ಬಳ್ಳಾರಿ

ರು. 25 ಲಕ್ಷದ ಆಧುನಿಕ ಜಿಮ್ ನಿರ್ಮಾಣ

Published On :

ಹಗರಿಬೊಮ್ಮನಹಳ್ಳಿ: ತಾಲೂಕು ಕೇಂದ್ರ ಸ್ಥಾನದಲ್ಲಿ ಅತ್ಯಾಧುನಿಕ ಸೌಲಭ್ಯ ಒಳಗೊಂ್ಘ ಜಿಮ್ ತೆರೆಯಲು ಸರ್ಕಾರ ರು. 25 ಲಕ್ಷ ಅನುದಾನ ನೀಡುತ್ತಿದೆ. ಯಾವ ಪ್ರದೇಶದಲ್ಲಿ ಸರ್ಕಾರಿ ಜಿಮ್ ಇಲ್ಲವೋ ಅಲ್ಲಿ ಜಿಮ್ ನಿರ್ಮಿಸುವ ಅವಕಾಶವಿದ್ದು, ಪಟ್ಟಣದಲ್ಲೂ ಆಧುನಿಕ ಜಿಮ್ ತೆರೆಯುವ ಮೂಲಕ ಯುವಕರಿಗೆ ಜಿಮ್ ಸೌಲಭ್ಯ ಕಲ್ಪಿಸಲಾಗುವುದು ಎಂದು ಹರಪ್ಪನಹಳ್ಳಿ ಶಾಸಕ ಎಂ.ಪಿ. ರವೀಂದ್ರ ಭರವಸೆ ನೀಡಿದರು. ಸೋಮವಾರ ರಾತ್ರಿ ಪಟ್ಟಣದ ಗುರುಭವನದಲ್ಲಿ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ದೇಹದಾರ್ಢ್ಯ ಸ್ಪರ್ಧೆಗೆ ಚಾಲನೆ ನೀಡಿ ಮಾತನಾಡಿ, ಇದಕ್ಕಾಗಿ ಇಲ್ಲಿನ ಶಾಸಕರ ಜತೆ ಚರ್ಚೆ ಮಾಡಿ ಜಿಮ್ ತೆರೆಯಲು ರೂಪರೇಷೆ ತಯಾರಿಸಲು ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಸೂಚಿಸುವುದಾಗಿ ಹೇಳಿದರು.  ಎಂ.ಪಿ. ಪ್ರಕಾಶ ಅವರು ಕಲೆ, ಸಾಹಿತ್ಯದ ಜತೆಯಲ್ಲಿ ಕುಸ್ತಿ, ದೇಹದಾರ್ಢ್ಯ, ಮಲ್ಲಕಂಬಗಳಿಗೆ ಸದಾಕಾಲ ಪ್ರೋತ್ಸಾಹ ನೀಡುತ್ತಿದ್ದರು. ಮುಂದಿನ ದಿನಗಳಲ್ಲಿ ಪ್ರಕಾಶ್ ಅವರ ಹೆಸರಿನಲ್ಲಿ ರಾಜ್ಯದ್ಯಾಂತ ದೇಹದಾರ್ಢ್ಯ ಹಾಗೂ ಕುಸ್ತಿ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗುವುದೆಂದರು. ಸ್ಥಳೀಯ ಶಾಸಕ ಎಸ್. ಭೀಮಾನಾಯ್ಕ ಅಧ್ಯಕ್ಷತೆ ವಹಿಸಿದ್ದರು. ತಾಪಂ ಅಧ್ಯಕ್ಷೆ ವಿಜಯಲಕ್ಷ್ಮಿ ಪೂರ್ಯನಾಯ್ಕ, ಜಿಪಂ ಸದಸ್ಯ ರೋಗಾಣಿ ಹುಲುಗಪ್ಪ, ಹೂಗಾರ ಮಲ್ಲಣ್ಣ, ಜೆಡಿಎಸ್ ಅಧ್ಯಕ್ಷ ವೈ. ಮಲ್ಲಿಕಾರ್ಜುನ, ಸಾಲಿ ಸಿದ್ದಯ್ಯಸ್ವಾಮಿ, ಎಸ್. ವೆಂಕಟೇಶ, ತಾಪಂ ಸದಸ್ಯ ಉಪ್ಪಾರ ಬಾಲಪ್ಪ, ಬಂಗಾರಿ ಗಾಳಿರಾಜ ಸೇರಿದಂತೆ ಹಲವರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.