ, ಎನ್ಸಿಸಿ, ಎನ್ಎಸ್ಎಸ್, ಕ್ರೀಡೆ, ಸ್ಕೌಟ್ಸ್ ಮತ್ತು ಗೈಡ್ಸ್ನಲ್ಲಿದ್ದವರಿಗೆ ಹಾಗೂ ಪದವೀಧರರಿಗೆ ಆದ್ಯತೆ ನೀಡಲಾಗುವುದು. ಆಯ್ಕೆಯಾದವರಿಗೆ ಪ್ರವಾಸ ಭತ್ಯೆ ಸೇರಿ ಮಾಸಿಕ ರು. 2,500 ಗೌರವಧನ ಕೊಡಲಾಗುವುದು.
ಆಸಕ್ತರು ನೆಹರು ಯುವ ಕೇಂದ್ರಕ್ಕೆ ಖುದ್ದಾಗಿ ಬಂದು ನಿಗದಿತ ಅರ್ಜಿ ಪಡೆದು ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಫೆ. 15ರೊಳಗಾಗಿ ಯುವ ಸಮನ್ವಯಾಧಿಕಾರಿಗಳು, ನೆಹರು ಯುವಕೇಂದ್ರ, ಜಿಲ್ಲಾಧಿಕಾರಿಗಳ ಕಚೇರಿ ಆವರಣ, ಬಳ್ಳಾರಿ ಇವರ ಕಚೇರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08392-276839 ಅಥವಾ ಢಿಢಿಢಿ.ಟಿಣ್ಞಡ.್ಟ್ಠ್ಜ ಅಥವಾ ಢಿಢಿಢಿ.ಣಛಡ.ಟ್ಝ್ಛಿ.್ಝಟಿ ಅನ್ನು ಸಂಪರ್ಕಿಸಬೇಕೆಂದು ಯುವ ಸಮನ್ವಯಾಧಿಕಾರಿ ಡಿ. ದಯಾನಂದ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

