16ರಿಂದ ಬಿಇಡಿ ಕಾಲೇಜು ಸುವರ್ಣ ಮಹೋತ್ಸವ
ಬಳ್ಳಾರಿ: 50 ವರ್ಷಗಳಿಂದ ಈ ಭಾಗದ ಶಿಕ್ಷಕ ವಿದ್ಯಾರ್ಥಿಗಳಿಗೆ ಆಶಾಕಿರಣವಾಗಿರುವ ಕೊಟ್ಟೂರುಸ್ವಾಮಿ ಶಿಕ್ಷಣ ಮಹಾವಿದ್ಯಾಲಯ ಸುವರ್ಣ ಮಹೋತ್ಸವ ಕಾರ್ಯಕ್ರಮ ಫೆ. 16 ಮತ್ತು 17ರಂದು ಎಸ್.ಜಿ. ಪ್ರೌಢಶಾಲಾ ಮೈದಾನದಲ್ಲಿ ಏರ್ಪಡಿಸಲಾಗಿದೆ ಎಂದು ವೀವಿ ಸಂಘದ ಅಧ್ಯಕ್ಷ ಗುರುಬಸವರಾಜ ತಿಳಿಸಿದರು.
ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 1963ರಲ್ಲಿ ಆರಂಭವಾದ ಈ ಶಿಕ್ಷಣ ಮಹಾವಿದ್ಯಾಲಯ 5500 ವಿದ್ಯಾರ್ಥಿಗಳನ್ನು ಶಿಕ್ಷಕರನ್ನಾಗಿ ರೂಪಿಸಿದೆ ಎಂದ ಅವರು, ಫೆ. 16ರಂದು ಬೆಳಗ್ಗೆ 10.30ಕ್ಕೆ ಕಾರ್ಯಕ್ರಮ ನಡೆಯಲಿದ್ದು, ಕೊಟ್ಟೂರುಸ್ವಾಮಿ ಮಠದ ಸಂಗನಬಸವ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಹೈಕೋರ್ಟ್ನ ನಿವೃತ್ತ ನ್ಯಾಯಾಧೀಶ ಎನ್.ವೈ. ಹನುಮಂತಪ್ಪ ಕಾರ್ಯಕ್ರಮ ಉದ್ಘಾಟಿಸಲಿದ್ದು, ಶಾಸಕ ಅನಿಲ್ ಲಾಡ್ ಸ್ಮರಣ ಸಂಚಿಕೆ ಬಿಡುಗಡೆ ಮಾಡಲಿದ್ದಾರೆ. ವೀವಿ ಸಂಘದ ಅಧ್ಯಕ್ಷ ಅಲ್ಲಂ ಗುರುಬಸವರಾಜ್ ಅಧ್ಯಕ್ಷತೆ ವಹಿಸುವರು. ಎಂಎಲ್ಸಿ ಮೃತ್ಯುಂಜಯ ಜಿನಗಾ, ಮಾಜಿ ಸಂಸದ ಕೋಳೂರು ಬಸವನಗೌಡ, ಗುಲ್ಬರ್ಗ ಕಾಲೇಜು ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕ ಆರ್.ಪಿ. ಶಂಕರ್, ಅಲ್ಲಂ ದೊಡ್ಡಪ್ಪ ಭಾಗವಹಿಸಲಿದ್ದಾರೆ ಎಂದರು.
ಅಂದು ಮಧ್ಯಾಹ್ನ 3ಕ್ಕೆ ಹಳೆ ವಿದ್ಯಾರ್ಥಿಗಳ ಸಮ್ಮಿಲನ ಕಾರ್ಯಕ್ರಮ ಹಾಗೂ ಸನ್ಮಾನ ಸಮಾರಂಭ ನಡೆಯಲಿದೆ. ಕಲ್ಯಾಣ ಸ್ವಾಮೀಜಿ, ಹರಗಿನಡೋಣಿ ಸಿದ್ಧಲಿಂಗ ಮಹಾಸ್ವಾಮೀಜಿ ಕಾರ್ಯಕ್ರಮದ ಸಾನ್ನಿಧ್ಯ ವಹಿಸುವರು. ವೀವಿ ಸಂಘದ ಕೋಶಾಧಿಕಾರಿ ಸಂಗನಕಲ್ ಹಿಮಂತರಾಜ್ ಅಧ್ಯಕ್ಷತೆ ವಹಿಸಲಿದ್ದಾರೆ. ಸಂಜೆ 6ಕ್ಕೆ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ವೀ.ವಿ. ಸಂಘದ ಸಹ ಕಾರ್ಯದರ್ಶಿ ಜೆ.ಎಸ್. ನೇಪಾಕ್ಷಪ್ಪ ಅಧ್ಯಕ್ಷತೆ ವಹಿಸಲಿದ್ದು, ಕೊಪ್ಪಳದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಟಿ. ಕೊಟ್ರಪ್ಪ ಭಾಗವಹಿಸಲಿದ್ದಾರೆ. ಕಾಲೇಜು ಪ್ರಶಿಕ್ಷಣಾರ್ಥಿಗಳಿಂದ ಮುದ್ದಣ್ಣನ ಪ್ರಮೋಷನ್ ಪ್ರಸಂಗ ನಾಟಕ ಪ್ರದರ್ಶನ, ನಾಟಕದ ನಂತರ ಗಂಗಾವತಿ ಪ್ರಾಣೇಶ್ ಹಾಗೂ ಸಂಗಡಿಗರಿಂದ ನಗೆಹಬ್ಬ ಕಾರ್ಯಕ್ರಮ ನಡೆಯಲಿದೆ ಎಂದರು.
ಫೆ. 17ರಂದು ಬೆಳಗ್ಗೆ 10ಕ್ಕೆ ಶಿಕ್ಷಣಗೋಷ್ಠಿ ನಡೆಯಲಿದ್ದು, ಕಾರ್ಮಿಕ ಸಚಿವ ಪಿ.ಟಿ. ಪರಮೇಶ್ವರ ನಾಯ್ಕ ಉದ್ಘಾಟಿಸುವರು. ಸಂಘದ ಕಾರ್ಯದರ್ಶಿ ಎಚ್.ಎಂ. ಗುರುಸಿದ್ದಸ್ವಾಮಿ ಅಧ್ಯಕ್ಷತೆ ವಹಿಸಲಿದ್ದಾರೆ. ಬೆಳಗ್ಗೆ 11.30ಕ್ಕೆ ಬಿಜಾಪುರ ಜ್ಞಾನಯೋಗಾಶ್ರವುದ ಸಿದ್ಧೇಶ್ವರ ಸ್ವಾಮೀಜಿ ಅವರ ಜ್ಞಾನ ದಾಸೋಹ ಕಾರ್ಯಕ್ರಮ ನಡೆಯಲಿದೆ. ಮಧ್ಯಾಹ್ನ 3ಕ್ಕೆ ಶಾಲಾ ಮಕ್ಕಳ ಮಾನಸಿಕ ಸಮಸ್ಯೆಗಳ ಕುರಿತು ಎರಡನೇ ಶಿಕ್ಷಣ ಗೋಷ್ಠಿ ನಡೆಯಲಿದೆ. ಸಂಘದ ಉಪಾಧ್ಯಕ್ಷ ಕೆ.ಎಂ. ಮಹೇಶ್ವರಸ್ವಾಮಿ ಅಧ್ಯಕ್ಷತೆ ವಹಿಸಲಿದ್ದಾರೆ. ಮನೋವೈದ್ಯ ಡಾ. ವಿರೂಪಾಕ್ಷ ದೇವರಮನೆ ಉಪನ್ಯಾಸ ನೀಡುವರು.
ಸಂಜೆ 6ಕ್ಕೆ ಸಮಾರೋಪ ನಡೆಯಲಿದೆ. ಮೈಸೂರಿನ ಶ್ರೀ ರಾಮಕೃಷ್ಣ ಆಶ್ರಮದ ಅಧ್ಯಕ್ಷ ಸ್ವಾಮಿ ಮುಕ್ತಿದಾನಂದಜಿ ಸಾನ್ನಿಧ್ಯ ವಹಿಸಲಿದ್ದು, ವೀವಿ ಸಂಘದ ಅಧ್ಯಕ್ಷ ಅಲ್ಲಂ ಗುರುಬಸವರಾಜ್ ಅಧ್ಯಕ್ಷತೆ ವಹಿಸುವರು. ವಿಎಸ್ಕೆ ವಿವಿ ಕುಲಪತಿ ಡಾ. ಮಂಜಪ್ಪ ಹೊಸಮನೆ ಸಮಾರೋಪ ಭಾಷಣ ಮಾಡಲಿದ್ದಾರೆ. ಮಾಜಿ ಸಂಸದ ಕೆ.ಸಿ. ಕೊಂಡಯ್ಯ, ಸಂಸ್ಕೃತಿ ಇಲಾಖೆ ನಿರ್ದೇಶಕ ಬಿ. ನಾಗರಾಜ್ ಭಾಗವಹಿಸಲಿದ್ದಾರೆ ಎಂದರು.
ಸಂಘದ ಕಾರ್ಯದರ್ಶಿ ಗುರುಸಿದ್ದಸ್ವಾಮಿ, ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ಜಾನೆಕುಂಟೆ ಸಣ್ಣ ಬಸವರಾಜ್, ನಿವೃತ್ತ ಪ್ರಾಚಾರ್ಯ ರಾಜಶೇಖರ್, ಪ್ರಾಚಾರ್ಯ ಸತೀಶ್ ಹಿರೇಮಠ್, ನೇಪಾಕ್ಷಪ್ಪ, ಸಂಗನಕಲ್ ಹಿಮಂತರಾಜ್, ಬಿ.ವಿ. ಬಸವರಾಜ್, ಕೊಟ್ರಯ್ಯ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

